Aparna Vastarey: ನಮ್ಮ ಮೆಟ್ರೋಗೆ ಧ್ವನಿ ಆಗಿದ್ದ ಅಪರ್ಣಾ ಇನ್ನಿಲ್ಲ

(Aparna Vastarey) ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ (58) ಅವರು ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ.
ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ 9.45 ಕೊನೆಯುಸಿರೆಳೆದಿದ್ದಾರೆ.


ಇದನ್ನೂ ಓದಿ: ರೈತರ ಗಮನಕ್ಕೆ; ಜುಲೈ ತಿಂಗಳೊಳಗೆ ತಪ್ಪದೇ ಈ ಕೆಲಸ ಮಾಡಿ


ಅಪರ್ಣಾ ಧ್ವನಿ ಅಮರ:
ಚಿಕ್ಕಮಗಳೂರಿನ ಪಂಚನಹಳ್ಳಿ ಗ್ರಾಮದ ಅಪರ್ಣಾ ಕನ್ನಡ ಕುಲಕೋಟಿಗೆ ಹತ್ತಿರವಾಗಿದ್ದು ತಮ್ಮ ಸುಮಧುರ ಮಾತುಗಳಿಂದ. ಯಾವುದಾದರೂ ಕಾರ್ಯಕ್ರಮವನ್ನು ಅಪರ್ಣಾ ನಿರೂಪಣೆ ಮಾಡುತ್ತಿದ್ದಾರೆ ಎಂದರೆ, ಅಲ್ಲಿ ಕನ್ನಡ ಪದಗಳು ನಲಿದಾಡುತ್ತಿದ್ದವು. ಕನ್ನಡ ಮನಸ್ಸುಗಳನ್ನು ತಮ್ಮ ಮಾತುಗಳಿಂದಲೇ ಆಕರ್ಷಿಸಿದ್ದ ಧ್ವನಿ ಅಪರ್ಣಾ ಅವರದ್ದು. ನಮ್ಮ ಮೆಟ್ರೋ ಸೇರಿದಂತೆ ಅನೇಕ ಕಡೆ ಬರುವ ಅನೌನ್ಸ್‌ಮೆಂಟ್ ಅಪರ್ಣಾರದ್ದು. ನಿರೂಪಣೆಗೆ ಹೊಸ ಮೆರುಗು ತಂದುಕೊಟ್ಟಿದ್ದ ಅಪರ್ಣಾ ಇನ್ನು ನೆನಪು ಮಾತ್ರ ಎಂಬುದು ಅಭಿಮಾನಿಗಳಿಗೆ ಬೇಸರದ ವಿಷಯ.


ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು..!


ರಾಜ್ಯ ಸರಕಾರದ ಪ್ರಾಯೋಜಿತ ಪ್ರಮುಖ ಕಾರ್ಯಕ್ರಮಗಳನ್ನು ಬಹುಪಾಲು ಅವರೇ ನಿರೂಪಿಸುತ್ತಿದ್ದರು. ಶಂಕರ್‌ ಪ್ರಕಾಶ್‌- ಅಪರ್ಣಾ ನಿರೂಪಕ ಜೋಡಿ ಕಂಠಸಿರಿ ಕನ್ನಡಿಗರ ಮನಗೆದ್ದಿತ್ತು. ಇಂಗ್ಲಿಷ್‌ ಪದಗಳನ್ನು ಬಳಸದೆ ಅಪ್ಪಟ ಕನ್ನಡದಲ್ಲೇ ಕಾರ್ಯಕ್ರಮ ನಿರೂಪಿಸುತ್ತಿದ್ದುದು ಅಪರ್ಣಾ ನಿರೂಪಣಾ ಶೈಲಿಯ ವಿಶೇಷವಾಗಿತ್ತು. ಈ ಕಾರಣಕ್ಕಾಗಿಯೇ ಅವರು ಕನ್ನಡಿಗರ ಮನಗೆದ್ದಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ಅವರು ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು.


ಇದನ್ನೂ ಓದಿ: ಈ ಜಿಲ್ಲಾ ಅಂಗನವಾಡಿ ಕೇಂದ್ರದಲ್ಲಿ ಉದ್ಯೋಗ; 10th, PUC ಪಾಸ್ ಆದವರು ಈ ರೀತಿ ಅರ್ಜಿ ಸಲ್ಲಿಸಿ


ಅಪರ್ಣಾ ಅವರು ದೂರದರ್ಶನದಲ್ಲಿ ನಿರೂಪಕಿಯಾಗಿ, ರೇಡಿಯೋ ಜಾಕಿಯಾಗಿ ಕನ್ನಡದ ಜನಪ್ರಿಯ ಮುಖವಾಗಿದ್ದರು. 1990 ರ ದಶಕದಲ್ಲಿ ದೂರ ದರ್ಶನದಲ್ಲಿ ದಲ್ಲಿ ಪ್ರಸಾರವಾದ ವಿವಿಧ ಕಾರ್ಯಕ್ರಮಗಳ ನಿರೂಪಕಿಯಾಗಿ ಕೆಲಸ ಮಾಡಿದ್ದರು. 1984 ರಲ್ಲಿ ಪುಟ್ಟಣ್ಣ ಕಣಗಾಲ್ ಅವರ ಕೊನೆಯ ಚಿತ್ರ ಮಸಣದ ಹೂವು ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. 2015 ಮತ್ತು 2021 ರ ನಡುವೆ ಕಾಮಿಡಿ ಶೋ, ಮಜಾ ಟಾಕೀಸ್‌ನಲ್ಲಿ ವರಲಕ್ಷ್ಮಿ ಪಾತ್ರವನ್ನು ನಿರ್ವಹಿಸಿಯೂ ಜನಪ್ರಿಯರಾಗಿದ್ದರು.


ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್; ಹೊಸ ರೇಷನ್ ಕಾರ್ಡ್​​​ಗೂ ಅರ್ಜಿ ಸಲ್ಲಿಕೆ ಇದೆಯಾ?


ಅಪರ್ಣಾ ಅವರು ಮೂಡಲ ಮನೆ ಮತ್ತು ಮುಕ್ತ ಮುಂತಾದ ದೂರದರ್ಶನ ಕಾರ್ಯಕ್ರಮಗಳಲ್ಲಿ ನಟಿಯಾಗಿ ಕೆಲಸ ಮಾಡಿದ್ದಾರೆ. 2013 ರಲ್ಲಿ, ಅವರು ETV ಕನ್ನಡದಲ್ಲಿ ಪ್ರಸಾರವಾದ ಕನ್ನಡ ರಿಯಾಲಿಟಿ ಟೆಲಿವಿಷನ್ ಶೋ ಬಿಗ್ ಬಾಸ್‌ನ ಮೊದಲ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು.


ಇದನ್ನೂ ಓದಿ: ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ


2 ವರ್ಷದ ಹಿಂದೆ ಕ್ಯಾನ್ಸರ್ ಎಂದು ತಿಳಿಯಿತು
ಅಪರ್ಣಾ ಅವರ ಪತಿ ನಾಗರಾಜ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, 2 ವರ್ಷದ ಹಿಂದೆ ಜುಲೈ ನಲ್ಲಿ ಕ್ಯಾನ್ಸರ್ ಎಂದು ತಿಳಿಯಿತು. ಮೊದಲು ನೋಡಿದ ವೈದ್ಯರು ಆರು ತಿಂಗಳೇ ಬದುಕುವುದು ಕಷ್ಟ ಎಂದಿದ್ದರು. ಆಕೆ ಛಲಗಾತಿ. ಒಂದೂವರೆ ವರ್ಷ ಹೋರಾಡಿದಳು. ಅವಳು ಧೀರೆ ಹೋರಾಡಿ ಸೋತಳು. ದೇಹ ಎನ್ನುವುದು ಮಾಯಕ. ನಿಜವಾದ ವಯಸ್ಸು ಯಾವಾಗಲೂ ತೋರಿಸಿಲ್ಲ. ನಮ್ಮ ಖಾಸಗಿ ವಿಚಾರವಾಗಿತ್ತು. ಇದನ್ನು ಮಾಧ್ಯಮದ ಎದುರು ಹೇಳಬೇಕೆಂಬುದು ಆಕೆಯ ಕೊನೆಯಾಸೆಯಾಗಿತ್ತು ಎಂದು ಹೇಳಿದರು.

Aparna Vastarey: ನಮ್ಮ ಮೆಟ್ರೋಗೆ ಧ್ವನಿ ಆಗಿದ್ದ ಅಪರ್ಣಾ ಇನ್ನಿಲ್ಲ
Aparna Vastarey: ನಮ್ಮ ಮೆಟ್ರೋಗೆ ಧ್ವನಿ ಆಗಿದ್ದ ಅಪರ್ಣಾ ಇನ್ನಿಲ್ಲ

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
    3. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
    4. ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
    5. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    6. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    7. ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
    8. ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
    9. ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
    10. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    11. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ