Sunday, October 1, 2023
Homeಮಲೆನಾಡುಚಿಕ್ಕಮಗಳೂರುಮೂಡಿಗೆರೆ: ಎಂ ಪಿ ಕುಮಾರಸ್ವಾಮಿ ವಿರುದ್ಧ ಗುಡುಗಿದ ಬಿ ಬಿ ನಿಂಗಯ್ಯ

ಮೂಡಿಗೆರೆ: ಎಂ ಪಿ ಕುಮಾರಸ್ವಾಮಿ ವಿರುದ್ಧ ಗುಡುಗಿದ ಬಿ ಬಿ ನಿಂಗಯ್ಯ

ಮೂಡಿಗೆರೆ; (ನ್ಯೂಸ್ ಮಲ್ನಾಡ್ ವರದಿ)  ಬಿಜೆಪಿಯ ಕುಮಾರಸ್ವಾಮಿ ಜೆಡಿಎಸ್ ಬಂದಿದ್ದಾರೆ ಅವರಿಗೆ ಸ್ವಾಗತ ಆದರೆ ಕುಮಾರಸ್ವಾಮಿ ಮೊದಲು ಜೆಡಿಎಸ್ ಪಕ್ಷದಲ್ಲಿ ದುಡಿಯಲಿ ಎಂದು ಬಿ.ಬಿ.ನಿಂಗಯ್ಯ ಹೇಳಿದರು.

ಇದನ್ನೂ ಓದಿ;  ksrtc ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ; ಪುಟ್ಟ ಕಂದಮ್ಮ ಸೇರಿ ಆರು ಮಂದಿ ಬಲಿ

ಇದನ್ನೂ ಓದಿ; 5 ನಿಮಿಷದಲ್ಲಿ ಕೈ ಸೇರುತ್ತೆ ಡಿಜಿಟಲ್ ವೋಟರ್ ಐಡಿ

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ನಿನ್ನೆಯಷ್ಟೆ ಬಂದಿದ್ದಾರೆ, ಮೊದಲು ಪಕ್ಷದ ಸಿದ್ದಾಂತವನ್ನ ತಿಳಿದುಕೊಳ್ಳಬೇಕು, ಪಕ್ಷಕ್ಕೆ ಬಂದ ಕೂಡಲೇ ಮಣೆ ಹಾಕುವುದು ಸೂಕ್ತವಲ್ಲ ಎಂದು ಆರೋಪಿಸಿದರು.

ಈಗಾಗಲೇ ಮೂಡಿಗೆರೆಯಲ್ಲಿ ಯಶಸ್ವಿಯಾಗಿ ಪಂಚರತ್ನ ಯಾತ್ರೆ ಮಾಡಿದ್ದೆವು, ಡಿಸೆಂಬರ್ ನಲ್ಲಿ ಬಿಟ್ಟ 93 ಜನರ ಪಟ್ಟಿಯಲ್ಲಿ ನನ್ನ ಹೆಸರಿತ್ತು ಹಾಗೆ ಮೂಡಿಗೆರೆ ಜೆಡಿಎಸ್ ಘೋಷಿತ ಅಭ್ಯರ್ಥಿ ಆಗಿ ನನಗೆ ಬಿ ಫಾರಂ ನೀಡುತ್ತಾರೆಂದು ನನಗೆ ನಂಬಿಕೆ ಇದೆ. ಈಗಾಗಲೇ ಕೊಟ್ಯಾಂತರ ರೂಪಾಯಿ ಖರ್ಚು ಮಾಡಿದ್ದೇನೆ. ಹಾಗಾಗಿ ನನಗೆ ಬಿ ಫಾರಂ ನೀಡಬೇಕೆಂದು ಬಿ.ಬಿ.ನಿಂಗಯ್ಯ ಮನವಿ ಮಾಡಿದರು.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಪಕ್ಷದಲ್ಲಿ ಈಗ ಕುಮಾರಸ್ವಾಮಿಗೆ ಟಿಕೆಟ್ ಎಂಬ ಮಾತುಗಳು ಕೇಳಿ ಬರುತ್ತಿದೆ. ಹಾಗಾಗುವುದಿಲ್ಲ ಎಂದು ಭಾವಿಸಿದ್ದೇನೆ, ಕುಮಾರಸ್ವಾಮಿ ನನಗೆ ಬಿ ಫಾರಂ ನೀಡುತ್ತಾರೆ ನಾನು ಪಕ್ಷಕ್ಕಾಗಿ ದುಡಿದಿದ್ದೇನೆ, ನಾನು ಗೆಲ್ಲುತ್ತೇನೆ, ನನಗೇ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ👇:

ಕೊನೆಗೂ ಮೂಡಿಗೆರೆ ಹಾಗೂ ತರೀಕೆರೆಯ ಟಿಕೆಟ್ ಘೋಷಿದ ಕಾಂಗ್ರೆಸ್

ಕಾಂಗ್ರೆಸ್ ಪಕ್ಷವು 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಕಡೆಯ ಪಟ್ಟಿಯಲ್ಲಿ 43 ಜನರ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಕೊನಗೂ ಕಾಂಗ್ರೆಸ್ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಮೊದಲ 2 ಎರಡು ಪಟ್ಟಿ ಬಿಡುಗಡೆಗೊಳಿಸಿದ್ದ ಕಾಂಗ್ರೆಸ್ ಟಿಫ್ ಫೈಟ್ ಇರೋ ಕ್ಷೇತ್ರಗಳನ್ನು ಹಾಗೆ ಉಳಿಸಿಕೊಂಡಿತ್ತು. ಒಟ್ಟು 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಯಾರಿಗೆ ಯಾವ ಕ್ಷೇತ್ರದಿಂದ ಟಿಕೆಟ್ ಸಿಕ್ಕಿದೆ ಎಂಬುದರ ಮಾಹಿತಿ ಇಲ್ಲಿದೆ.

ಇದನ್ನೂ ಓದಿ; ನವೋದಯ ವಿವಿದ್ದೋದ್ದೇಶ ಸೌಹಾರ್ದ ಬ್ಯಾಂಕ್ ಮಾನೇಜರ್ ವಿರುದ್ಧ ದೂರು

ಇನ್ನೂ ಮೂಡಿಗೆರೆ ಕ್ಷೇತ್ರದಿಂದ ನಯನ ಮೋಟಮ್ಮಗೆ ಟಿಕೆಟ್ ಫೈನಲ್ ಆಗಿದೆ. ತರೀಕೆರೆ ವಿಧಾನಸಭಾ ಕ್ಷೇತ್ರದಿಂದ ಶ್ರೀನಿವಾಸ್ ಅವರಿಗೆ ಟಿಕೆಟ್ ಫೈನಲ್ ಆಗಿದೆ.

ಮೂಡಿಗೆರೆಯಿಂದ ಕಾಂಗ್ರೆಸ್ ನಲ್ಲಿ 5ಕ್ಕೂ ಹೆಚ್ಚು ಜನ ಟಿಕೆಟ್ ಆಕಾಂಕ್ಷಿಗಳಿದ್ದರು, ನಯನ ಮೋಟಮ್ಮಗೆ ಟಿಕೆಟ್ ನೀಡಬಾರದೆಂದು ಹಲವು ಬಾರಿ ಬಹಿರಂಗ ಸಭೆ ಮಾಡಿದ್ದರು. ನಯನ ಮೋಟಮ್ಮ ಇಲ್ಲಿಯವರಲ್ಲ ಅವರು ಹೊರಗಿನವರು, ಮೋಟಮ್ಮ ಅವರ ಮಗಳು ಎನ್ನುವುದೇ ಚುನಾವಣೆಗೆ ಸ್ಪರ್ಧಿಸಲು ಮಾನದಂಡವಾಗುವುದಿಲ್ಲ ಎಂಬ ಮಾತುಗಳು ಮೂಡಿಗೆರೆಯ ಕಾಂಗ್ರೆಸ್ ಆಕಾಂಕ್ಷಿಗಳಿಂದ ಕೇಳಿಬಂದಿತ್ತು. ತೀವ್ರ ವಿರೋಧದ ನಡುವೆಯೂ ನಯನ ಮೋಟಮ್ಮಗೆ ಕೈ ಟಿಕೆಟ್ ಘೋಷಣೆ ಮಾಡಿದೆ.

ಇನ್ನು ತರೀಕೆರೆಯಲ್ಲಿ ಗೋಪಿಕೃಷ್ಣ ಪ್ರಭಲ ಆಕಾಂಕ್ಷಿಯಾಗಿದ್ದರು. ಲಿಂಗಾಯಿತ ನಾಯಕ ದೋರನಾಳು ಪರಮೇಶ್ ಕೂಡ ರೇಸ್ ನಲ್ಲಿದ್ದರು. ಇತ್ತೀಚಿಗಷ್ಟೇ ದೋರನಾಳು ಪರಮೇಶ್ ಬೆಂಬಲಿಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್ ಗೆ ಬೆಂಕಿ ಕೊಟ್ಟು ಈ ಬಾರಿ ದೋರನಾಳ್ ಪರಮೇಶ್ ಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದರು. ಆದರೆ ನಿರೀಕ್ಷೆಯಂತೆ ಕಾಂಗ್ರೆಸ್ ಹೈಕಮಾಂಡ್ ಶ್ರೀನಿವಾಸ್ ಗೆ ಟಿಕೆಟ್ ನೀಡಿದೆ. ಚಿಕ್ಕಮಗಳೂರು ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲೂ ಟಿಕೆಟ್ ಘೋಷಣೆ ಮಾಡಿದ್ದು, ಬಾರೀ ಗೊಂದಲವಿರುವ ಚಿಕ್ಕಮಗಳೂರಿನ ಟಿಕೆಟ್ ಬಾಕಿ ಉಳಿಸಿಕೊಂಡಿದೆ.

Most Popular

Recent Comments