Sunday, October 1, 2023
Homeಮಲೆನಾಡುಚಿಕ್ಕಮಗಳೂರುಮೂಡಿಗೆರೆ: ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

ಮೂಡಿಗೆರೆ: ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

ಮೂಡಿಗೆರೆ; (ನ್ಯೂಸ್ ಮಲ್ನಾಡ್ ವರದಿ) ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಲೆಮನೆಯಲ್ಲಿ ನಡೆದಿದೆ.

ಇದನ್ನೂ ಓದಿ: ರಸ್ತೆ ಅಪಘಾತ-ಸ್ಥಳದಲ್ಲಿಯೇ ಯುವಕ ಸಾವು

ಮಲೆಮನೆಯಲ್ಲಿ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿ 4 ಲೀ ಕಳ್ಳಭಟ್ಟಿ ಸಾರಾಯಿ ಮತ್ತು 300 ಲೀಟರ್ ಬೆಲ್ಲದ ಕೊಳೆಯನ್ನು ವಶ ಪಡಿಸಿಕೊಂಡಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಮೂಡಿಗೆರೆ ತಾಲೂಕಿನ ಮಲೆಮನೆ ಗ್ರಾಮದ ರೂಪ ಎನ್ನುವವರ ಮನೆ ಹಾಗು ಕಾಫಿತೋಟದ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿ ಕಳ್ಳಭಟ್ಟಿ ವಶಪಡಿಸಿಕೊಂಡು ಆರೋಪಿಯ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕರಾದ ಅಪೂರ್ವ, ಸಿಬ್ಬಂದಿಗಳಾದ ಮಲ್ಲಪ್ಪ ಹೆಗ್ಗಣವರ್, ರಮೇಶ್, ಶಿವಣ್ಣ,  ವಾಹನ ಚಾಲಕ  ಸತೀಶ್ ಕುಮಾರ್ ಇದ್ದರು.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ

ಇದನ್ನೂ ಓದಿ

ಬಾಳೆಬರೆ ಘಾಟಿ; ವಾಹನ ಸಂಚಾರ ಆರಂಭ

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಕರಾವಳಿ ಹಾಗೂ ಮಲೆನಾಡನ್ನು ಬೆಸೆಯುವ ಬಾಳೆಬರೆ (ಹುಲಿಕಲ್‌) ಘಾಟಿಯ ಕಾಂಕ್ರಿಟೀಕರಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶನಿವಾರ ರಾತ್ರಿಯಿಂದ ವಾಹನ ಸಂಚಾರ ಮತ್ತೆ ಆರಂಭಗೊಂಡಿದೆ.

ಇದನ್ನೂ ಓದಿ; ಶಾಸಕ ಸಿ. ಟಿ ರವಿ ಆಸ್ಪತ್ರೆಗೆ ದಾಖಲು.. ಪತ್ನಿ ಪಲ್ಲವಿ ಸಿಟಿ ರವಿ ಕಣ್ಣೀರು!

ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ, ಚರಂಡಿ ಮತ್ತಿತರ ಕಾಮಗಾರಿಗಳಾಗಿ ಫೆ.5ರಿಂದ ಎ. 5ರ ವರೆಗೆ ಈ ಘಾಟಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಆ ಬಳಿಕ ಎ. 5ರಂದು ಕಾಮಗಾರಿ ಪೂರ್ಣಗೊಳ್ಳದ ಕಾರಣ ಮತ್ತೆ 10 ದಿನಗಳ ವರೆಗೆ ಸಂಚಾರ ನಿಷೇಧಿಸಲಾಗಿತ್ತು. ಈಗ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.


3.5 ಕಿ.ಮೀ. ಕಾಮಗಾರಿ:
ಕುಂದಾಪುರ – ತೀರ್ಥಹಳ್ಳಿ ರಾಜ್ಯ ಹೆದ್ದಾರಿ ಹಾದುಹೋಗುವ ಬಾಳೆಬರೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 3 ಕೋಟಿ.ರೂ. ವೆಚ್ಚದಲ್ಲಿ ಅಂದಾಜು 1 ಕಿ.ಮೀ. ಹಾಗೂ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 10 ಕೋಟಿ.ರೂ. ವೆಚ್ಚದಲ್ಲಿ 2.5 ಕಿ.ಮೀ. ಸೇರಿದಂತೆ ಒಟ್ಟು 3.5 ಕಿ.ಮೀ. ದೂರದವರೆಗೆ ರಸ್ತೆ ಅಗಲ, ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ ನಿರ್ಮಾಣ ಕಾರ್ಯ ನಡೆದಿದೆ.

3.5 ಕಿ.ಮೀ. ಅಭಿವೃದ್ಧಿ ಬಾಕಿ:
ಬಾಳೆಬರೆ ಘಾಟಿಯು ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆ ಸೇರಿ ಹುಲಿಕಲ್‌ ಚೆಕ್‌ ಪೋಸ್ಟ್‌ನಿಂದ ಹೊಸಂಗಡಿಯ ಘಾಟಿಯ ಬುಡದ ವರೆಗೆ 14.5 ಕಿ.ಮೀ. ದೂರವಿದೆ. ಶಿವಮೊಗ್ಗ ಜಿಲ್ಲೆಯ 8 ಕಿ.ಮೀ. ಪೈಕಿ ಈ ಹಿಂದೆ ಸ್ವಲ್ಪ ಕಾಂಕ್ರಿಟೀಕರಣ ಆಗಿದ್ದು, ಈಗ ಬಾಕಿಯಿದ್ದ 2.5 ಕಿ.ಮೀ.ನೊಂದಿಗೆ ಕಾಂಕ್ರಿಟೀಕರಣಗೊಂಡಿದೆ. ಉಡುಪಿ ಜಿಲ್ಲೆಯ 6.5 ಕಿ.ಮೀ. ಘಾಟಿಯ ಪೈಕಿ ಈ ಹಿಂದೆ 2 ಕಿ.ಮೀ., ಈಗ 1 ಕಿ.ಮೀ. ಸೇರಿದಂತೆ ಒಟ್ಟು 3 ಕಿ.ಮೀ. ಕಾಂಕ್ರಿಟೀಕರಣಗೊಂಡಂತಾಗಿದೆ. ಇನ್ನು ಜಿಲ್ಲೆಯ ವ್ಯಾಪ್ತಿಯಲ್ಲಿ 3.5 ಕಿ.ಮೀ. ಘಾಟಿ ರಸ್ತೆ ಕಾಂಕ್ರಿಟೀಕರಣ ಬಾಕಿ ಇದೆ.

ಇದನ್ನೂ ಓದಿ; ಒಳಮೀಸಲಾತಿ ಕಿಚ್ಚು: ತರ್ಲಘಟ್ಟ ತಾಂಡಾದಲ್ಲಿ ವಿಜಯೇಂದ್ರಗೆ ಪ್ರತಿಭಟನೆಯ ಸ್ವಾಗತ

Most Popular

Recent Comments