Ayushman Cards: ರಾಜ್ಯದ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ (Ayushman Cards) ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸರ್ಕಾರ ನೀಡಿದೆ. ಈ ಯೋಜನೆಯಡಿ ಅನಿರ್ದಿಷ್ಟ ಶಸ್ತ್ರಚಿಕಿತ್ಸಾ ಪ್ಯಾಕೇಜ್ (Unspecified Surgical Package) ಅಡಿಯಲ್ಲಿ ಬೆನ್ನುಮೂಳೆಯ ವಿರೂಪಗಳು (Spinal Deformities) ಚಿಕತ್ಸಾತ್ಮಕ ಸೇವೆಯನ್ನು ಸೇರ್ಪಡೆ ಮಾಡಲಾಗುತ್ತಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಸರ್ಕಾರಿ ಆದೇಶದಲ್ಲಿ ರಾಜ್ಯದ ಜನರಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಒದಗಿಸಲು ಸಂಯೋಜಿತ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ 4000 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ
ದಿನಾಂಕ: 17-01-2019 ರಲ್ಲಿ ನೀಡಿರುವ ಸಹಮತಿ ಮೇರೆಗೆ ಈ ಪತ್ರದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ಯಾವುದೇ ಆರ್ಥಿಕ ಹೊಣೆ ಇಲ್ಲದಂತೆ 36 ಚಿಕಿತ್ಸಾ ವಿಧಾನಗಳನ್ನು ಸೇರಿ ಒಟ್ಟು 1658 ಚಿಕಿತ್ಸಾ ವಿಧಾನಗಳಿಗೆ ಅನುಮತಿ ನೀಡಲಾಗಿರುತ್ತದೆ. ಇದರಲ್ಲಿ ಕ್ರಮ ಸಂಖ್ಯೆ:36 (3AU1.00801) ರ ಚಿಕಿತ್ಸಾ ವಿಧಾನದಲ್ಲಿ ಅನಿರ್ದಿಷ್ಟ ಶಸ್ತ್ರಚಿಕಿತ್ಸಾ ಪ್ಯಾಕೇಜ್ (Unspecified specified Surgical Package) ಅನ್ನು ಸೇರಿಸಲಾಗಿರುತ್ತದೆ.

ಈ ಮೇಲ್ಕಂಡ ಪತ್ರಕ್ಕೆ ಸಂಭದಿಸಿದಂತೆ ಮಕ್ಕಳಲ್ಲಿ ಕಂಡು ಬರುವಂತಹ ಬೆನ್ನುಮೂಳೆಯ ವಿರೂಪಗಳು (Spinal Deformities) ಸಮಸ್ಯೆಗಳ ಚಿಕಿತ್ಸಾತ್ಮಕ ಸೇವೆಗಳಿಗಾಗಿ NHM-RBSK ಕಾರ್ಯಕ್ರಮದಡಿಯಲ್ಲಿ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ (SXT) ವತಿಯಲ್ಲಿ ಅವಕಾಶವಿಲ್ಲದೇ ಇರುವುದರಿಂದ, ಸದರಿ ಬೆನ್ನುಮೂಳೆಯ ವಿರೂಪಗಳು (Spinal Deformities) ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಚಿಕಿತ್ಸಾತ್ಮಕ ಸೇವೆಗಳನ್ನು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಅನಿರ್ದಿಷ್ಟ ಶಸ್ತ್ರಚಿಕಿತ್ಸಾ ಪ್ಯಾಕೇಜ್ (Unspecified Surgical Package) ಅಡಿಯಲ್ಲಿ ಅಳವಡಿಸಿಕೊಂಡು `ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಕಾರ್ಯಗತಗೊಳಿಸಲು ಅನುಮೋದನೆ ಕೋರಿರುತ್ತಾರೆ ಎಂದಿದ್ದಾರೆ.
ಇದನ್ನೂ ಓದಿ: ಅಡುಗೆಗೆ ಬಳಸುವ ಮೆಣಸಿನ ಪುಡಿ ಅಸಲಿನ? ನಕಲಿನ? ಜಸ್ಟ್ ಹೀಗೆ ಪತ್ತೆ ಹಚ್ಚಿ..
ಬೆನ್ನುಮೂಳೆಯ ವಿರೂಪಗಳು (Spinal Deformities) ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಚಿಕಿತ್ಸಾತ್ಮಕ ಸೇವೆಗಳನ್ನು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ (Ayushman Cards) ಯೋಜನೆಯಡಿ ಸೇರ್ಪಡೆ ಮಾಡಲು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.
ಈ ಪತ್ರದಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ರಾಜ್ಯದ ಜನರಿಗೆ ಬೆನ್ನುಮೂಳೆಯ ವಿರೂಪಗಳು ಚಿಕಿತ್ಸಾತ್ಮಕ ಸೇವೆಗಳನ್ನು ಒದಗಿಸುವ ದೃಷ್ಟಿಯಿಂದ ಆಯುಷ್ಠಾನ್ ಭಾರತ – ಆರೋಗ್ಯ ಕರ್ನಾಟಕ ಯೋಜನೆಯ ಅನಿರ್ದಿಷ್ಟ ಶಸ್ತ್ರಚಿಕಿತ್ಸಾ ಪ್ಯಾಕೇಜ್ ಮತ್ತು ಬೆನ್ನುಮೂಳೆಯ ವಿರೂಪಗಳು (unspecified surgical package & Spinal Deformities) ಸ್ಕೋಲಿಯೋಸಿಸ್, ಕೈಫೋಸಿಸ್, ಲಾರ್ಡೋಸಿಸ್ಮತ್ತು ಇತರ (scoliosis, kyphosis, lordosis, etc) ಚಿಕಿತ್ಸಾ ಕಾರ್ಯವಿಧಾನಗಳನ್ನು ಸೇರ್ಪಡೆ ಮಾಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ ಮುಖಾಂತರ ಚಿಕಿತ್ಸಾತ್ಮಕ ಸೇವೆಗಳನ್ನು ಒದಗಿಸಲು ಈ ಕೆಳಕಂಡ ಷರತ್ತುಗಳನ್ನು ನೀಡಿ ಸರ್ಕಾರ ಆದೇಶಿಸಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ! ಈ ವಿಮೆ ಕಡ್ಡಾಯ..
ಸರ್ಕಾರ ಸೂಚಿಸಿರು ಷರತ್ತುಗಳು;
* ಬೆನ್ನುಮೂಳೆಯ ವಿರೂಪಗಳು (Spinal Deformities) ಚಿಕಿತ್ಸಾ ವಿಧಾನಗಳಿಗೆ ತಜ್ಞ ವೈದ್ಯರ ಸಮಿತಿಯ ಶಿಫಾರಸ್ಸಿನಂತೆ ಪ್ರತಿ ಶಸ್ತ್ರಚಿಕಿತ್ಸೆಗೆ ರೂ.1.5 ಲಕ್ಷಗಳನ್ನು ನಿಗಧಿಪಡಿಸಲಾಗಿದ್ದ, ಸದರಿ ಪ್ಯಾಕೇಜ್ ಹಾಗೂ ದರದ ನಿಗದಿಗೆ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯುವುದು.
* ಸದರಿ ಚಿಕಿತ್ಸಾ ವಿಧಾನಗಳಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ಒದಗಿಸಲು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳನ್ನು ನೋಂದಾವಣೆ ಮಾಡಲು ನಿಗಧಿಪಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.
* ಪ್ರಸ್ತಾಪಿತ ಚಿಕಿತ್ಸಾ ವಿಧಾನಗಳಿಗೆ ಪ್ರಸ್ತುತ ವಿಧಾನಗಳಂತೆ ಸರ್ಕಾರಿ ಆಸ್ಪತ್ರೆಗಳಿಗೆ ಅನುಮೋದಿತ ಪ್ಯಾಕೇಜ್ ದರದ ಶೇ.75 ರಷ್ಟು ಪಾವತಿಸತಕ್ಕದ್ದು.
* ಸರ್ಕಾರಿ ಆದೇಶ ಸಂಖ್ಯೆ: ಆಕುಕ 69 ಸಿಜಿಇ 2018, ದಿನಾಂಕ: 15.11.2018 ರಲ್ಲಿನ ಉಳಿದ ಎಲ್ಲಾ ಅಂಶಗಳು ಸದರಿ ಚಿಕಿತ್ಸಾ ವಿಧಾನಗಳಿಗೂ ಅನ್ವಯವಾಗುತ್ತವೆ.
* ಪ್ರಸ್ತಾಪಿತ ಕಾರ್ಯವಿಧಾನದ ಅಂದಾಜು ವೆಚ್ಚವು ಸಮಂಜಸವಾಗಿರತಕ್ಕದ್ದು ಮತ್ತು ಅದರ ಒಟ್ಟಾರೆ ಆರ್ಥಿಕ ಪರಿಣಾಮಗಳನ್ನು ಬಜೆಟ್‌ನಲ್ಲಿ ಒದಗಿಸಲಾದ ಅನುದಾನದಿಂದ ಪೂರೈಸತಕ್ಕದ್ದು.
* ಸದರಿ ಪ್ಯಾಕೇಜ್ ಅಡಿಯಲ್ಲಿ ಯಾವುದೇ ಚಿಕಿತ್ಸಾ ಕ್ರಮವನ್ನು ಸೇರಿಸುವ ಅಥವಾ ಅನುಮೋದನೆ ನೀಡಿರುವ ಚಿಕಿತ್ಸಾ ಕ್ರಮಗೆಳನ್ನು ಕೈಬಿಡುವ ಸಂದರ್ಭ ಉಂಟಾದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸತಕ್ಕದ್ದು.
ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ 4000 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





