ಮಡಿಕೇರಿ: (ನ್ಯೂಸ್ ಮಲ್ನಾಡ್ ವರದಿ) ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕು ಮಡಿಕೇರಿ-ಕುಟ್ಟ ರಸ್ತೆಯ 8.30 ಕಿ.ಮೀ.ನಿಂದ 10 ಕಿ.ಮೀ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡು ಕಾಂಕ್ರೀಟ್ ರಸ್ತೆ ನಿರ್ಮಿಸುವ ನಿಟ್ಟಿನಲ್ಲಿ ಮೇ, 22 ರಿಂದ ಜುಲೈ, 10 ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ; ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ಇದನ್ನೂ ಓದಿ; ಕಾಫಿನಾಡಲ್ಲಿ ಹೆಚ್ಚಾದ ದಲಿತ ಸಿಎಂ ಕೂಗು
ಪ್ರಯಾಣಿಕರ ಮತ್ತು ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973 ರ ಸೆಕ್ಷನ್ 144 ಮತ್ತು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989 ರ (ತಿದ್ದುಪಡಿ ನಿಯಮಗಳು 1990) ನಿಯಮ 221ಎ(5) ನಲ್ಲಿ ದತ್ತವಾದ ಅಧಿಕಾರದಂತೆ ಸೋಮವಾರಪೇಟೆ ತಾಲ್ಲೂಕು ಮಡಿಕೇರಿ-ಕುಟ್ಟ ರಸ್ತೆಯ 8.30 ಕಿ.ಮೀ.ನಿಂದ 10 ಕಿ.ಮೀ.ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಬಿಜೆಪಿಗೆ ಮತ ನೀಡಿದ್ದಕ್ಕೆ ಹಲ್ಲೆ ಮಾಡಿದ್ದಾರೆಂದ್ರು ಡ್ರಾಮ ಮಾಡಿ ಈಶ್ವರಪ್ಪ ಬಳಿ ಹಣ ಪೀಕಿದ
- ಯುವತಿ ಕಿಡ್ನ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
- ಸಿಟಿ ಬಸ್ ದ್ವಿಚಕ್ರ ವಾಹನದ ನಡುವೆ ಡಿಕ್ಕಿ
ಸಾರ್ವಜನಿಕರು ಬದಲಿ ರಸ್ತೆಯಾದ ಮಡಿಕೇರಿ-ಸುಂಟಿಕೊಪ್ಪ-ಚೆಟ್ಟಳ್ಳಿ ಮಾರ್ಗವನ್ನು ಬಳಸುವುದು. ಈ ಬಗ್ಗೆ ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 116 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಗಳು 1989 ರ (ತಿದ್ದುಪಡಿ ನಿಯಮಗಳು 1990) ನಿಯಮ 221 ಎ (2) ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕವನ್ನು ಅಳವಡಿಸಲು ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಕಾರ್ಯಪಾಲಕ ಎಂಜಿನಿಯರ್, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಕೊಡಗು ವಿಭಾಗ ಮಡಿಕೇರಿ ಇವರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ; ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು