Sunday, December 3, 2023
Homeಮಲೆನಾಡುಬೈಕ್‌ನಲ್ಲಿ ಮುಸ್ಲಿಂ ವಿದ್ಯಾರ್ಥಿನಿ ಕರೆ ತಂದಿದ್ದಕ್ಕೆ ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಬೈಕ್‌ನಲ್ಲಿ ಮುಸ್ಲಿಂ ವಿದ್ಯಾರ್ಥಿನಿ ಕರೆ ತಂದಿದ್ದಕ್ಕೆ ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಬಂದ ಕಾರಣಕ್ಕೆ ಪ್ಯಾರಾ ಮೆಡಿಕಲ್ ಕಾಲೇಜಿನ ಮೂವರು ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ಭದ್ರಾವತಿಯಲ್ಲಿ ಶುಕ್ರವಾರ ನಡೆದಿದೆ.

ಇದನ್ನೂ ಓದಿ; ಪೆಟ್ರೋಲ್ ತುಂಬಿಸುವಾಗಲೇ ಬ್ಯಾಟರಿ ಸ್ಪೋಟ

ಇದನ್ನೂ ಓದಿ; ಬೈಕ್ ಅಪಘಾತದಲ್ಲಿ ಯೋಧನ ಸಾವು; ಪೊಲೀಸರ ಬಳಿ ಹೆತ್ತವರು ಕೇಳಿದ್ದು ಏನು?

ಭದ್ರಾವತಿಯ ವಿಶ್ವೇಶ್ವರಯ್ಯ ನಗರದ ಹಿಂದೂ ವಿದ್ಯಾರ್ಥಿ ಹಾಗೂ ಖಲಂದರ್ ನಗರದ ಮುಸ್ಲಿಂ ವಿದ್ಯಾರ್ಥಿನಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಸಹಪಾಠಿಗಳು,

ವಿದ್ಯಾರ್ಥಿನಿಯ ಅಕ್ಕನಿಗೆ ಅಪಘಾತವಾಗಿರುವ ಬಗ್ಗೆ ಕಾಲೇಜಿನಲ್ಲಿದ್ದ ವೇಳೆ ಮಾಹಿತಿ ಲಭಿಸಿದೆ. ಹೀಗಾಗಿ ವಿದ್ಯಾರ್ಥಿಯು ತನ್ನ ಸ್ನೇಹಿತರಿಂದ ಬೈಕ್ ಪಡೆದು ಆಕೆಯನ್ನು ಖಲಂದರ್ ನಗರದ ಮನೆಗೆ ಕರೆದುಕೊಂಡು ಬಂದಿದ್ದ. ವಾಪಸ್ ತೆರಳುವಾಗ ಅಲ್ಲಿನ ಝೆಂಡಾ ಕಟ್ಟೆಯ ಬಳಿ ಗುಂಪೊಂದು ವಿದ್ಯಾರ್ಥಿಯನ್ನು ಅಡ್ಡಗಟ್ಟಿದೆ. ಆತನ ಹೆಸರು ಕೇಳಿದ ಗುಂಪು, ನಮ್ಮ ಸಮುದಾಯದ ಹುಡುಗಿಯನ್ನು ಏಕೆ ಬೈಕ್‌ನಲ್ಲಿ ಕೂರಿಸಿಕೊಂಡು ಬಂದೆ ಎಂದು ಪ್ರಶ್ನಿಸಿ ಹಲ್ಲೆ ಮಾಡಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಈ ವಿಷಯ ತಿಳಿದು ಸ್ಥಳಕ್ಕೆ ಬಂದ ವಿದ್ಯಾರ್ಥಿಯ ಇಬ್ಬರು ಸ್ನೇಹಿತರ ಮೇಲೂ ಹಲ್ಲೆ ಮಾಡಲಾಗಿದೆ. ಈ ವೇಳೆ ಸ್ಥಳದಲ್ಲಿದ್ದ ಮಿಜಾನ್‌ಖಾನ್ ಎಂಬುವರು ಜಗಳ ಬಿಡಿಸಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಈ ಬಗ್ಗೆ ಭದ್ರಾವತಿಯ ಹಳೆನಗರ ಪೊಲೀಸ್ ಠಾಣೆಗೆ ವಿದ್ಯಾರ್ಥಿಯು ಭಾನುವಾರ ದೂರು ನೀಡಿದ್ದಾರೆ.

ನಾನು ಕಾಂಗ್ರೆಸ್ ಶಾಸಕನಾಗಿರಬಹುದು ಆದರೆ ನಾನೊಬ್ಬ ಸಂಘದ ಸ್ವಯಂಸೇವಕ ಎನ್ನಲು ಹೆಮ್ಮೆಯಿದೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಾನೊಬ್ಬ ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಚಿಕ್ಕಮಗಳೂರು ಶಾಸಕ ಎಚ್. ಡಿ ತಮ್ಮಯ್ಯ ಹೇಳಿದ್ದಾರೆ.

ಇದನ್ನೂ ಓದಿ; ಹೈಟೆಕ್‌ ವೇಶ್ಯಾವಾಟಿಕೆ ದಂಧೆ ಮೇಲೆ ರೈಡ್

ನಗರದಲ್ಲಿ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಣಪತಿ ಸಮಿತಿಯಲ್ಲಿ ಕೋದಂಡ ಸ್ವಾಮಿ ದೇವಸ್ಥಾನದ ಸಮಿತಿಯಲ್ಲಿ ಅಧ್ಯಕ್ಷನಾಗಿ ಕೆಲಸ ಮಾಡುವಾಗ ದಾನಿಗಳ ಬಳಿ ಸಂಗ್ರಹಕ್ಕೆ ಹೋಗುತ್ತಿದ್ದ ಸಮಯದಲ್ಲಿ ಅವರು ನೀಡುತ್ತಿದ್ದ 500 ರೂ. ದೊಡ್ಡ ಹಣವಾಗುತ್ತಿತ್ತು. ಇದನ್ನು ಚಂದ ವಸೂಲಿ ಎಂದು ಹೇಳುವುದಿಲ್ಲ ಸಂಘದಲ್ಲಿ ಸಂಗ್ರಹ ಎಂದು ಹೇಳಿಕೊಂಡಿದ್ದಾರೆ. ನಾನು ಬಿಜೆಪಿಯಲ್ಲಿ 15 ರಿಂದ 16 ವರ್ಷ ಕೆಲಸ ಮಾಡಿದ್ದೇನೆ. ಈಗಲೂ ನಾನೊಬ್ಬ ಸಂಘದ (rss) ಸ್ವಯಂ ಸೇವಕ. ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿದ್ದರೂ ಸಂಘದಲ್ಲಿನ ಶಿಸ್ತಿನಿಂದ ನಾನೊಬ್ಬ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಹೇಳಿಕೊಂಡಿದ್ದಾರೆ.

ನಾನು ಜಾತ್ಯಾತೀತ ವ್ಯಕ್ತಿ, ಜಾತ್ಯಾತೀತ ಶಾಸಕ ಪ್ರಮಾಣ ವಚನ ಸ್ವೀಕರಿಸುವಾಗ ಅದೇ ನಿಟ್ಟಿನಲ್ಲಿ ಸ್ವೀಕರಿಸಿದ್ದೇನೆ. ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿಯೇ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದಿದ್ದಾರೆ.

Most Popular

Recent Comments