ಟೋಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಒಲಿದಿದ್ದು, ಕುಸ್ತಿಯಲ್ಲಿ ಭಾರತ ಅಥ್ಲೀಟ್ ಬಜರಂಗ್ ಪುನಿಯಾ ಕಂಚಿನ ಪದಕವನ್ನು ಜಯಿಸಿದ್ದಾರೆ.
ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಟೋಕಿಯೋ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದಿದ್ದು. ಇಂದು ನಡೆದ ಕಂಚಿನ ಪದಕಕ್ಕಾಗಿ ನಡೆದ ಹೋರಾಟದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ಧ ಗೆಲುವನ್ನು ದಾಖಲಿಸಿ ಕಂಚಿನ ಪದಕವನ್ನು ಗೆದ್ದಿದ್ದಾರೆ.
65 ಕೆಜಿ ವಿಭಾಗದ ಫ್ರೀಸ್ಟೈಲ್ ಪಂದ್ಯದಲ್ಲಿ ಬಜರಂಗ್ ಪುನಿಯಾ ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ಧ 8-೦ ಅಂತರದ ಭರ್ಜರಿ ಗೆಲುವು ಸಾಧಿಸಿ. ಆ ಮೂಲಕ ಭಾರತಕ್ಕೆ ಮತ್ತೊಂದು ಕಂಚಿನ ಪದಕವನ್ನು ತಂದುಕೊಟ್ಟಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು 6 ನೇ ಪದಕವಾಗಿದೆ.