Anganawadi Worker: ಮಹಿಳೆಯರಿಗೆ ಉದ್ಯೋಗದ ಸುವರ್ಣಾವಕಾಶ

Anganawadi Worker: ಕರ್ನಾಟಕದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಗ್ರಾಮೀಣ ಮಟ್ಟದಲ್ಲಿ ಅಪೌಷ್ಟಿಕತೆ, ಆರೋಗ್ಯ ಮತ್ತು ಶಾಲಾಪೂರ್ವ ಶಿಕ್ಷಣಕ್ಕಾಗಿ ಕಾರ್ಯನಿರ್ವಹಿಸುತ್ತಾರೆ. 12ನೇ ತರಗತಿ/ಡಿಪ್ಲೊಮ (ಕಾರ್ಯಕರ್ತೆ) ಅಥವಾ 10ನೇ ತರಗತಿ (ಸಹಾಯಕಿ) ವಿದ್ಯಾರ್ಹತೆ ಹೊಂದಿರಬೇಕು. 19-35 ವರ್ಷದ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು, ಮತ್ತು ಸ್ಥಳೀಯ ನಿವಾಸಿಗಳಿಗೆ ಆದ್ಯತೆ ನೀಡಲಾಗುತ್ತದೆ.

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಸಿಹಿ ಸುದ್ದಿಯೊಂದನ್ನು ನೀಡಿದೆ. ಮಗುವಿಗೆ ಪೌಷ್ಟಿಕಾಂಶ ಮತ್ತು ಶಿಕ್ಷಣ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಇದರ ಸಂಪೂರ್ಣ ಮಾಹಿತಿ ಲೇಖನದಲ್ಲಿದೆ.


ನ್ನೂ ಓದಿ: 6 ತಿಂಗಳು ಇಂತಹವರ ರೇಷನ್‌ ಕಾರ್ಡ್‌ ಕ್ಯಾನ್ಸಲ್‌; ಕಾರಣವೇನು ಗೊತ್ತಾ…?


ಅರ್ಹ ಮಹಿಳಾ ಅಭ್ಯರ್ಥಿಗಳು ತಮ್ಮ ಮನೆಯಲ್ಲೇ ಕುಳಿತು ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ತಮಗೆ ಬೇಕಾದ ಅಗತ್ಯ ದಾಖಲೆಗಳು ಮತ್ತು ವಯೋಮಿತಿಯ ಬಗ್ಗೆ ಸ್ಪಷ್ಟ ಮಾಹಿತಿ ಹೊಂದಿರಬೇಕು.

ಕರ್ತವ್ಯಗಳು:
3-6 ವರ್ಷದ ಮಕ್ಕಳಿಗೆ ಶಾಲಾಪೂರ್ವ ಶಿಕ್ಷಣ, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ವಿತರಣೆ, ಆರೋಗ್ಯ ತಪಾಸಣೆ ಮತ್ತು ಲಸಿಕೆ ಕಾರ್ಯಕ್ರಮಗಳಲ್ಲಿ ಸಹಾಯ ಮಾಡುವುದು.

ಅರ್ಹತೆಗಳು:
* ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಬಹುದು.
* ಕನಿಷ್ಠ 19 ಮತ್ತು ಗರಿಷ್ಠ 35 ವಯೋಮಿತಿ ಹೊಂದಿರಬೇಕು.
* ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 12ನೇ ತರಗತಿ ಅಥವಾ ತತ್ಸಮಾನ (PUC) ಪಾಸಾಗಿರಬೇಕು.
* ಕನ್ನಡ ಭಾಷೆಯ ಜ್ಞಾನ ಅತ್ಯಗತ್ಯ.


ನ್ನೂ ಓದಿ: 10th ಪಾಸ್‌ ಆದವರಿಗೆ ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 12,000 ದಿಂದ ಸಂಬಳ


ಅಗತ್ಯ ದಾಖಲೆಗಳು:
* ಆಧಾರ್‌ ಕಾರ್ಡ್(‌Aadhaar Card)
* SSLC ಅಂಕಪಟ್ಟಿ(SSLC Marks List)
* ವಿದ್ಯಾರ್ಹತೆಯ ಪ್ರಮಾಣ ಪತ್ರಗಳು(Qualification Certificates)
* ವಾಸಸ್ಥಳ ದೃಢೀಕರಣ ಪತ್ರ(Residence Proof)
* ಜಾತಿ ಆದಾಯ ಪ್ರಮಾಣ ಪತ್ರ(Caste Income Certificate)
* ಪೋಟೋ(Photo)
* ವಿಕಲಚೇತನರಾಗಿದ್ದಲ್ಲಿ ಸಂಬಂಧಿತ ಪ್ರಮಾಣ ಪತ್ರ(Relevant certificate if disabled)

Anganawadi Worker: ಮಹಿಳೆಯರಿಗೆ ಉದ್ಯೋಗದ ಸುವರ್ಣಾವಕಾಶ
Anganawadi Worker: ಮಹಿಳೆಯರಿಗೆ ಉದ್ಯೋಗದ ಸುವರ್ಣಾವಕಾಶ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಇತ್ತೀಚಿನ ಜನಪ್ರಿಯ ಸುದ್ದಿಗಳು (Anganawadi Worker:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ