(Application) 2024 ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ವಿವಿಧ ಕೋರ್ಸ್‌ಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಈ ಸರ್ಕಾರಿ ಯೋಜನೆಗೆ ಮುಗಿಬಿದ್ದ ಜನ
ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಕೋರ್ಸ್ ಅನುಸಾರ ಪ್ರೋತ್ಸಾಹಧನ:
* ದ್ವಿತೀಯ ಪಿಯುಸಿ ಮತ್ತು ಮೂರು ವರ್ಷದ ಪಾಲಿಟೆಕ್ನಿಕ್ ಡಿಪ್ಲೊಮ ವಿದ್ಯಾರ್ಥಿಗಳಿಗೆ -ವಾರ್ಷಿಕ ರೂ. 20,000.
* ಪದವಿ ವಿದ್ಯಾರ್ಥಿಗಳಿಗೆ – ವಾರ್ಷಿಕ ರೂ. 25,000.
* ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ – ವಾರ್ಷಿಕ ರೂ. 30,000.
* ಅಗ್ರಿಕಲ್ಚರ್, ಇಂಜಿನಿಯರ್, ವೆಟರನರಿ, ಮೆಡಿಷನ್ ವಿದ್ಯಾರ್ಥಿಗಳಿಗೆ – ವಾರ್ಷಿಕ ರೂ. 35,000.
ಇದನ್ನೂ ಓದಿ: ಈ ಜಿಲ್ಲೆಯ ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
* ಕಳೆದ ಸಾಲಿನ ವಿದ್ಯಾರ್ಥಿಯ ಅಂಕಪಟ್ಟಿ ಪ್ರತಿ
* ಜಾತಿ ಪ್ರಮಾಣ ಪತ್ರ
* ಆದಾಯ ಪ್ರಮಾಣ ಪತ್ರ
* ಆಧಾರ್ ಕಾರ್ಡ್ ಪ್ರತಿ
* ಬ್ಯಾಂಕ್ ಪಾಸ್ ಬುಕ್ ಪ್ರತಿ
* ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಅಧಿಕೃತ ವೆಬ್ ಸೈಟ್ https://swdservices.karnataka.gov.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಗಮನಿಸಿ: ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾದ ತಕ್ಷಣ ಮಾಹಿತಿ ನೀಡಲಾಗುವುದು.
ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 17ನೇ ಕಂತಿನ ಹಣ ಬಿಡುಗಡೆ ಯಾವಾಗ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ? ಹೀಗೆ ಚೆಕ್ ಮಾಡಿ








Leave a Reply