arecanut -cancer: ಅಡಿಕೆ ಕ್ಯಾನ್ಸ‌ರ್, 3 ಹಂತದ ಸಂಶೋಧನೆ ಪೂರ್ಣ

(arecanut -cancer) ವಿಶ್ವ ಆರೋಗ್ಯ ಸಂಸ್ಥೆ ಕೆಲವು ದಿನಗಳ ಹಿಂದೆ ಅಡಿಕೆಯನ್ನು ಕ್ಯಾನ್ಸರ್‌ ಕಾರಕ ಎಂದು ವರ್ಗೀಕರಿಸಿದ್ದು, ಇದರಿಂದ ಅಡಿಕೆ ಬೆಳೆಗಾರರಲ್ಲಿ ಆತಂಕ ಮೂಡಿಸಿತ್ತು. ಆದರೆ, ಇದೀಗ నిಟ್ಟೆ ವಿಶ್ವವಿದ್ಯಾನಿಲಯದ ತಜ್ಞರಿಂದ ಮೂರೂ ವಿಭಾಗಗಳ ಸಂಶೋಧನೆಯಲ್ಲಿ ಅಡಿಕೆಯಿಂದ ಆರೋಗ್ಯದ ಮೇಲೆ ಯಾವ ದುಷ್ಪರಿಣಾಮ ಉಂಟಾಗುವುದಿಲ್ಲ ಎನ್ನುವುದು ಕಂಡುಬಂದಿದೆ.


ಇದನ್ನೂ ಓದಿ; SC/ST ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ; ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ


ಹೌದು, ನಿಟ್ಟೆ ವಿ.ವಿ.ಯ ವಿಜ್ಞಾನಿ ಪ್ರೊ| ಇಡ್ಯಾ ಕರುಣಾಸಾಗರ್ ಮತ್ತವರ ತಂಡವು ನಡೆಸಿದ ಮೂರೂ ವಿಭಾಗಗಳ ಸಂಶೋಧನೆಯಲ್ಲಿ ಅಡಿಕೆಯಿಂದ ಆರೋಗ್ಯದ ಮೇಲೆ ಯಾವ ದುಷ್ಪರಿಣಾಮ ಉಂಟಾಗುವುದಿಲ್ಲ ಎನ್ನುವುದು ಕಂಡುಬಂದಿದೆ.


ಇದನ್ನೂ ಓದಿ; ಶಾಲೆಗಳ ಶೈಕ್ಷಣಿಕ ಪ್ರವಾಸ ರದ್ದು!; ಇಲ್ಲಿದೆ ಮಹತ್ವದ ಮಾಹಿತಿ…


ಮೂರು ವರ್ಷಗಳ ಹಿಂದೆ ಈ ಕುರಿತು ಅಧ್ಯಯನ, ಸಂಶೋಧನೆ ನಡೆಸುವುದಕ್ಕೆ ಕ್ಯಾಂಪ್ರೊ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ ಹಾಗೂ ನಿಟ್ಟೆ ವಿಶ್ವವಿದ್ಯಾನಿಲಯಗಳು ತಿಳುವಳಿಕೆ ಒಪ್ಪಂದ (ಎಂಒಯು) ಮಾಡಿಕೊಂಡಿದ್ದವು. ಒಟ್ಟು ನಾಲ್ಕು ವಿಭಾಗಗಳ ಅಧ್ಯಯನದಲ್ಲಿ ಅಡಿಕೆಯ ಜಲೀಯ ಸಾರವನ್ನು ಹಣ್ಣಿನ ನೊಣ (ಪ್ರೊಸೊಫಿಲಾ) ಮತ್ತು ಝೀಬ್ರಾ ಮೀನುಗಳ ಬೆಳವಣಿಗೆಯ ವಿವಿಧ ಹಂತಗಳಲ್ಲಿ (ಮೊಟ್ಟೆಯಿಂದ ಪ್ರೌಢಾವಸ್ಥೆಗೆ ಬರುವವ ವರೆಗೆ) ನೀಡಲಾಗಿದೆ. ಅಡಿಕೆಯಿಂದ ಅವುಗಳ ಮೇಲೆ ಯಾವುದೇ ನೇರ ಪರಿಣಾಮ ಕಂಡುಬಂದಿಲ್ಲ. ಝೀಬ್ರಾ ಮೀನು ಹಾಗೂ ಪ್ರೊಸೊಫಿಲಾಗಳ ಕ್ರೋಮೋಸೋಮ್‌ ಗಳು ಮಾನವನ ಕ್ರೋಮೊಸೋಮ್‌ ಗಳನ್ನು ಹೋಲುವುದರಿಂದ ಮಾನವನನ್ನು ಉದ್ದೇಶಿಸಿ ನಡೆಸುವ ಯಾವುದೇ ವೈಜ್ಞಾನಿಕ ಸಂಶೋಧನೆಗೆ ಆರಂಭಿಕ ಹಂತದಲ್ಲಿ ಇವುಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ.


ಇದನ್ನೂ ಓದಿ; ಆಧಾರ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಓದಿ; ಈ ಕೆಲಸ ಮಾಡಲು ಇಂದು ಕೊನೆಯ ದಿನ


ಇನ್ನು, ಅಡಿಕೆಯ ಸಾರವು ಕ್ಯಾನ್ಸರ್ ಕಣಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎನ್ನುವುದನ್ನು ಪ್ರತ್ಯೇಕ ಅಧ್ಯಯನ ಮಾಡಲಾಗಿದೆ. ಪ್ರಯೋಗಾಲಯದ ಪೆಟ್ರಿಪ್ಲೇಟ್‌ ಗಳಲ್ಲಿ ಕ್ಯಾನ್ಸರ್ ಕಣಗಳನ್ನು ಬೆಳೆಸಿ, ಅವುಗಳ ಮೇಲೆ ಅಡಿಕೆಯ ಸಾರವನ್ನು ಪ್ರಯೋಗಿಸಿದಾಗ ಅದು ಕ್ಯಾನ್ಸರ್ ಕಣಗಳ ಬೆಳವಣಿಗೆಯನ್ನು ಪ್ರತಿಬಂಧಿಸುತ್ತದೆ ಎನ್ನುವುದನ್ನು ತಜ್ಞರು ಕಂಡುಕೊಂಡಿದ್ದಾರೆ.


ಇದನ್ನೂ ಓದಿ; ರೇಷನ್‌ ಕಾರ್ಡ್‌ ಹೊಂದಿರುವ ಯುವಕ – ಯುವತಿಯರಿಗೆ ಸಿಹಿಸುದ್ದಿ; ಈ ತರಬೇತಿಗೆ ಅರ್ಜಿ ಆಹ್ವಾನ


ಆದರೆ ಸಾಮಾನ್ಯ ಕಣಗಳ ಮೇಲೆ ಇದು ಯಾವುದೇ ಪರಿಣಾಮ ಬೀರುವುದಿಲ್ಲ. ಒಟ್ಟಾರೆಯಾಗಿ ಅಡಿಕೆಯ ಬಳಕೆಯಿಂದ ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ ಎನ್ನುವ ಭಾರತದ ಸಂಪ್ರದಾಯಿಕ ಜ್ಞಾನಕ್ಕೆ ಈ ವರದಿ ಪೂರಕವಾಗಿ ಕಂಡುಬಂದಿದೆ ಎನ್ನುತ್ತಾರೆ ತಜ್ಞರು.


ಇದನ್ನೂ ಓದಿ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿರುವವರ ಗಮನಕ್ಕೆ; ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟ


ದೀರ್ಘ ಸಮಯ ಬೇಕಾದರೂ ವಿಸ್ತ್ರತ ಅಧ್ಯಯನ ನಡೆಸಬೇಕಾಗಿದೆ:
ಇದೇ ಅಧ್ಯಯನ-ಸಂಶೋಧನೆಯ ಇನ್ನೊಂದು ಹಂತದಲ್ಲಿ ನಿಟ್ಟೆ ವಿಶ್ವವಿದ್ಯಾನಿಲಯದ ಸಮುದಾಯದ ಆರೋಗ್ಯ ವಿಭಾಗದವರು “ಅಡಿಕೆಯನ್ನು ಮಾತ್ರ’ ಜಗಿಯುವವರ ಮೇಲೆ ಸಂಶೋಧನೆ ನಡೆಸುತ್ತಿದ್ದಾರೆ. ಆದರೆ ಅದಿನ್ನೂ ಅಂತಿಮಗೊಂಡಿಲ್ಲ. ಹೆಚ್ಚು ಮಂದಿ ಅಡಿಕೆ ಜಗಿಯುವವರನ್ನು ಈ ಅಧ್ಯಯನಕ್ಕೆ ಒಳಪಡಿಸಲಾಗುತ್ತಿದೆ. ಇದುವರೆಗೆ ಅಡಿಕೆ ಜಗಿಯುವವರನ್ನು ಮಾತ್ರವೇ ದೊಡ್ಡಮಟ್ಟದಲ್ಲಿ ಅಧ್ಯಯನಕ್ಕೆ ಒಳಪಡಿಸದ ಕಾರಣ ತುಸು ದೀರ್ಘ ಸಮಯ ಬೇಕಾದರೂ ವಿಸ್ತ್ರತ ಅಧ್ಯಯನ ನಡೆಸಬೇಕಾಗಿದೆ ಎನ್ನುವುದು ತಜ್ಞರ ಅಭಿಮತ.

arecanut -cancer: ಅಡಿಕೆ ಕ್ಯಾನ್ಸ‌ರ್, 3 ಹಂತದ ಸಂಶೋಧನೆ ಪೂರ್ಣ
arecanut -cancer: ಅಡಿಕೆ ಕ್ಯಾನ್ಸ‌ರ್, 3 ಹಂತದ ಸಂಶೋಧನೆ ಪೂರ್ಣ

ಇದನ್ನೂ ಓದಿ; ರೇಣುಕಾ ಸ್ವಾಮಿ ಕೊಲೆ ಪ್ರಕರಣ; ದರ್ಶನ್​ ಸೇರಿ 7 ಆರೋಪಿಗಳಿಗೆ ಜಾಮೀನು


ಇತ್ತೀಚಿನ ಜನಪ್ರಿಯ ಸುದ್ದಿಗಳು