(B Dayananda:) ಐಪಿಎಲ್ 2025ನೇ ಆವೃತ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದ ನಂತರ, ನಗರದಲ್ಲಿ ವಿಜಯೋತ್ಸವವನ್ನು ಆಯೋಜಿಸಲಾಗಿತ್ತು. ಕಂಡು ಕೇಳರಿಯದ ಜನಸಾಗರವೇ ಹರಿದುಬಂದ ಹಿನ್ನಲೆಯಲ್ಲಿ, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಲ್ಲಿ ಹನ್ನೊಂದು ಜನ ಸಾವನ್ನಪ್ಪಿದ್ದರು.
ರಾಷ್ಟ್ರ ಮಟ್ಟದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ, ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಅಪರೂಪ ಎನ್ನುವಂತೆ, ಬೆಂಗಳೂರು ನಗರದ ಪೊಲೀಸ್ ಆಯುಕ್ತ ಬಿ.ದಯಾನಂದ ಅವರನ್ನು ಸರ್ಕಾರ ಅಮಾನತುಗೊಳಿಸಿತ್ತು. ಸರ್ಕಾರದ ಈ ನಿರ್ಧಾರಕ್ಕೂ ಅಲ್ಲಲ್ಲಿ ವಿರೋಧ ವ್ಯಕ್ತವಾಗುತ್ತಿದೆ.
ಆದರೆ, 35 ವರ್ಷಗಳಿಂದ ರಜೆ ಪಡೆಯದೇ ಕೆಲಸ ಮಾಡಿದ್ದ, ವೃತ್ತಿಗೆ ನಿಷ್ಠೆ ಮೆರೆದಿದ್ದ ನಿಷ್ಠಾವಂತ ಬೆಂಗಳೂರು ನಗರ ಪೊಲೀಸ್ ಬಿ.ದಯಾನಂದ ಅವರ ಬಗ್ಗೆ ಕೆಲವು ಇಂಟ್ರಸ್ಟಿಂಗ್ ಸಂಗತಿಗಳು ಇಲ್ಲಿವೆ ನೋಡಿ.
(B Dayananda:) 35 ವರ್ಷ ರಜೆ ಪಡೆಯದೇ ಕರ್ತವ್ಯ:
ಹೌದು, ಬಿ.ದಯಾನಂದ್ ಅವರು ಕಳೆದ 35 ವರ್ಷಗಳಲ್ಲಿ ಒಂದೇ ಒಂದು ದಿನ ರಜೆ ಇಲ್ಲದೇ ಕೆಲಸ ಮಾಡಿದ್ದಾಗಿ ಯೂಟ್ಯೂಬರ್ ಒಬ್ಬರ ಜೊತೆ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಭಾರತ್ ಪೆಟ್ರೋಲಿಯಂ ಲಿಮಿಟೆಡ್ ನಲ್ಲಿ ಜಾಬ್; SSLC, PUC ವಿದ್ಯಾರ್ಹತೆ
ʼಸಂಬಂಧಿಕರು ಕಾರ್ಯಕ್ರಮಗಳಿಗೆ ಆಹ್ವಾನಿಸುವುದನ್ನೆ ಬಿಟ್ಟು ಬಿಟ್ಟಿದ್ದಾರೆʼ:
ನಾನು ರಜೆ ಹಾಕುವುದಿಲ್ಲ. ಅದರಲ್ಲೂ ಇಂತಹ ಕಾರ್ಯಕ್ರಮಳಿಗೆ ಹೋಗಲ್ಲ ಎಂದು ಎಲ್ಲರಿಗೂ ಗೊತ್ತಿದೆ. ಹೀಗಾಗಿಯೇ ನನ್ನನ್ನು ಸಂಬಂಧಿಕರು, ಮನೆಯಲ್ಲಿ ಕಾರ್ಯಕ್ರಮಗಳಿಗೆ ಆಹ್ವಾನಿಸುವುದನ್ನೆ ಬಿಟ್ಟು ಬಿಟ್ಟಿದ್ದಾರೆ ಎಂದರು.
(B Dayananda:) ಎಂಗೇಜ್‌ಮೆಂಟ್ ಮುಂದೂಡಿಕೆ:
ಮಂಗಳೂರಿನಲ್ಲಿ ಕರ್ತವ್ಯದಲ್ಲಿದ್ದಾಗ ಒಮ್ಮೆ ಪರಿಸ್ಥಿತಿ ಸರಿ ಇರಲಿಲ್ಲ. ಕಾನೂನು ಸನ್ನಿವೇಶ ಎದುರಾಗಿ ನಾನು ಮಂಗಳೂರಲ್ಲೇ ಇರಬೇಕಾಯಿತು. ಅಲ್ಲಿ ಬಿಗಿ ಬಂದೋಬಸ್ತ್ ನೀಡಬೇಕಾಗಿತ್ತು. ಅವತ್ತೆ ನನ್ನ ಎಂಗೇಜ್‌ಮೆಂಟ್ ಇತ್ತು. ಕರ್ತವ್ಯ ಹಿನ್ನೆಲೆಯಲ್ಲಿ ನಾನು ಎಂಗೇಜ್‌ಮೆಂಟ್ ಅನ್ನು ಒಂದು ದಿನ ಮುಂದೂಡಿದ್ದೆ. ಅಂದಿನ ಸನ್ನಿವೇಶದಲ್ಲಿ ನನಗೆ ಬೆಂಗಳೂರಿಗೆ ಬರಲು ಆಗಲಿಲ್ಲ. ಅಲ್ಲದೆ ನನ್ನ ಮಕ್ಕಳ ನಾಮಕರಣಕ್ಕೆ ಹೋಗಿಲ್ಲ ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಪಾನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಇಂತಹವರಿಗೆ 10 ಸಾವಿರ ದಂಡ!
ಕರ್ತವ್ಯಕ್ಕಾಗಿ ವೈಯಕ್ತಿಕ ಜೀವನ ತೊರೆದು ಕಾರ್ಯ ನಿಷ್ಠೆ ಮೆರೆದ ಬಿ.ದಯಾನಂದ್ ಅವರಿಗೆ ಸಿಕ್ಕಿದ್ದು ಮಾತ್ರ ಅಮಾನತಿನ ಬಹುಮಾನ. ಅಮಾನತು ಹೆಸರಿನಲ್ಲಿ ಶಿಕ್ಷೆ ನೀಡಿದೆ ಎಂದು ನೆಟ್ಟಿಗರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (B Dayananda:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





