Applications Nm:ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್

(Applications Nm) ನಿರುದ್ಯೋಗ ಯುವಕ-ಯುವತಿಯರಿಗೆ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿಯಲ್ಲಿ ಆರ್ಥಿಕ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ʼನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ; ಹೊಸ ಸದಸ್ಯರ ಸೇರ್ಪಡೆಯನ್ನು ಜಸ್ಟ್ ಹೀಗೆ ಮಾಡಿ; ಈ ದಾಖಲೆ ಕಡ್ಡಾಯ


ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ ಮತ್ತು ನೆಲಮಂಗಲ ತಾಲ್ಲೂಕಿನ ನಿರುದ್ಯೋಗ ಯುವಕ-ಯುವತಿಯರಿಗೆ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ(ಪಿ.ಎಂ.ಇ.ಜಿ.ಪಿ)ಯಡಿ ಆರ್ಥಿಕ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಇದನ್ನೂ ಓದಿ; KSRTC ಬಸ್‌ ನಲ್ಲಿ ಪ್ರಯಾಣ ಮಾಡುವವರಿಗೆ ಭರ್ಜರಿ ಸಿಹಿಸುದ್ದಿ; ಏನದು? ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಅರ್ಜಿ ಸಲ್ಲಿಸಲು ಈ ಅರ್ಹತೆ ಹೊಂದಿರುವುದು ಕಡ್ಡಾಯ:
18 ವರ್ಷ ಮೇಲ್ಪಟ್ಟ ಪುರುಷರು, ಮಹಿಳೆಯರು, ಪ.ಜಾ, ಪ.ಪಂ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರು, ಮಾಜಿ ಸೈನಿಕರು, ಅಂಗವಿಕಲರು ಅರ್ಜಿ ಸಲ್ಲಿಸಬಹುದು. ವಿವಿಧ ಹಣಕಾಸು ಸಂಸ್ಥೆಗಳು (ಬ್ಯಾಂಕುಗಳ) ಮೂಲಕ ಸಾಲ ಸೌಲಭ್ಯ ನೀಡಲಾಗುವುದು. ಯಾವುದೇ ಆದಾಯದ ಮಿತಿ ಇರುವುದಿಲ್ಲ.


ಇದನ್ನೂ ಓದಿ; ರಾಜ್ಯದ SC-ST ಪಂಗಡದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ


ಅರ್ಜಿ ಸಲ್ಲಿಕೆ ಹೇಗೆ?;
ಅಸಕ್ತ ಹೊಂದಿರುವ ಉದ್ಯಮಶೀಲರು www.kviconline.gov.in ವೆಬ್ ಸೈಟ್ ನಲ್ಲಿ kvib ಏಜೆನ್ಸಿ ಲಾಗಿನ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ; ಮಹಿಳೆಯರಿಗೆ ಬಂಪರ್‌ ಸುದ್ದಿ; ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಸೋಲಾರ್ ಸ್ಟವ್!; ಈ ದಾಖಲೆ ಕಡ್ಡಾಯ


ಇನ್ನು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಕಛೇರಿ ದೂರವಾಣಿ ಸಂಖ್ಯೆ. 9480825612 ಇವರನ್ನು ಸಂಪರ್ಕಿಸಬಹುದಾಗಿದೆ.

Applications Nm:ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್
Applications Nm:ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್

ಇತ್ತೀಚಿನ ಜನಪ್ರಿಯ ಸುದ್ದಿಗಳು