anganwadis:ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್

ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್

(anganwadis:) ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಚರ್ಚೆ:(anganwadis:)

2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಪಾವತಿ ಮಾಡುವ ಕುರಿತು, ಅಂಗನವಾಡಿಯ ವಿವಿಧ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ಚರ್ಚೆ ನಡೆಸಿದರು.


ನ್ನೂ ಓದಿ: ಟೆಸ್ಲಾ ಪ್ರಿಯರಿಗೆ ಬಂಪರ್ ಸುದ್ದಿ; ಭಾರತಕ್ಕೆ ಬರುತ್ತಿದೆ ಎರಡು ಹೊಸ ಕಾರುಗಳು, ಮಾರಾಟ ಯಾವಾಗ?


ಗೌರವಧನ ಹೆಚ್ಚಳ, ನಿವೃತ್ತಿಯಾದ ಎಲ್ಲರಿಗೂ ಗ್ರ್ಯಾಚುಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಗಳು ಒತ್ತಾಯಿಸುತ್ತಾ ಬಂದಿವೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ‌ ಜೊತೆ ಚರ್ಚೆ ನಡೆಸಿ‌‌ ಬೇಡಿಕೆಗಳ ಈಡೇರಿಕೆಗೆ ಕ್ರಮವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಈಗಾಗಲೇ ಸರ್ಕಾರ 2023-24ನೇ ಸಾಲಿನ ಆರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ನಿವೃತ್ತಿ ಬಳಿಕ ಗ್ರ್ಯಾಚ್ಯುಟಿಗೆ ಆಡಳಿತಾತ್ಮಕ ಅನುಮತಿ ನೀಡಲಾಗಿದೆ. ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಸಂಘಟನೆಗಳ ಬೇಡಿಕೆಯಂತೆ 2011ರಿಂದ ಗ್ರ್ಯಾಚ್ಯುಟಿ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.

anganwadis:ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್
anganwadis:ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್