ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಸಚಿವ ಬಿ.ಬಿ.ನಿಂಗಯ್ಯ ತಮ್ಮ ನಾಮಪತ್ರ ವಾಪಾಸ್ಸು ಪಡೆದಿದ್ದಾರೆ.
ಇದನ್ನೂ ಓದಿ; ಕೊಪ್ಪ ಮೂಲದ ಚಲನಚಿತ್ರ ನಟ ಸಂಪತ್ ಜಯರಾಮ್ ಸುಸೈಡ್
ಇದನ್ನೂ ಓದಿ; ಈ ಬಾರಿ ಕಾಂಗ್ರೆಸ್ 141 ಸ್ಥಾನ ಗೆಲ್ಲಲಿದೆ- ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಜೆ.ಡಿ.ಎಸ್.ನಿಂದ ಟಿಕೆಟ್ ವಂಚಿತರಾಗಿದ್ದ ಬಿ.ಬಿ. ನಿಂಗಯ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು ಬಿ.ಬಿ.ನಿಂಗಯ್ಯ ಕಣದಿಂದ ಹಿಂದಕ್ಕೆ ಸರಿದಿದ್ದಾರೆ.
ನಾಮಪತ್ರ ಹಿಂತೆಗೆದುಕೊಂಡ ನಂತರ ಪತ್ರಿಕೆಯೊಂದಿಗೆ ಮಾತನಾಡಿದ ಬಿ.ಬಿ.ನಿಂಗಯ್ಯ ಅವರು ನನ್ನ ಹಿತೈಷಿಗಳು, ಬೆಂಬಲಿಗರು, ಕುಟುಂಬದವರ ಅಭಿಪ್ರಾಯದ ಮೇರೆಗೆ ನಾಮಪತ್ರ ವಾಪಾಸ್ಸು ಪಡೆದಿದ್ದೇನೆ. ನಾನು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುವುದಿಲ್ಲ. ನನ್ನನ್ನು ಬೆಂಬಲಿಸಿರುವ ಮುಖಂಡರು, ಹಿರಿಯರ ಜೊತೆ ಚರ್ಚಿಸಿ ಒಂದೆರಡು ದಿನದಲ್ಲಿ ನನ್ನ ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳುತ್ತೇನೆ ಎಂದಿದ್ದಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹಿಂದೂ ಯುವಕನ ಬರ್ಬರ ಹತ್ಯೆ; ನಾಲ್ವರು ಹಂತಕರು ಅಂದರ್
- ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿ ಸಾವು
- ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ; ಪ್ರಾಣಾಪಾಯದಿಂದ ಪಾರು
ಇದೀಗ ಮೂಡಿಗೆರೆ ಕ್ಷೇತ್ರದಲ್ಲಿ 9 ಮಂದಿ ಉಳಿದುಕೊಂಡಿದ್ದಾರೆ.