Saturday, December 9, 2023
Homeಉದ್ಯೋಗಆಯುಷ್ ಇಲಾಖೆಯಲ್ಲಿ ಉದ್ಯೋಗ ನೇಮಕಾತಿ:ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ

ಆಯುಷ್ ಇಲಾಖೆಯಲ್ಲಿ ಉದ್ಯೋಗ ನೇಮಕಾತಿ:ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ: ಆಯುಷ್ ಇಲಾಖೆಯಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಕಾರವಾರದಲ್ಲಿ ಕೆಲಸವನ್ನು ನಿರ್ವಹಿಸಬೇಕು ಎಂದು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬoಧಿಸಿದoತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿ ಇಲ್ಲಿದೆ.

ಹುದ್ದೆ ಹೆಸರು: ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು

ಕರ್ತವ್ಯ ಸ್ಥಳ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಕಾರವಾರದಲ್ಲಿ ಕೆಲಸ ನಿರ್ವಹಿಸಬೇಕು

ವೇತನ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30.000 ಗೌರವ ಧನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದ ಆಯುಷ್ ಪದವಿ, ಎಂಬಿಎ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಯಾವುದೇ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅಭ್ಯರ್ಥಿಗಳಿಗೆ ಗರಿಷ್ಠ 36 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಅನುಭವ: ಕನಿಷ್ಠ 3 ವರ್ಷ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು ಮತ್ತು ಆಯುಷ್ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆಯನ್ನು ನೀಡಲಾಗುವುದು.

ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಕ ಮಾಡಲಾಗುವುದು.

ಖುದ್ದು ಹಾಜರಾಗಿ ಅರ್ಜಿ ಸಲ್ಲಿಸಬೇಕು
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಗಳನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ), ಅಗತ್ಯ ದಾಖಲಾತಿಗಳೊಂದಿಗೆ ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 21, 2021
ಅರ್ಜಿ ಸಲ್ಲಿಸುವ ವಿಳಾಸ: ಜಿಲ್ಲಾ ಆಯುಷ್ ಅಧಿಕಾರಿಗಳು, ಉತ್ತರ ಕನ್ನಡ ಜಿಲ್ಲೆ, ಕಾರವಾರ – 581301
ಹೆಚ್ಚಿನ ಮಾಹಿತಿಗಾಗಿ ಕಚೇರಿ ಅವಧಿಯಲ್ಲಿ 08382-22೦0883ಗೆ ಸಂಪರ್ಕಿಸಬೇಕು

 

Most Popular

Recent Comments