ಲೋಕಸಭೆಯಲ್ಲಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ವರೆಗೂ ನಾವು ನಡೆಸುತ್ತಿರುವ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಭಾರತೀಯ ಕಿಸಾನ್ ಸಂಘದ ಮುಖಂಡ ರಾಕೇಶ್ ಟಿಕಾಯತ್ ತಿಳಿಸಿದರು.
ಕೇಂದ್ರ ಸರ್ಕಾರ ರೈತರು ವಿರೋಧಿಸುತ್ತಿದ್ದ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಲಿದೆ ಎಂದು ಪ್ರಧಾನಿ ಮೋದಿ ಘೋಷಿಸಿದ ನಂತರ ಟಿಕಾಯತ್ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ.
ನಾವು ಯಾವುದೇ ಕಾರಣಕ್ಕೂ ಪ್ರತಿಭಟನೆ ನಡೆಸುವುದನ್ನು ನಿಲ್ಲಿಸುವುದಿಲ್ಲ ಲೋಕಸಭೆಯಲ್ಲಿ ಕೃಷಿ ಕಾಯ್ದೆಯನ್ನು ರದ್ದುಗೊಳಿಸುವ ತನಕ ಕಾಯುತ್ತೇವೆ. ಲೋಕಸಭೆಯಲ್ಲಿ ಮೂರು ಕೃಷಿ ಮಸೂದೆಗಳು ರದ್ದುಗೊಳಿಸಿದ ನಂತರ ನಾವು ಪ್ರತಿಭಟನೆಯನ್ನು ಕೊನೆಗೊಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.