areca-cancerous:ಅಡಿಕೆ ಕ್ಯಾನ್ಸರ್ ಕಾರಕವಲ್ಲ:ಔಷಧಿ ಗುಣ ಹೊಂದಿದೆ

(areca-cancerous) ಮಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಅಡಿಕೆ ಕ್ಯಾನ್ಸರ್‌ ಕಾರಕವೆಂಬ ನಿರ್ಣಯ ಏಕಪಕ್ಷೀಯವಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮರುಪರಿಶೀಲಿಸಬೇಕು ಎಂದು ಕ್ಯಾಂಪ್ಕೊ ಒತ್ತಾಯಿಸಿದೆ.


ಇದನ್ನೂ ಓದಿ;  ಗ್ರಾಪಂ ನೌಕರರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!


ಈ ಸಂಬಂಧ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್), ನವದೆಹಲಿಯ ಭಾರತೀಯ ಕೃಷಿ ಮಂಡಳಿ (ಐಸಿಎಆರ್), ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯ (ಸಿಎಫ್‌ಟಿಆರ್‌ಐ) ಅಥವಾ ಭಾರತೀಯ ವಿಜ್ಞಾನ ಸಂಸ್ಥೆಯಂತಹ ಸರ್ಕಾರಿ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಅಧ್ಯಯನ ನಡೆಸಿ ವರದಿ ಮಂಡಿಸಲು ಸಹಕಾರ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ವಿನಂತಿಸಿದೆ.


ಇದನ್ನೂ ಓದಿ; ಬ್ಯಾಂಕ್‌ ನಲ್ಲಿ ಸಾಲ ಮಾಡಿರುವವರಿಗೆ ಸಿಹಿಸುದ್ದಿ; ಕೇಂದ್ರ ಹಣಕಾಸು ಸಚಿವೆಯಿಂದ ಮಹತ್ವದ ಸೂಚನೆ


ಅಡಿಕೆಯು ಆಯುರ್ವೇದೀಯ ಗುಣಗಳನ್ನು ಹೊಂದಿದ್ದರೂ, ಅದು ಕ್ಯಾನ್ಸರ್ ಕಾರಕವೆಂದು ವಿಶ್ವ ಆರೋಗ್ಯ ಸಂಸ್ಥೆ ಏಕಪಕ್ಷೀಯ ನಿರ್ಣಯ ಮಾಡಿದೆ. ಪುರಾತನ ಕಾಲದಿಂದಲೂ ಅಡಿಕೆಗೆ ಭಾರತೀಯ ಸಂಸ್ಕೃತಿಯಲ್ಲಿ ಪವಿತ್ರ ಸ್ಥಾನ ಪಡೆದಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್‌ ಕುಮಾರ್ ಕೊಡ್ಗಿ ಹೇಳಿದ್ದಾರೆ.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಭರ್ಜರಿ ಸುದ್ದಿ; ಡ್ರೈವಿಂಗ್ ಸೇರಿ ವಿವಿಧ ತರಬೇತಿಗೆ ಅರ್ಜಿ ಆಹ್ವಾನ!


ಔಷಧೀಯ ಗುಣ ಹೊಂದಿದ ಕಾರಣಕ್ಕೆ ಆಯುರ್ವೇದ ಶಾಸ್ತ್ರದಲ್ಲಿಯೂ ವಿಶೇಷ ಸ್ಥಾನವಿದೆ. ಅಡಿಕೆ, ಕಫ ಮತ್ತು ಪಿತ್ತದ ಸಮಸ್ಯೆ ಶಮನಗೊಳಿಸುವ ಮತ್ತು ಜೀರ್ಣಕ್ರಿಯೆ ಉದ್ದೀಪನಗೊಳಿಸುವ ಗುಣ ಹೊಂದಿದೆ. ಆದರೆ, ಡಬ್ಲ್ಯುಎಚ್‌ಒ ನೀಡಿರುವ ವರದಿ ಸಂಶೋಧನೆಗಳ ಸಂಪೂರ್ಣ ಮಾಹಿತಿಗಳನ್ನು ಬಹಿರಂಗ ಪಡಿಸಿಲ್ಲ. ಹಾಗಾಗಿ ಸತ್ಯಾಸತ್ಯತೆಗಳನ್ನು ಮುಚ್ಚಿಟ್ಟಿರಬಹುದು ಅಥವಾ ವರದಿಗಳನ್ನು ತಿರುಚಿರಬಹುದೆಂಬ ಸಂಶಯ ಮೂಡುತ್ತಿದೆ ಎಂದು ತಿಳಿಸಿದ್ದಾರೆ.

ಕ್ಯಾಂಪ್ಕೊ ಈಗಾಗಲೇ ಹಲವು ಸಂಶೋಧನೆಗಳನ್ನು ನಡೆಸಿದ್ದು, ಎಲ್ಲ ವರದಿಗಳು ಅಡಿಕೆ ಕ್ಯಾನ್ಸರ್ ಕಾರಕವಲ್ಲ. ಬದಲಾಗಿ ರೋಗಶಮನಗೊಳಿಸುವ ಔಷಧೀಯ ಗುಣ ಹೊಂದಿರುವ ಬಗ್ಗೆ ದೃಢಪಡಿಸಿವೆ. ಅನೇಕ ಸಂಸ್ಥೆಗಳು ಸಹ ಸಂಶೋಧನೆ ನಡೆಸಿ, ಅಡಿಕೆಯಲ್ಲಿರುವ ಔಷಧೀಯ ಗುಣಗಳನ್ನು ತಿಳಿಸಿವೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ; ರೇಷನ್ ಕಾರ್ಡ್ ಪಡೆಯಲು ಇರುವ ಮಾನದಂಡಗಳೇನು?; ಇಲ್ಲಿದೆ ನೋಡಿ ಮಾಹಿತಿ


ಹೀಗಾಗಿ ಡಬ್ಲ್ಯುಎಚ್‌ಒ ತನ್ನ ನಿಲುವನ್ನು ಮರುಪರಿಶೀಲಿಸುವಂತೆ ಮಾಡಲು ಐಸಿಎಂಆರ್, ಐಸಿಎಆರ್, ಎಐಯುಎಂಎಸ್, ಸಿಎಫ್‌ಟಿಆರ್‌ಐ ಮೈಸೂರು ಅಥವಾ ಭಾರತೀಯ ವಿಜ್ಞಾನ ಸಂಸ್ಥೆಯಂತಹ ಸರಕಾರಿ ಮಾನ್ಯತೆ ಪಡೆದ ಹಾಗೂ ನುರಿತ ಸಂಶೋಧನಾ ಸಂಸ್ಥೆಗಳಲ್ಲಿ ಅಧ್ಯಯನ ನಡೆಸಿ ವರದಿ ಮಂಡಿಸಲು ಸಹಕಾರ ನೀಡುವಂತೆ ಕೇಂದ್ರ ಸರಕಾರದಲ್ಲಿ ರೈತರ ಪರವಾಗಿ ಕ್ಯಾಂಪ್ಕೊ ಮನವಿ ಮಾಡುತ್ತಿದೆ ಎಂದು ಕಿಶೋರ್ ಕುಮಾರ್ ಕೊಡ್ಗಿ ತಿಳಿಸಿದ್ದಾರೆ.

areca-cancerous:ಅಡಿಕೆ ಕ್ಯಾನ್ಸರ್ ಕಾರಕವಲ್ಲ:ಔಷಧಿ ಗುಣ ಹೊಂದಿದೆ
areca-cancerous:ಅಡಿಕೆ ಕ್ಯಾನ್ಸರ್ ಕಾರಕವಲ್ಲ:ಔಷಧಿ ಗುಣ ಹೊಂದಿದೆ

ಇತ್ತೀಚಿನ ಜನಪ್ರಿಯ ಸುದ್ದಿಗಳು