ಬೆಳಗಾವಿ: ಕೋವಿಡ್-19 ನಿಯಮವನ್ನು ಉಲ್ಲಂಘಿಸಿ ಚುನಾವಣಾ ಪ್ರಚಾರವನ್ನು ಮಾಡಿದ ಆರೋಪದಡಿ ಎಐಎಂಐಎo ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಸೇರಿ 300 ಕ್ಕೂ ಹೆಚ್ಚು ಬೆಂಬಲಿಗರ ವಿರುದ್ಧ ಬೆಳಗಾವಿಯ ಮಾರುಕಟ್ಟೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ ಎಂದು ತಿಳಿದುಬಂದಿದೆ.
ಸೆ.3 ರoದು ನಡೆಯುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಎಐಎಂಐಎo ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರವಾಗಿ ಸೋಮವಾರ ಸಂಸದ ಅಸಾದುದ್ದೀನ್ ಓವೈಸಿ ಬೆಳಗಾವಿಯ ದರ್ಬಾರ್ ಗಲ್ಲಿಯಲ್ಲಿ ಚುನಾವಣಾ ರ‍್ಯಾಲಿಯಲ್ಲಿ ನಡೆಸಿದ್ದರು.
ಈ ರ‍್ಯಾಲಿಯಲ್ಲಿ ಬಾಗವಹಿಸಿದಂತಹ ಓವೈಸಿಯನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ, ಗುಂಪುಗುoಪಾಗಿ ಸೇರಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಅದರಿಂದ ಇವರ ವಿರುದ್ಧ ಪ್ರಕರಣವಯ ದಾಖಲಾಗಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಓವೈಸಿಯವರ ವಿರುದ್ಧ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆಂದು ವರದಿಗಳು ತಿಳಿಸಿವೆ.