Azim premji scholarship: 2025-26ನೇ ಸಾಲಿನ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಜೀಂ ಪ್ರೇಮ್‌ಜಿ ವಿದ್ಯಾರ್ಥಿವೇತನದ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳಿಗೆ 30,000 ವಿದ್ಯಾರ್ಥಿವೇತನವನ್ನು ಪಡೆಯಲು ಅವಕಾಶವಿದೆ. ವಿದ್ಯಾರ್ಥಿಗಳು ಕೊನೆಯ ದಿನಾಂಕ ಮುಕ್ತಾಯವಾಗುವುದ ಒಳಗಾಗಿ ಅರ್ಜಿ ಸಲ್ಲಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಭಾರತದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಅಜೀಂ ಪ್ರೇಮ್‌ಜಿ, ಇವರು ತಮ್ಮ ಅಪಾರವಾದ ಸಂಪತ್ತಿನ ಬಹುಭಾಗವನ್ನು ಮಕ್ಕಳ ಶಿಕ್ಷಣದ ಅಭಿವೃದ್ಧಿಗೆ ವಿರಳ ಮನಸ್ಸಿನಲ್ಲಿ ನೀಡಲು ಮುಂದಾಗಿದ್ದಾರೆ. ವಿದ್ಯಾರ್ಥಿಗಳ ಕನಸನ್ನು ನನಸು ಮಾಡುವ ಗುರಿಯಲ್ಲಿದು, ಅದೆಷ್ಟೋ ಬಡ ಮಕ್ಕಳ ಹಾಗೂ ಆರ್ಥಿಕ ಸ್ಥಿತಿಯ ಅಡಚಣೆ ಇರುವವರಿಗರ ನೆರವಾಗುತ್ತಿದ್ದಾರೆ.
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ
ಮುಖ್ಯ ಉದ್ದೇಶಗಳು:
* ಪ್ರತಿಭಾವಂತರಾದ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದ್ದು, ಅವರ ಮುಂದಿನ ಶಿಕ್ಷಣಕ್ಕೆ ನೆರವಿಗಾಗಿ.
* ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಯುವಕರಿಗೆ ವೃತ್ತಿ ಹಾಗೂ ಮೌಲ್ಯಾಧಾರಿತ ತರಬೇತಿ ನೀಡುವುದು.
* ಗ್ರಾಮೀಣ ಮತ್ತು ಬಡ ಪ್ರದೇಶಗಳ ಶಿಕ್ಷಣ ಮಟ್ಟವನ್ನು ಸುಧಾರಿಸಿ, ಯುವ ಪ್ರತಿಭೆಯನ್ನು ಗುರುತಿಸುವುದು.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ
ಅರ್ಹತೆಗಳು:
* ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
* ವಿದ್ಯಾರ್ಥಿಯು 10 ಹಾಗೂ 12 ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
* 2025-26ನೇ ಶೈಕ್ಷಣಿಕ ವರ್ಷಕ್ಕೆ ಮೊದಲ ವರ್ಷದಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
* ಭಾರತದ ಸರ್ಕಾರಿ/ಖಾಸಗಿ ವಿಶ್ವವಿದ್ಯಾಲಯದಲ್ಲಿ ಮಾನ್ಯತೆ ಪಡೆದ ಪದವಿಪೂರ್ವ ಪದವಿ ಅಥವಾ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶ ಪಡೆದಿರಬೇಕು.
ಅಗತ್ಯ ದಾಖಲೆಗಳು:
* ಆಧಾರ್ ಕಾರ್ಡ್
* 10 ಮತ್ತು 12 ನೇ ತರಗತಿಯ ಅಂಕಪಟ್ಟಿ
* ಬ್ಯಾಂಕ್ ಪಾಸ್ ಪುಸ್ತಕ
* ವಿದ್ಯಾರ್ಥಿಯ ಭಾವಚಿತ್ರ
* ವಿಶ್ವವಿದ್ಯಾಲಯ ಪ್ರವೇಶ ಪತ್ರ
* ಕಾಗದದ ಮೇಲೆ ಅರ್ಜಿದಾರರ ಸಹಿ ಪತ್ರ
ಈಗಾಗಲೇ ಅರ್ಜಿ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 31 ಜನವರಿ 2026 ಆಗಿದ್ದು, ಅದರಳಗಾಗಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು.

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (Azim Premji Scholarship:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





