Tuesday, November 28, 2023
Homeರಾಜ್ಯತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ ತಿಗುಗೇಟು ಕೊಟ್ಟ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ ತಿಗುಗೇಟು ಕೊಟ್ಟ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಮೇಕೆದಾಟು ವಿಚಾರವಾಗಿ ಆಗಸ್ಟ್ 5 ರಂದು ಉಪವಾಸ ಸತ್ಯಾಗ್ರಹ ಕೂರುವುದಾಗಿ ಹೇಳಿರುವಂತಹ ತಮಿಳುನಾಡು ಬಿಜೆಪಿ ಅಧ್ಯಕ್ಷ, ಕರ್ನಾಟಕ ಕೆಡಾರ್‌ನ ಮಾಜಿ ಐಪಿಎಸ್ ಅಧಿಕಾರಿಯಾಗಿದ್ದಂತಹ ಕರ್ನಾಟಕದ ಸಿಂಗo ಅಂತಲೇ ಹೆಸರಾಗಿದ್ದಂತಹ ಅಣ್ಣಾಮಲೈಯವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿರುಗೇಟನ್ನು ನೀಡಿದ್ದಾರೆ.

ಮಾಧ್ಯಮವೊಂದಕ್ಕೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವಂತಹ ಬೊಮ್ಮಾಯಿಯವರು ಅವರು ಅವರ ಕೆಲಸ ಮಾಡುತ್ತಾರೆ. ನಾವು ನಮ್ಮ ಕೆಲಸ ಮಾಡುತ್ತೇವೆ. ಅಣ್ಣಾಮಲೈ ಉಪವಾಸ ಕೂರುವುದಕ್ಕೂ ನಮಗೂ ಏನೂ ಸಂಬAಧವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಮೇಕೆದಾಟುವಿನಲ್ಲಿ ನಮ್ಮ ಹಕ್ಕಿದೆ. ಆ ನೀರಿನಲ್ಲಿ ನಮಗೂ ಪಾಲಿದೆ, ಹಕ್ಕಿದೆ. ಆ ಯೋಜನೆ ಮಾಡಲು ಈಗಾಗಲೇ ನಾವು ಡಿಪಿಆರ್ ಮಾಡಿದ್ದೇವೆ. ಈ ಡಿಪಿಆರ್ ಅಪ್ರೂವ್ ಮಾಡಿಕೊಂಡು ನಾವು ಯೋಜನೆಯನ್ನು ಪೂರ್ಣ ಮಾಡಿಯೇ ಮಾಡುತ್ತೇವೆ. ಈ ಬಗ್ಗೆ ಯಾವುದೇ ಪ್ರಶ್ನೆ ಇಲ್ಲ. ಯಾರಾದರೂ ಉಪವಾಸ ಕುಳೀತುಕೊಳ್ಳಲಿ, ಯಾರಾದರೂ ಊಟ ಮಾಡಿಕೊಳ್ಳಲಿ ಎಂದು ಬೊಮ್ಮಾಯಿ ತಿರುಗೇಟು ನೀಡಿದರು.

ಮೇಕೆದಾಟು ಜಲಾಶಯ ನಿರ್ಮಾಣ ಕಾಮಗಾರಿ ವಿರೋಧಿಸಿ ಕರ್ನಾಟಕದ ವಿರುದ್ಧ ಆಗಸ್ಟ್ 5 ರಂದು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಅಣ್ಣಾಮಲೈ ಘೋಷಿಸಿದ್ದಾರೆ. ಕರ್ನಾಟಕದಲ್ಲಿ ನಮ್ಮದೇ ಸರ್ಕಾರ ಇರಬಹುದು. ಆದರೆ ನಾವು ತಮಿಳುನಾಡು ಸರ್ಕಾರದ ಪರ ನಿಲ್ಲುತ್ತೇನೆ ಎಂದು ಹೇಳಿದ್ದರು

Most Popular

Recent Comments