Bagar Hukum: ಅನರ್ಹರ ಜಮೀನು ವಶಕ್ಕೆ ಪಡೆಯಲು ಸಜ್ಜು

Bagar Hukum: ಅನರ್ಹರ ಜಮೀನು ವಶಕ್ಕೆ ಪಡೆಯಲು ಕಂದಾಯ ಇಲಾಖೆ ಮುಂದಾಗಿದ್ದು, ಈ ಕುರಿತು ಸುತ್ತೋಲೆ ಹೊರಡಿಸಲಾಗಿದೆ.

ಇದನ್ನೂ ಓದಿ; ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಬೃಹತ್ ಉದ್ಯೋಗ ಮೇಳ

ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯ ಸಕ್ರಮ (ಬಗರ್ ಹುಕುಂ) (Bagar Hukum: ) ಕೋರಿರುವ 9.29 ಲಕ್ಷ ಅರ್ಜಿಗಳ ವಿಲೇವಾರಿಗೆ ಗಡುವು ವಿಧಿಸಿರುವ ಕಂದಾಯ ಇಲಾಖೆ, ಅನರ್ಹ ಅರ್ಜಿದಾರರ ವಶದಲ್ಲಿರುವ ಜಮೀನುಗಳನ್ನು ಸ್ವಾಧೀನಕ್ಕೆ ಪಡೆಯಲು

ಇದನ್ನೂ ಓದಿ; ಟ್ಯಾಕ್ಸಿಗಳ ಕಳ್ಳಾಟಕ್ಕೆ ಬ್ರೇಕ್; ಸಾರಿಗೆ ಇಲಾಖೆಯಿಂದ ಏಕರೂಪ ದರ ಅಸ್ತ್ರ ಪ್ರಯೋಗ

ಮುಂದಾಗಿದೆ. ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ ಕೋರಿ ಕರ್ನಾಟಕ ಭೂ ಕಂದಾಯ ಕಾಯ್ದೆಯ ನಮೂನೆ 50, ನಮೂನೆ 53 ಮತ್ತು ನಮೂನೆ 57ರ ಅಡಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಸುತ್ತೋಲೆ ಹೊರಡಿಸಿದ್ದಾರೆ.

ಇದನ್ನೂ ಓದಿ; sc, st ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ; ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಒಂದು ತಿಂಗಳೊಳಗೆ ಅರ್ಜಿ ತಿರಸ್ಕೃತ:
ಪ್ರಾಥಮಿಕ ಹಂತದ ಪರಿಶೀಲನೆ ಪೂರ್ಣಗೊಳಿಸಿ ಸಮಿತಿಯು ಗುರುತಿಸಿದ ಅನರ್ಹ ಅರ್ಜಿಯನ್ನು ಜಿಲ್ಲಾಧಿಕಾರಿಯು ಒಂದು ತಿಂಗಳೊಳಗೆ ತಿರಸ್ಕರಿಸಬೇಕು. ಅಂತಹ ಅರ್ಜಿದಾರರ ವಶದಲ್ಲಿರುವ ಜಮೀನುಗಳನ್ನು ಸರ್ಕಾರದ ಸ್ವಾಧೀನಕ್ಕೆ ತೆಗೆದುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸುತ್ತೋಲೆಯಲ್ಲಿ ನಿರ್ದೇಶನ ನೀಡಿದ್ದಾರೆ. ಅನಧಿಕೃತ ಸಾಗುವಳಿಯನ್ನು ಬಗರ್ ಹುಕುಂ ಅಡಿಯಲ್ಲಿ ಸಕ್ರಮಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ತಿರಸ್ಕೃತವಾದರೆ ಅಂತಹ ಜಮೀನುಗಳನ್ನು ಸರ್ಕಾರದ ಸ್ವಾಧೀನಕ್ಕೆ ಪಡೆಯಬೇಕು ಎಂಬ ಅಂಶ ಭೂ ಕಂದಾಯ ಕಾಯ್ದೆಯಲ್ಲೇ ಇದೆ. ಈವರೆಗೆ ಅದನ್ನು ಸಮರ್ಪಕವಾಗಿ ಜಾರಿಗೊಳಿಸಿರಲಿಲ್ಲ. ಈ ಬಾರಿ ಕಾಯ್ದೆ ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಕಟಾರಿಯಾ ತಿಳಿಸಿದರು.

ಇದನ್ನೂ ಓದಿ; ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಉದ್ಯೋಗ; ನೇರ ಸಂದರ್ಶನ ಮೂಲಕ ಆಯ್ಕೆ

ಇನ್ನು ಗೋಮಾಳ, ಮೀಸಲು ಅರಣ್ಯ, ದೇವರ ಕಾಡು, ಗುಂಡು ತೋಪು, ಕೆರೆಯಂಗಳ, ಫೂಟ್ ಖರಾಬು, ಸ್ಮಶಾನ ಹಾಗೂ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟಿರುವ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಅವಕಾಶವಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಿ, ಆ ಜಮೀನುಗಳನ್ನು ಸರ್ಕಾರದ ವಶಕ್ಕೆ ಪಡೆಯುವ ಹೊಣೆಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ.

Bagar Hukum: ಅನರ್ಹರ ಜಮೀನು ವಶಕ್ಕೆ ಪಡೆಯಲು ಸಜ್ಜು
Bagar Hukum: ಅನರ್ಹರ ಜಮೀನು ವಶಕ್ಕೆ ಪಡೆಯಲು ಸಜ್ಜು

ಅನಧಿಕೃತ ಸಾಗುವಳಿ ಖಚಿತ ಪಡಿಸಲು ಇಸ್ರೊದ ನೆರವು:
ಅರ್ಹತೆಗೆ ನಿಗದಿಪಡಿಸಿರುವ ಅವಧಿಯಲ್ಲಿ ಅರ್ಜಿದಾರರು ಸದರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿದ್ದರು ಎಂಬುದನ್ನು ಖಚಿತ ಪಡಿಸಿಕೊಳ್ಳಲು ಕರ್ನಾಟಕ ರಾಜ್ಯ ದೂರಸಂವೇದಿ ಮತ್ತು ಅನ್ವಯಿಕ ಕೇಂದ್ರದಿಂದ ಪಡೆದ ಉಪಗ್ರಹ ಚಿತ್ರಗಳ ಆಧಾರದಲ್ಲಿ ಪರಿಶೀಲನೆ ನಡೆಯಲಿದೆ. ಇದಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ನೆರವನ್ನೂ ಪಡೆಯಲಾಗುವುದು ಎಂದು ಕಟಾರಿಯಾ ತಿಳಿಸಿದರು.

ಇದನ್ನೂ ಓದಿ; ಮಹಿಳೆಯರೇ ಸ್ವಂತ ಉದ್ಯಮ ಪ್ರಾರಂಭಿಸೋ ಆಸಕ್ತಿ ಇದೆಯೇ?; ಈ ಯೋಜನೆಯಡಿ ಸಿಗುತ್ತೆ 3 ಲಕ್ಷ ಸಾಲ

ಬಗರ್ ಹುಕುಂ ಸಮಿತಿಗಳ ಎಲ್ಲಾ ಸದಸ್ಯರಿಗೂ ಆಧಾರ್ ಇ-ಕೆವೈಸಿ ಜೋಡಿಸಿದ ಬಯೊಮೆಟ್ರಿಕ್ ಗುರುತು ನೀಡಲಾಗುತ್ತಿದೆ. ಅದರ ಆಧಾರದಲ್ಲೇ ಡಿಜಿಟಲ್ ಸಹಿಯನ್ನೂ ಒದಗಿಸಲಾಗುತ್ತದೆ. ಆಧಾರ್ ಇ-ಕೆವೈಸಿ ಮತ್ತು ಡಿಜಿಟಲ್ ಸಹಿ ದಾಖಲಿಸಿದ ಬಳಿಕವೇ ಸಭಾ ನಡವಳಿಗಳನ್ನು ದಾಖಲಿಸುವಂತಹ ವ್ಯವಸ್ಥೆಯನ್ನು ರೂಪಿಸಲಾಗಿದೆ. ಬಗರ್ ಹುಕುಂ ಅರ್ಜಿಗಳ ವಿಲೇವಾರಿಯಲ್ಲಿ ಅಕ್ರಮ ತಡೆಗೆ ಡಿಜಿಟಲ್ ತಂತ್ರಜ್ಞಾನದ ಬಳಕೆಗೆ ಒತ್ತು ನೀಡಲಾಗಿದೆ.

ಈ ಹಿಂದೆ ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಕೋಲಾರ ಜಿಲ್ಲೆಗಳಲ್ಲಿ ಬಗರ್ ಹುಕುಂ (Bagar Hukum: ) ಅರ್ಜಿಗಳ ವಿಲೇವಾರಿಯಲ್ಲಿ ಅಕ್ರಮ ನಡೆದಿರುವುದು ಪತ್ತೆಯಾಗಿದ್ದು, ಕೆಲವು ಅಧಿಕಾರಿಗಳ ಬಂಧನ ಕೂಡ ಆಗಿದೆ. ಈ ಬಾರಿ ಅಂತಹ ಪ್ರಕರಣ ಮರುಕಳಿಸಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುವ ಎಚ್ಚರಿಕೆ ಕಂದಾಯ ಇಲಾಖೆ ನೀಡಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  2. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  3. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  4. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  5. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  6. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  7. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  8. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  9. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  10. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  11. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  12. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  13. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  14.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  15. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  16. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  17.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  18. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  19. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  20. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  21.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  22. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  23. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇