Anna Bhagya Scheme 2026: BPL ಕಾರ್ಡುದಾರರಿಗೆ ಬಂಪರ್ ಗಿಫ್ಟ್

(Anna Bhagya Scheme 2026:) ರಾಜ್ಯದ ಬಿಪಿಎಲ್ ಕಾರ್ಡ್​​​ದಾರರಿಗೆ ನೆರವಾಗುವ ಉದ್ದೇಶದಿಂದ ಕರ್ನಾಟಕ ಸರ್ಕಾರ 2026ರ ಬಜೆಟ್‌ನಲ್ಲಿ ಮಹತ್ವದ ಹೊಸ ಯೋಜನೆಯನ್ನು ಘೋಷಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ, ಅನ್ನಭಾಗ್ಯ ಯೋಜನೆಯಲ್ಲಿ ಮಹತ್ವದ ಬದಲಾವಣೆಯನ್ನು ಪ್ರಕಟಿಸಲಾಗಿದೆ.


ಇದನ್ನೂ ಓದಿ: ಆರೋಗ್ಯ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ; ಪಿಯುಸಿ ಆಗಿದ್ರೆ ಸಾಕು, 15,397 ಸಂಬಳ


ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಸುಮಾರು 4.54 ಕೋಟಿ ಬಡ ಫಲಾನುಭವಿಗಳಿಗೆ ಈಗಾಗಲೇ ಪ್ರತಿ ತಿಂಗಳು 5 ಕೆಜಿ ಹೆಚ್ಚುವರಿ ಅಕ್ಕಿ ವಿತರಿಸಲಾಗುತ್ತಿತ್ತು. ಕಳೆದ ಮೂರು ವರ್ಷಗಳಲ್ಲಿ ಈ ಯೋಜನೆ ಜಾರಿಗೆ ಸರ್ಕಾರ ಸುಮಾರು 17,167 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಇದೀಗ ಸರ್ಕಾರ ಹೊಸ ಕ್ರಮವಾಗಿ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ತಿಂಗಳು “ಇಂದಿರಾ ಆಹಾರ ಕಿಟ್” ವಿತರಿಸಲು ನಿರ್ಧರಿಸಿದೆ. ಈ ಆಹಾರ ಕಿಟ್‌ನಲ್ಲಿ ಪೌಷ್ಟಿಕಾಂಶಯುಳ್ಳ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡಿಗೆ ಎಣ್ಣೆ ಸೇರಿರುತ್ತದೆ.


ಇದನ್ನೂ ಓದಿ: ಸಿಗರೇಟ್ ಸೇದಿದ್ರೆ ರಿಲ್ಯಾಕ್ಸ್ ಸಿಗಲ್ಲ; ಭಯಾನಕ ಸತ್ಯ ಬಯಲು!


2026-27ನೇ ಸಾಲಿನಲ್ಲಿ ಈ ಯೋಜನೆ ಜಾರಿಗೆ ತರಲು ಸರ್ಕಾರ 6,200 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಯೋಜನೆಯ ಮೂಲಕ ಬಡ ಕುಟುಂಬಗಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಲಭ್ಯವಾಗುವಂತೆ ಮಾಡುವುದೇ ಸರ್ಕಾರದ ಉದ್ದೇಶವಾಗಿದೆ.

ಈ ಹೊಸ ಯೋಜನೆ ರಾಜ್ಯದ ಲಕ್ಷಾಂತರ ಬಡ ಕುಟುಂಬಗಳಿಗೆ ಆಹಾರ ಭದ್ರತೆಯನ್ನು ಹೆಚ್ಚಿಸುವುದರ ಜೊತೆಗೆ ಪೌಷ್ಟಿಕಾಂಶದ ಕೊರತೆಯನ್ನು ತಗ್ಗಿಸಲು ಸಹಕಾರಿಯಾಗಲಿದೆ ಎಂದು ಸರ್ಕಾರ ನಿರೀಕ್ಷಿಸಿದೆ.‌

Anna Bhagya Scheme 2026: BPL ಕಾರ್ಡುದಾರರಿಗೆ ಬಂಪರ್ ಗಿಫ್ಟ್
Anna Bhagya Scheme 2026: BPL ಕಾರ್ಡುದಾರರಿಗೆ ಬಂಪರ್ ಗಿಫ್ಟ್

ಇದನ್ನೂ ಓದಿ: ಸುಕನ್ಯಾ ಸಮೃದ್ಧಿ ಯೋಜನೆ ಉಳಿತಾಯದ ಜೊತೆಗೆ ಭರ್ಜರಿ ಲಾಭ; ಹೆಣ್ಣು ಮಕ್ಕಳ ಭವಿಷ್ಯಕ್ಕೆ ಬಲ, ಸಣ್ಣ ಹೂಡಿಕೆ, ದೊಡ್ಡ ಭವಿಷ್ಯ


ಇತ್ತೀಚಿನ ಜನಪ್ರಿಯ ಸುದ್ದಿಗಳು (Anna Bhagya Scheme 2026:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ