Anna Bhagya Scheme | 5 ಕೆಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಣೆ

(Anna Bhagya Scheme | ) ರಾಜ್ಯ ಸರ್ಕಾರದಿಂದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ, ಇನ್ನುಳಿದ ಐದು ಕೆಜಿ ಅಕ್ಕಿಯ ಬದಲಾಗಿ ಇಂದಿರಾ ಆಹಾರದ ಕಿಟ್ ವಿತರಣೆಗೆ ನಿರ್ಧರಿಸಿದೆ.


ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ


ರಾಜ್ಯ ಸರ್ಕಾರದ ವತಿಯಿಂದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿಯ ಬದಲಾಗಿ ಪ್ರತಿ ಪಡಿತರ ಚೀಟಿಗೆ ಇಂದಿರಾ ಆಹಾರದ ಕಿಟ್ ಅಂದರೆ ಪೌಷ್ಠಿಕ ಆಹಾರದ ಕಿಟ್ ಅನ್ನು ನೀಡಲು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

INDIRA ಅಂದರೇ Integrated Nutrition and Dietary Initiative For Realizing Annabhagya Beneficiaries ಎಂಬುದಾಗಿದೆ. ಅಂದರೆ ಅನ್ನಭಾಗ್ಯ ಫಲಾನುಭವಿಗಳನ್ನು ಪುನರುಜ್ಜೀವನಗೊಳಿಸಲು ಸಮಗ್ರ ಪೋಷಣೆ ಮತ್ತು ಆಹಾರ ಉಪಕ್ರಮದ ಕಿಟ್ ಎಂದು ನಾಮೀಕರಿಸಿ ಜಾರಿಗೊಳಿಸಲು ನಿರ್ಧರಿಸಲಾಗಿದೆ.


ಇದನ್ನೂ ಓದಿ: ರಾಜ್ಯದ ಕಾರ್ಮಿಕರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ; ಸಿಗಲಿದೆ ಪಿಂಚಣಿ ಸೌಲಭ್ಯ, ಕಂಪ್ಲೀಟ್‌ ಡಿಟೈಲ್ಸ್‌ ಗಾಗಿ ಇಲ್ಲಿ ಕ್ಲಿಕ್‌ ಮಾಡಿ


ಇಂದಿರಾ ಆಹಾರದ ಕಿಟ್ ನಲ್ಲಿ ಏನಿರಲಿದೆ?
ತೊಗರಿ ಬೇಳೆ – 1 ಕೆಜಿ
ಹೆಸರುಕಾಳು- 1 ಕೆಜಿ
ಅಡುಗೆ ಎಣ್ಣೆ – 1 ಲೀಟರ್
ಸಕ್ಕರೆ – 1 ಕೆಜಿ
ಉಪ್ಪು- 1 ಕೆಜಿ

ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ನೀಡಲು ಅಯವ್ಯಯದಲ್ಲಿ ಹಂಚಿಕೆ ಮಾಡಿರುವ ರೂ.6,426 ಕೋಟಿ ಅನುದಾನದಲ್ಲಿ ರೂ.6,119.52 ಕೋಟಿ ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ ಒದಗಿಸಲು ಬಜೆಟ್ ಮರು ಹಂಚಿಕೆ ಮಾಡಲು ನುಮೋದನೆ ನೀಡಿದೆ.

Anna Bhagya Scheme | ಕೆಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಣೆ
Anna Bhagya Scheme | ಕೆಜಿ ಅಕ್ಕಿ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಣೆ

ಇತ್ತೀಚಿನ ಜನಪ್ರಿಯ ಸುದ್ದಿಗಳು (Anna Bhagya Scheme | )

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ