(Backlog Vacancies) ಕರ್ನಾಟಕ ಸರ್ಕಾರದ ವಿವಿಧ ಇಲಾಖೆ, ಸಂಸ್ಥೆ, ನಿಗಮಗಳು / ಮಂಡಳಿಗಳಲ್ಲಿನ ಬ್ಯಾಕ್ ಲಾಗ್ ಹುದ್ದೆಗಳ ನೇಮಕ ಸಂಬಂಧ ಇದೀಗ ಭರ್ಜರಿ ಗುಡ್ ನ್ಯೂಸ್ ಒಂದು ಹೊರಬಿದ್ದಿದೆ. ಹೌದು, ಈ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಗೆ ಅಧಿಸೂಚನೆ ಹೊರಡಿಸಬೇಕೆಂದು ಸಕ್ಷಮ ಪ್ರಾಧಿಕಾರಗಳಿಗೆ ನಿರ್ದೇಶನ ನೀಡಲಾಗಿದೆ. ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಆಯುಕ್ತರ ಕಚೇರಿಯ ಆದೇಶ ಹೇಳಲಾಗಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
ಸರ್ಕಾರದ ವಿವಿಧ ಇಲಾಖೆಗಳು / ನಿಗಮಗಳು / ಮಂಡಳಿಗಳು / ವಿಶ್ವವಿದ್ಯಾಲಯಗಳು / ಸಹಕಾರ ಸಂಸ್ಥೆಗಳು / ಅನುದಾನಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಖಾಲಿ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಾಧಿಕಾರಗಳಿಂದಲೇ ಅಧಿಸೂಚನೆ / ಪ್ರಕಟಣೆಯನ್ನು ಹೊರಡಿಸಬೇಕಿರುತ್ತದೆ. ಈ ಸಂಬಂಧವಾಗಿ, ಮಾನ್ಯ ಸಚಿವ ಸಂಪುಟದ ಉಪ ಸಮಿತಿ ಸಭೆಗಳಲ್ಲಿ, ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸಭೆಗಳಲ್ಲಿ ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಗಳಲ್ಲಿ ಹಾಗೂ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಗಳಲ್ಲಿ ಕೈಗೊಂಡ ತೀರ್ಮಾನದಂತೆ ಸರ್ಕಾರದ ವಿವಿಧ ಇಲಾಖೆಗಳು / ನಿಗಮಗಳು / ಮಂಡಳಿಗಳು / ವಿಶ್ವವಿದ್ಯಾಲಯಗಳು / ಸಹಕಾರ ಸಂಸ್ಥೆಗಳು / ಅನುದಾನಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳಿಗೆ ನಿರ್ದೇಶನ ನೀಡಲಾಗಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕೃತ ಆದೇಶದಲ್ಲಿ ಹೇಳಿದೆ.
ಇದನ್ನೂ ಓದಿ: ರಾಜ್ಯದ 18 ಸಾವಿರ ರೈತರಿಗೆ ಗುಡ್ ನ್ಯೂಸ್; ಸೌರ ಪಂಪ್ ಸೆಟ್ ಗಾಗಿ ನೋಂದಣಿ ಆರಂಭ; ರೈತರೇ ಹೀಗೆ ಅರ್ಜಿ ಸಲ್ಲಿಸಿ
ಹಾಗಾದರೆ ಯಾವಾಗ ಅಧಿಸೂಚನೆ ಬಿಡುಗಡೆ:
ಸರ್ಕಾರದ ಆರ್ಥಿಕ ಇಲಾಖೆ ಈಗಾಗಲೇ ಅನುಮತಿ ನೀಡಿದೆ. ಈಗ ನೇಮಕ ಪ್ರಾಧಿಕಾರಗಳು ವಿವಿಧ ಇಲಾಖೆಗಳು / ನಿಗಮಗಳು / ಮಂಡಳಿಗಳು / ವಿಶ್ವವಿದ್ಯಾಲಯಗಳು / ಸಹಕಾರ ಸಂಸ್ಥೆಗಳು / ಅನುದಾನಿತ ಶೈಕ್ಷಣಿಕ ಸಂಸ್ಥೆಗಳು ನೀಡುವ ನಿಯಮಗಳ ಪ್ರಕಾರದ ಪ್ರಸ್ತಾವನೆಗಳನ್ನು ಪರಿಗಣಿಸಿ ಅಧಿಸೂಚಿಸುವ ಕಾರ್ಯ ನಡೆಯಬೇಕಿದೆ. ಮೂಲಗಳ ಪ್ರಕಾರ ಜೂನ್ ಅಥವಾ ಜುಲೈ ತಿಂಗಳಲ್ಲಿ ಈ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅಧಿಸೂಚನೆಗಳನ್ನು ನಿರೀಕ್ಷಿಸಬಹುದಾಗಿದೆ.

ಇದನ್ನೂ ಓದಿ: ಯಶಸ್ವಿನಿ ಯೋಜನೆ ಫಲಾನುಭವಿಗಳಿಗೆ ದಿಢೀರನೆ ಬಂತು ಮತ್ತೊಂದು ಗುಡ್ ನ್ಯೂಸ್…!; ಏನದು ತಿಳಿಯಿರಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!






