ರಿಪ್ಪನ್‌ಪೇಟೆ/ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಆಟೋ ಚಾಲಕನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ವೆಂಕಟೇಶ್ (53)ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಇದನ್ನೂ ಓದಿ; ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ
ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಆಟೋ ಚಾಲಕ ವೆಂಕಟೇಶ್ ಎಂಬುವರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ; ಅಕ್ರಮವಾಗಿ ಗೋವುಗಳ ಸಾಗಿಸುತ್ತಿದ್ದ ಆರೋಪಿ ಬಂಧನ
ಆರೋಗ್ಯವಾಗಿಯೇ ಇದ್ದ ಇವರಿಗೆ ಕೋವಿಡ್ ಸಂಬಂಧ ಮುಂಜಾಗ್ರತೆಗಾಗಿ ನೀಡುವ ವ್ಯಾಕ್ಸಿನ್ ಅನ್ನು ಹಾಕಿಸಿಕೊಂಡಿದ್ದರು. ಅದನ್ನು ಹಾಕಿಸಿಕೊಂಡ ಮೇಲೆ ಅವರ ದೇಹದ ಎಡಭಾಗ ಸ್ವಾದೀನ ಕಳೆದುಕೊಂಡಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣದಿಂದ ಅವರಿಗೆ ಮಣಿಪಾಲ ಸೇರಿದಂತೆ ವಿವಿಧೆಡೆ ಚಿಕಿತ್ಸೆಯನ್ನೂ ಕೊಡಿಸಲಾಗಿತ್ತು.
ಆದರೆ, ಎಲ್ಲೇ ಚಿಕಿತ್ಸೆ ಪಡೆದರೂ ಅವರು ಗುಣಮುಖರಾಗಲಿಲ್ಲ. ಈ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡ ಅವರು ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಕೊರಳೊಡಿದ್ದಾರೆ ಎಂದು ಕುಟುಂಬ ವರ್ಗದವರು ದೂರು ದಾಖಲಿಸಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಚುನಾವಣಾ ಸಮಯದಲ್ಲಿ ಶೃಂಗೇರಿ ಕ್ಷೇತ್ರ ಬಿಜೆಪಿಗೆ ಮತ್ತೊಂದು ಆಘಾತ
- ಕಾಂಗ್ರೆಸ್ ಅಭ್ಯರ್ಥಿ ಟಿ ಡಿ ರಾಜೇಗೌಡರಿಗಿಂತ ಅವರ ಪತ್ನಿಯೇ ಹೆಚ್ಚು ಶ್ರೀಮಂತೆ
- ಪೊಲೀಸರ ಭರ್ಜರಿ ಕಾರ್ಯಾಚರಣೆ
ಮೃತ ವ್ಯಕ್ತಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚುನಾವಣಾ ಮೆರವಣಿಗೆಗೆ ಮಕ್ಕಳ ಬಳಕೆ ಮಾಡಿ ನೀತಿ ಸಂಹಿತೆ ಉಲ್ಲಂಘನೆ
ದಿನಾಂಕ 18 ಏಪ್ರಿಲ್ 2023ರಂದು ಕೊಡಗಿನ ವಿರಾಜಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣ ನಾಮಪತ್ರ ಸಲ್ಲಿಕೆ ವೇಳೆ ಮೆರವಣಿಗೆಗೆ ಮಕ್ಕಳನ್ನು ಬಳಕೆ ಮಾಡಿಕೊಂಡ ಕುರಿತು ಗಂಭೀರ ಆರೋಪ ಕೇಳಿಬಂದಿದ್ದು ಈ ಘಟನೆ ಸಂಬಂಧ ಚುನಾವಣೆ ಆಯೋಗ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣಗೆ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ; ಶೃಂಗೇರಿ: ಕರಡಿ ದಾಳಿಗೆ ರೈತನ ಸ್ಥಿತಿ ಗಂಭೀರ; ಮಣಿಪಾಲಕ್ಕೆ ದಾಖಲು
ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣ ಸಾವಿರಾರು ಸಂಖ್ಯೆ ಜನರೊಂದಿಗೆ ನಾಮಪತ್ರ ಸಲ್ಲಿಕೆ ಮಾಡುವ ಮುನ್ನ ರ್ಯಾಲಿ ನಡೆಸಿದ್ದರು.
ಈ ಸಂದರ್ಭದಲ್ಲಿ ನೂರಾರು ಮಕ್ಕಳು ಕಾಂಗ್ರೆಸ್ ಶಾಲು, ಟೋಪಿ ಧರಿಸಿ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು
ಚುನಾವಣಾ ಆಯೋಗ ಈಗಾಗಲೇ 18 ವರ್ಷದೊಳಗಿನ ಮಕ್ಕಳನ್ನು ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಸೂಚನೆ ಹೊರಡಿಸಿದ್ಧು ಈ ಬೆಳವಣಿಗೆ ಸಂಬಂಧ ಚುನಾವಣೆ ಆಯೋಗ ಏನು ಕ್ರಮ ಕೈಗೊಳ್ಳುತ್ತದೆ ಕಾದು ನೋಡಬೇಕಿದೆ.
ಇದನ್ನೂ ಓದಿ; ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸುಧಾಕರ್ ಎಸ್ ಶೆಟ್ಟಿ
ಹಣ ನೀಡಿ ಜನರನ್ನು ಕರೆತಂದರು:
ಇನ್ನು ಹಣ ನೀಡಿ ಮೆರವಣಿಗೆಗೆ ಜನರನ್ನು ಕರೆದುಕೊಂಡು ಬಂದಿರುವುದು ಹಾಗೂ ಹೊರ ಊರುಗಳಿಂದ ಕಾರ್ಯಕ್ರಮಕ್ಕೆ ಜನರನ್ನು ಕರೆದುಕೊಂಡು ಬಂದಿದ್ದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋಗಳು ಸಾಕಷ್ಟು ವೈರಲ್ ಆಗಿದೆ.