ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗ ಹೊರವಲಯದ ಸೋಮಿನಕೊಪ್ಪದ ಪ್ರಾರ್ಥನಾ ಮಂದಿರ ಎದುರು ಆಟೋಚಾಲಕನ ಮೇಲೆ ಅನ್ಯಕೋಮಿನ ಕಿಡಿಗೇಡಿಗಳು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.
ಇದನ್ನೂ ಓದಿ; ಬೈಕ್‌ಗೆ ಆಂಬ್ಯುಲೆನ್ಸ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ಹರೀಶ್ ರಾವ್ ಗೋರ್ಪಡೆ ಹಲ್ಲೆಗೊಳಗಾದ ಆಟೋ ಚಾಲಕ. ಆಟೋ ಚಾಲಕ ಬಿಜೆಪಿಗೆ ಮತ ಹಾಕಿದಕ್ಕೆ ಅನ್ಯಕೋಮಿನ ಕಿಡಿಗೇಡಿಗಳು ಕೈಯಿಂದ ಗುದ್ದಿ, ಕಲ್ಲಿನಿಂದ ಆಟೋಗೆ ಹೊಡೆದಿದ್ದಾರೆ ಎಂದು ಎಸ್‌ಪಿ ಕಚೇರಿಗೆ ಬಂದು ಹರೀಶ್ ರಾವ್ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಸೋಲಿನ ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟ ಸಿ.ಟಿ.ರವಿ
- ಸಿ.ಟಿ ರವಿಯನ್ನು ಸೋಲಿಸಿದ ಕಾಂಗ್ರೆಸ್ನ ತಮ್ಮಯ್ಯ
- ಚುನಾವಣೆಯಲ್ಲಿ ಸೋತ ಸಿ.ಟಿ ರವಿಗೆ ಧೈರ್ಯ ತುಂಬಿದ ಬಾಲಕ
ಇನ್ನು ಘಟನೆ ವಿವರ ತಿಳಿದು ಹರೀಶ್ ರಾವ್ ಅವರಿಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಧನಸಹಾಯ ಮಾಡಿದ್ದಾರೆ. ಇನ್ನು ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಕೆಎಸ್ ಈಶ್ವರಪ್ಪ ಎಸ್ಪಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ; ಸಾಲಬಾಧೆ ತಾಳಲಾರದೆ ದಂಪತಿ ಆತ್ಮಹತ್ಯೆ
ಸ್ನೇಕ್ ಕಿರಣ್ ಆಸ್ಪತ್ರೆಗೆ ದಾಖಲು
ಶಿವಮೊಗ್ಗ: ಉರಗ ಸಂರಕ್ಷಕ ಹಾವು ಕಡಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಸ್ನೇಕ್ ಕಿರಣ್ ಹಾವು ಕಡಿತಕ್ಕೆ ಒಳಗಾದವರು.
ನಗರದ ಹೊರಭಾಗವಾಗಿರುವ ತಾವರೆ ಚಟ್ನಹಳ್ಳಿಯಲ್ಲಿ ಹಾವು ಬಂದಿದೆ ಎಂದು ಕರೆ ಬಂದ ಹಿನ್ನಲೆಯಲ್ಲಿ ಹಾವು ಹಿಡಿಯಲು ಸ್ನೇಕ್ ಕಿರಣ್ ಮುಂದಾಗಿದ್ದಾರೆ. ಹಾವು ಹಿಡಿಯಲು ಮುಂದಾದಾಗ ಪೊದೆ ಒಳಗೆ ನುಗ್ಗಿದೆ.
ಇದನ್ನೂ ಓದಿ; ಭೀಕರ ಅಪಘಾತ, ಅತ್ತೆ-ಸೊಸೆ ಸಾವು
ಸ್ನೇಕ್ ಕಿರಣ್ ಶೂ ಹಾಕದೆ ಬಂದಿದ್ದೂ, ಕಾಲಿಗೆ ಸರಿಯಾಗಿ ಕೊಳಕಮಂಡಲ ಹಾವು ಕಚ್ಚಿದೆ. ತಕ್ಷಣ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.