(Arivu scheme application:) ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮವು 2026-27ನೇ ಸಾಲಿನ ‘ಅರಿವು’ ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಮತೀಯ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಈ ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನವಾಗಿದೆ.
ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಹಾಗೂ ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳು ಸಿಇಟಿ ಅಥವಾ ನೀಟ್ ಮೂಲಕ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆದಿದ್ದರೆ ಯೋಜನೆಯ ಲಾಭ ಪಡೆಯಲು ಅರ್ಹರಾಗಿರುತ್ತಾರೆ.
ಅಭ್ಯರ್ಥಿಗಳು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.
ಅಗತ್ಯ ದಾಖಲೆಗಳು
ಆನ್‌ಲೈನ್‌ನಲ್ಲಿ ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್ ಜೊತೆ ಈ ಕೆಳಗಿನ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು:
* ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
* ಪಿಯುಸಿ ಅಂಕಪಟ್ಟಿ
* ಆಧಾರ್ ಕಾರ್ಡ್
* ರೇಷನ್ ಕಾರ್ಡ್
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ವಿದ್ಯಾರ್ಥಿ ಹಾಗೂ ಪೋಷಕರ ಭಾವಚಿತ್ರ
* ಸಿಇಟಿ/ನೀಟ್ ಪರೀಕ್ಷೆಯ ದಾಖಲೆಗಳು ಮತ್ತು ಹಾಲ್ ಟಿಕೆಟ್
* ನೋಟರಿಯಿಂದ ದೃಢೀಕರಿಸಲ್ಪಟ್ಟ ಇಂಡೆಮ್ನಿಟಿ ಬಾಂಡ್
ವಿದ್ಯಾರ್ಥಿಗಳು ಪಾವತಿಸಬೇಕಾದ ಬೋಧನಾ ಶುಲ್ಕವನ್ನು ನಿಗಮವು ನೇರವಾಗಿ ಸಂಬಂಧಪಟ್ಟ ಕಾಲೇಜುಗಳಿಗೆ ಪಾವತಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ಆಸಕ್ತ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ 2026ರ ಮೇ 30ರೊಳಗೆ ಜಿಲ್ಲಾ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 08194-226412, 8431669372 ಹಾಗೂ 8277944213 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ತಿಳಿಸಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (Arivu scheme application:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






Leave a Reply