Saturday, June 10, 2023
Homeರಾಜಕೀಯಮಾದಕ ದ್ರವ್ಯಗಳಿಗೆ ಕಡಿವಾಣ ಹಾಕುವುದು ನನ್ನ ಮೊದಲ ಆದ್ಯತೆ : ಅರಗ ಜ್ಞಾನೇಂದ್ರ

ಮಾದಕ ದ್ರವ್ಯಗಳಿಗೆ ಕಡಿವಾಣ ಹಾಕುವುದು ನನ್ನ ಮೊದಲ ಆದ್ಯತೆ : ಅರಗ ಜ್ಞಾನೇಂದ್ರ

ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಮಾಡಿದ ಖಾತೆ ಹಂಚಿಕೆ ಹಲವು ಅಚ್ಚರಿಗಳಿಂದ ಕೂಡಿತ್ತು, ತೀರ್ಥಹಳ್ಳಿ ಶಾಸಕ ಹಾಗೂ ಹಿರಿಯ ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ಅವರಿಗೆ ಮಹತ್ತರವಾದ ಗೃಹಖಾತೆ ಜವಾಬ್ದಾರಿಯನ್ನು ನೀಡಿದ್ದಾರೆ.

ಇದೇ ಮೊದಲ ಬಾರಿಗೆ ಸಚಿವರಾಗಿರುವ ಆರಗ ಜ್ಞಾನೇಂದ್ರ ಅವರು ನನಗೆ ಯಾವುದೇ ನಿರೀಕ್ಷೆಗಳಿರಲಿಲ್ಲ ಹಾಗೂ ಕೊಟ್ಟ ಖಾತೆಯನ್ನು ಸಮರ್ಥವಾಗಿ ನಿಭಾಯಿಸುವ ಆತ್ಮವಿಶ್ವಾಸವಿದೆ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ಖಾತೆಯನ್ನು ಸಮರ್ಥವಾಗಿ ನಿರ್ವಹಿಸುವುದು ಸವಾಲಿನ ಕೆಲಸ. ಆದರೆ ನನ್ನ ರಾಜಕೀಯ ವೃತ್ತಿ ಜೀವನ ಮತ್ತು ವೈಯಕ್ತಿಕ ಜೀವನದಲ್ಲಿ ಸವಾಲುಗಳನ್ನು ನಿರ್ವಹಿಸುವುದು ಅಭ್ಯಾಸವಾಗಿ ಹೋಗಿದೆ. ನಾನು ಸವಾಲುಗಳನ್ನು ಇಷ್ಟಪಡುತ್ತೇನೆ ಮತ್ತು ಈ ಸೂಕ್ಷ್ಮ ಮತ್ತು ಜವಾಬ್ದಾರಿಯುತ ಕೆಲಸವನ್ನು ಧೈರ್ಯದಿಂದ ನಿರ್ವಹಿಸುವ ವಿಶ್ವಾಸ ನನಗಿದೆ.

ಖಾತೆ ಹಂಚಿಕೆಯ ನಂತರ ನನಗೆ ಅಚ್ಚರಿಯಾಗಿತ್ತು, ನಾನು ಸ್ವಲ್ಪ ಹಿಂಜರಿಯುತ್ತಿದ್ದೆ, ಈ ವೇಳೆ ನಾನು ಮುಖ್ಯಮಂತ್ರಿಗೆ ಕರೆ ಮಾಡಿದೆ ಅವರು ನನಗೆ ಧೈರ್ಯ ತುಂಬಿದರು. ಖಾತೆ ನಿಭಾಯಿಸಲು ನೀವು ಸಮರ್ಥರಾಗಿದ್ದೀರಿ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿಮಗೆ ಮಾರ್ಗದರ್ಶನ ನೀಡುತ್ತಾರೆ ಎಂದು ಹೇಳಿದರು. ಚಿಂತೆ ಮಾಡದಂತೆ ಹೇಳಿ ನನ್ನಲ್ಲಿ ಆತ್ಮವಿಶ್ವಾಸ ತುಂಬಿದರು.

ನoತರ ಮಾತನಾಡಿದ ಅವರು ದೇಶದಲ್ಲಿ ಹಾಗೂ ರಾಜ್ಯದಲ್ಲಿ ಮಾದಕದ್ರವ್ಯದ ಅಪಾಯವು ಒಂದು ಪ್ರಮುಖ ಸಮಸ್ಯೆಯಾಗಿದೆ ಮತ್ತು ಇದು ನನ್ನ ಆದ್ಯತೆಯ ಪಟ್ಟಿಯಲ್ಲಿ ಮೊದಲಿರುತ್ತದೆ, ರಾಜ್ಯದಲ್ಲಿ ಶಾಂತಿ ಕದಡಲು ಪ್ರಯತ್ನಿಸುವ ಯಾವುದೇ ದೇಶವಿರೋಧಿ ಅಥವಾ ಸಮಾಜವಿರೋಧಿ ಅಂಶಗಳನ್ನು ಸರ್ಕಾರವು ಸಹಿಸುವುದಿಲ್ಲ ಇದು ಕಾನೂನುಬಾಹಿರ ವಾಸ್ತವ್ಯ ದೊಡ್ಡ ಅಪರಾಧವಾಗಿದೆ ಮತ್ತು ನಾವು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಅವರಲ್ಲಿ ಹಲವರು ಮಾದಕ ದ್ರವ್ಯ ಮಾರಾಟದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಲಾಗಿದೆ. \

ಒಬ್ಬ ಭಾರತೀಯ ಅಥವಾ ವಿದೇಶಿ ಪ್ರಜೆಯಾಗಿರಲಿ, ಯಾವುದೇ ಕಾನೂನುಬಾಹಿರ ಚಟುವಟಿಕೆಯನ್ನು ಸಹಿಸಲಾಗುವುದಿಲ್ಲ. ನಾನು ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಮಸ್ಯೆ ಕುರಿತು ಚರ್ಚಿಸಿ ಕಾನೂನು ಪ್ರಕಾರ ಕ್ರಮವನ್ನು ಕೈಗೊಳ್ಳುತ್ತೇನೆ ಎಂದರು.

ದುಷ್ಕರ್ಮಿಗಳನ್ನು ಶಿಕ್ಷಿಸಿ ಮತ್ತು ಮುಗ್ಧರನ್ನು ರಕ್ಷಿಸುವುದು ನನ್ನ ಧ್ಯೇಯ, ಇಲಾಖೆಯು ಈ ತತ್ವಗಳನ್ನು ಅನುಸರಿಸುತ್ತಿದೆ, ಆದರೆ ಕೆಲವು ಸಮಸ್ಯೆಗಳು ತಲೆದೋರಿವೆ. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಹೇಳಿದ್ದಾರೆ.

Most Popular

Recent Comments