(Alcohol:) ರಾಜ್ಯದಲ್ಲಿ ಅಬಕಾರಿ ಇಲಾಖೆ ಆದಾಯ ನಿರೀಕ್ಷಿತ ಪ್ರಮಾಣಕ್ಕಿಂತ ಹೆಚ್ಚು ಗಳಿಕೆಯಾಗಿದೆ. ಹೀಗಾಗಿ ಪ್ರೀಮಿಯಂ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ನಡೆಸಲಾಗಿದ್ದು, ಈ ಕುರಿತು ಚರ್ಚೆ ನಡೆಸಿ ಶೀಘ್ರದಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯದ SC, ST ಸಮುದಾಯದವರ ಗಮನಕ್ಕೆ; ಇಲ್ಲಿದೆ ನಿಮಗೆ ಮುಖ್ಯ ಮಾಹಿತಿ
ಪ್ರಸಕ್ತ ಆರ್ಥಿಕ ವರ್ಷದ ಮೊದಲೆರಡು ತ್ರೈಮಾಸಿಕದಲ್ಲಿ ನಿರೀಕ್ಷಿತ ಪ್ರಮಾಣಕ್ಕಿಂತ ಹೆಚ್ಚಿನ ಆದಾಯ ಗಳಿಕೆಯಾಗಿದೆ. ಈ ಅವಧಿಯಲ್ಲಿ 16,290 ಕೋಟಿ ರು. ಆದಾಯದ ನಿರೀಕ್ಷೆಯಿತ್ತು. ಆದರೆ, 16,358 ಕೋಟಿ ರು. ಆದಾಯ ಬಂದಿದ್ದು, 68.78 ಕೋಟಿ ರು. ಹೆಚ್ಚಿನ ಆದಾಯ ಬಂದಿದೆ ಎಂದು ಹೇಳಿದರು.
ಇದನ್ನೂ ಓದಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ; 4 ಲಕ್ಷ ಸಹಾಯಧನ
ಅಬಕಾರಿ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ಇಲಾಖೆಯಲ್ಲಿ ಮೊದಲ ಬಾರಿಗೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ಇಲಾಖೆಯಲ್ಲಿ ಡಿಜಿಟಲ್ ವ್ಯವಸ್ಥೆ ಜಾರಿ ಮಾಡಲಾಗುತ್ತಿದೆ. 5 ವರ್ಷಕ್ಕೊಮ್ಮೆ ಆನ್‌ಲೈನ್ ಮೂಲಕ ಪರವಾನಗಿ ನವೀಕರಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಿಎಲ್ ಪರವಾನಗಿ ಹಂತಗಳನ್ನು ಕಡಿತಗೊಳಿಸಲಾಗಿದೆ. ಇದೀಗ ಪ್ರೀಮಿಯಂ ಬ್ರಾಂಡ್‌ನ ಮದ್ಯಗಳ ಬೆಲೆ ಇಳಿಕೆಗೂ ಚಿಂತನೆ ನಡೆಸಲಾಗಿದೆ ಎಂದರು.

ಇತ್ತೀಚಿನ ಜನಪ್ರಿಯ ಸುದ್ದಿಗಳು (Alcohol:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





