Ambulance Service: ರಾಜ್ಯ ಸರ್ಕಾರದಿಂದಲೇ 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್!

(Ambulance Service:) ರಾಜ್ಯದಲ್ಲಿ ಆರೋಗ್ಯ ಕವಚ ಸೇವೆಯನ್ನು ಬಲಪಡಿಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು 3691 ಹುದ್ದೆಗಳ ಸೃಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ನ್ನೂ ಓದಿ: 10th ಹಾಗೂ PUC ಪಾಸ್‌ ಆದವರಿಗೆ ಜಾಬ್‌ ಆಫರ್; ಆಕರ್ಷಕ ಸಂಬಳ


ಹೌದು, ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ, ಈ ಸೇವೆಯನ್ನು ನಿಯಂತ್ರಣ ಮಾಡುವ ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸುವ ಮೂಲಕ ‘ಆರೋಗ್ಯ ಕವಚ’ ಸೇವೆಯನ್ನು ಬಲಪಡಿಸಲಾಗುವುದು ಎಂದು ಘೋಷಿಸಿದೆ.

ಕೇಂದ್ರಿಕೃತ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್, ಜಿಲ್ಲಾ ಕಂಟ್ರೋಲ್ ರೂಮ್ ಸ್ಥಾಪಿಸಲು ಹಾಗೂ ಆಂಬ್ಯುಲೆನ್ಸ್ ನಿರ್ವಹಣೆಗೆ ಬೇಕಾದ ಅಗತ್ಯ ಮಾನವ ಸಂಪನ್ಮೂಲವನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆಯುವುದಾಗಿ ಪ್ರಸ್ತಾಪಿಸಲಾಗಿರುತ್ತದೆ. ಅಗತ್ಯ ಮಾನವ ಸಂಪನ್ಮೂಲವನ್ನು ಪಡೆಯಲು ಪ್ರತ್ಯೇಕ ಪ್ರಸ್ತಾವನೆಯನ್ನು ಸಲ್ಲಿಸಬೇಕಾಗಿರುತ್ತದೆ. ಅದರಂತೆ ಮಾನವ ಸಂಪನ್ಮೂಲಗಳ, ಅವರ ವಿದ್ಯಾರ್ಹತೆ, ಅನುಭವ, ನೇಮಕಾತಿಯ ವಿಧಾನ, ಆಂಬ್ಯುಲೆನ್ಸ್ ಮತ್ತು ಕಂಟ್ರೋಲ್ ಕೇಂದ್ರಕ್ಕೆ ಅನುಗುಣವಾಗಿ ಅಂದಾಜಿಸಲಾಗಿದೆ ಎಂದು ತಿಳಿಸಿದೆ.


ನ್ನೂ ಓದಿ: ಜಾಗ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್; ಮುಲಾಜಿಲ್ಲದೆ ತೆರವು ಮಾಡುವಂತೆ CM ಸಿದ್ದರಾಮಯ್ಯ ಸೂಚನೆ!


(Ambulance Service:) ರಾಜ್ಯದಲ್ಲಿ ಮೊದಲ ಬಾರಿಗೆ ಅನುಷ್ಠಾನ:
ರಾಜ್ಯದಲ್ಲಿ ಮೊದಲನೇ ಬಾರಿಗೆ 108-ಆರೋಗ್ಯ ಕವಚ ಹಾಗೂ 104-ಆರೋಗ್ಯ ಸಹಾಯವಾಣಿ ಕಾರ್ಯಕ್ರಮವನ್ನು ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗಿದ್ದು, ಪ್ರಾಥಮಿಕ ಹಂತದಲ್ಲಿ ಅನುಷ್ಠಾನಗೊಳಿಸಲು ಅಂದಾಜಿಸಲಾದ ಮಾನವ ಸಂಪನ್ಮೂಲವನ್ನು ಪ್ರಸ್ತಾಪಿಸಲಾಗಿದೆ. ತುರ್ತು ವೈದ್ಯಕೀಯ ಸೇವೆಗಳ ನಿರ್ದೇಶನಾಲಯ / ಕೇಂದ್ರ ಸ್ಥಾಪಿಸಿದ ಹಾಗೂ ಕಾರ್ಯಕ್ರಮವನ್ನು ಅನುಷ್ಠಾನಗೊಂಡ ನಂತರ ಅವಶ್ಯಕತೆಗೆ ಅನುಗುಣವಾಗಿ ಈ ಮಾನವ ಸಂಪನ್ಮೂಲವನ್ನು ಹಾಗೂ ಇದಕ್ಕೆ ಅವಶ್ಯಕ ಅನುದಾನ ಪ್ರಸ್ತಾವನೆಗೆ ಆಡಳಿತಾತ್ಮಕ ಅನುಮೋದನೆ ಕೋರಲಾಗಿದೆ.

Ambulance Service: ರಾಜ್ಯ ಸರ್ಕಾರದಿಂದಲೇ 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್!
Ambulance Service: ರಾಜ್ಯ ಸರ್ಕಾರದಿಂದಲೇ 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್!

ನ್ನೂ ಓದಿ: 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಣೆ; ಏನಿರಲಿದೆ? ಆಹಾರ ಕಿಟ್’ನಲ್ಲಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (Ambulance Service:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ