(Anna Chakra) ರೇಷನ್ ಕಾರ್ಡ್ ಹೊಂದಿದವರಿಗೆ ಸಿಹಿ ಸುದ್ದಿ ಒಂದು ಇಲ್ಲಿದೆ. ಕೇಂದ್ರ ಸರ್ಕಾರ ರಾಜ್ಯಗಳಾದ್ಯಂತ ಪಿಡಿಎಸ್ ಅಡಿಯಲ್ಲಿ ಆಹಾರ ಧಾನ್ಯಗಳ ಪೂರೈಕೆ ಸರಪಳಿಯನ್ನು ಉತ್ತಮಗೊಳಿಸುವ ಸಾಧನವಾದ ಅನ್ನ ಚಕ್ರವನ್ನು ಆಹಾರ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದೆ.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ನವದೆಹಲಿಯಲ್ಲಿ ಅನ್ನ ಚಕ್ರ ಹೊಸ ಪೋರ್ಟಲ್ ಗೆ ಚಾಲನೆ ನೀಡಿ ಮಾತನಾಡಿದ ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ಭಾರತ ಪ್ರತಿ ತಿಂಗಳು 2.20 ಲಕ್ಷ ಕೋಟಿ ಮೌಲ್ಯದ ಉಚಿತ ಆಹಾರ ಧಾನ್ಯ ನೀಡುತ್ತಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ದೇಶದ 80 ಕೋಟಿ ಬಡವರಿಗೆ 2028ರವರೆಗೆ ಉಚಿತ ಪಡಿತರ ಯೋಜನೆ ವಿಸ್ತರಿಸಿದೆ. ಅಲ್ಲದೇ, ಪ್ರಸ್ತುತದಲ್ಲಿ ಕೆಲ ಫಲಾನುಭವಿಗಳು ₹ 1- 3 ಕೆಜಿ ಅತ್ಯಲ್ಪ ಬೆಲೆಯಲ್ಲಿ ಪ್ರತಿ ತಿಂಗಳು ಪಡಿತರ ಧಾನ್ಯ ಪಡೆಯುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ; KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಭರ್ಜರಿ ಸಿಹಿಸುದ್ದಿ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
PDS ನಲ್ಲಿ ಡಿಜಿಟಲೀಕರಣದಿಂದ ಭ್ರಷ್ಟಾಚಾರ ನಿರ್ಮೂಲನೆ ಜೊತೆಗೆ ₹ 3 ಲಕ್ಷ ಕೋಟಿ ಮೌಲ್ಯದ ಸೋರಿಕೆಯನ್ನು ತಡೆಯಲಾಗುತ್ತಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದಂತೆ ನಾವಿಂದು ಪ್ರತಿ ಕ್ಷೇತ್ರ, ಹಂತದಲ್ಲೂ ಭ್ರಷ್ಟಾಚಾರ ನಿಗ್ರಹಕ್ಕಾಗಿ ಡಿಜಿಟಲ್ ಗೆ ಪರಿವರ್ತನೆ ಹೊಂದುತ್ತಿದ್ದೇವೆ. ಇದರಿಂದ ಕಾರ್ಯದಕ್ಷತೆ ಹೆಚ್ಚುವುದಲ್ಲದೆ, ಸೋರಿಕೆ ಮತ್ತು ಸಮಯದ ಉಳಿತಾಯವಾಗುತ್ತದೆ. ತ್ವರಿತ ಕಾರ್ಯಾಚರಣೆ ಸಾಧ್ಯವಾಗುತ್ತದೆ ಎಂದು ಪ್ರತಿಪಾದಿಸಿದರು.
ಇದನ್ನೂ ಓದಿ; ಈ ಅಭಿವೃದ್ಧಿ ನಿಗಮ ವತಿಯಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ; ಈ ರೀತಿ ಅರ್ಜಿ ಸಲ್ಲಿಸಿ
“ಅನ್ನ ಚಕ್ರ” ಪೋರ್ಟಲ್ ಮೂಲಕ ಆಹಾರ ಇಲಾಖೆ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಯತ್ನ ನಡೆದಿದೆ. ಸಾರಿಗೆ ವೆಚ್ಚ ಮತ್ತು ಸಮಯ ಉಳಿತಾಯವಾಗಲಿದೆ. ಆಹಾರ ಇಲಾಖೆ ದಕ್ಷತೆ ಹೆಚ್ಚಲಿದೆ ಎಂದು ವಿವರಿಸಿದರು.
ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ NDA ಸರ್ಕಾರದ 3ನೇ ಅವಧಿಯ ಮೊದಲ 100 ದಿನಗಳಲ್ಲಿ 4 ಕೇಂದ್ರೀಕೃತ ಕ್ಷೇತ್ರಗಳಲ್ಲಿ ಪ್ರಮುಖ ಮೈಲಿಗಲ್ಲು ಸಾಧಿಸಲು ಪ್ರಯತ್ನಿಸಿದೆ ಎಂದರು.
ಇದನ್ನೂ ಓದಿ; ರಾಜ್ಯದ SC-ST ಪಂಗಡದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಆಹಾರ ಇಲಾಖೆ ಕಾರ್ಯಾಚರಣೆಗಳ ಡಿಜಿಟಲೀಕರಣ, ಸಂಗ್ರಹಣೆ ಮತ್ತು ಲಾಜಿಸ್ಟಿಕ್ಸ್‌ನ ಆಧುನೀಕರಣ, ನ್ಯಾಯಬೆಲೆ ಅಂಗಡಿಗಳು (FPS) ಮತ್ತು ಇಲಾಖೆ ಅಡಿಯಲ್ಲಿ ಬರುವ ಸಂಸ್ಥೆಗಳ ಬಲವರ್ಧನೆಗೆ ತಂತ್ರಜ್ಞಾನ ಮೂಲಕ ಕ್ರಮ ಕೈಗೊಳ್ಳಲಾಗಿದೆ ಎಂದರು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






