Bangalore Police Suspended: ಬೆಂಗಳೂರು: ವಂಚನೆ ಪ್ರಕರಣದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟು ಕೇರಳ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಬೆಂಗಳೂರಿನ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಇನ್‌ಸ್ಪೆಕ್ಟರ್ ಶಿವಪ್ರಕಾಶ್, ಹೆಡ್ ಕಾನ್‌ಸ್ಟೇಬಲ್‌ಗಳಾದ ವಿಜಯ್ ಕುಮಾರ್, ಶಿವಾನಿ, ಕಾನ್‌ಸ್ಟೇಬಲ್ ಸಂದೇಶ್ ಅಮಾನತುಗೊಂಡಿದ್ದಾರೆ. ಎಸಿಪಿ ವರದಿ ಆಧರಿಸಿ ಈ ನಾಲ್ವರನ್ನೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅಮಾನತುಗೊಳಿಸಿದ್ದಾರೆ.
ಇದನ್ನೂ ಓದಿ; ಸಿನಿಮಾದಲ್ಲಿ ಶೃಂಗೇರಿ ನಟಿಯರ ಹವಾ

ಏನಿದು ಪ್ರಕರಣ?
ಕೇರಳದಲ್ಲಿ ಕರ್ನಾಟಕದ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ಸೇರಿದಂತೆ ನಾಲ್ವರು ಪೊಲೀಸರನ್ನು ಬಂಧಿಸಲಾಗಿತ್ತು. ಆರೋಪಿಯನ್ನು ಬಂಧನ ಮಾಡದೇ ಇರಲು 4 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಕರ್ನಾಟಕದ ಪೊಲೀಸರನ್ನು ಕೇರಳದ ಕೊಚ್ಚಿಯಲ್ಲಿ ಅರೆಸ್ಟ್ ಮಾಡಲಾಗಿತ್ತು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಮೂಡಿಗೆರೆ: ಪ್ರವಾಸಿಗರ ಹಾಟ್ ಸ್ಪಾಟ್ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ಬ್ರೇಕ್
- ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಅಟ್ರಾಸಿಟಿ ದೂರು, ದಾಖಲಾಗುತ್ತಾ ಕೇಸ್!
- ನಭಾ, ಸಂಗೀತ ಬಳಿಕ ಶೃಂಗೇರಿಯಿಂದ ಇನ್ನೊಂದು ಪ್ರತಿಭೆ; ಬೆಳ್ಳಿತೆರೆಯಲ್ಲಿ ಮಿಂಚಲು ರೆಡಿಯಾದ ಈ ನಟಿ ಯಾರು?
ಬಂಧಿತರು ಬೆಂಗಳೂರು ವೈಟ್ ಫೀಲ್ಡ್ ಸೆನ್ ಪೊಲೀಸರಾಗಿದ್ದಾರೆ. ಇವರನ್ನು ಕೊಚ್ಚಿಯ ಕಲಂಚೇರಿ ಪೊಲೀಸರು ಬಂಧಿಸಿದ್ದಾರೆ. ಆನ್‌ಲೈನ್ ವಂಚನೆ ಕೇಸ್ ಮೇರೆಗೆ ಹೋಗಿದ್ದಾಗ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪದಡಿ ಬಂಧನಕ್ಕೊಳಗಾಗಿದ್ದಾರೆ.


Bangalore Police Suspended: ಘಟನೆ ಹಿನ್ನಲೆ:
ಉದ್ಯೋಗ ಕೊಡಿಸುವ ನೆಪದಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಚಂದಕ್ ಶ್ರೀಕಾಂತ್ ಅವರಿಂದ ೨೬ ಲಕ್ಷ ರೂ. ವಸೂಲಿ ಮಾಡಿ ಆನ್ ಲೈನ್ ವಂಚಕರು ಮೋಸ ಮಾಡಿದ್ದರು. ಈ ಬಗ್ಗೆ ಜೂ.14 ರಂದು ವೈಟ್ ಫೀಲ್ಡ್ ವಿಭಾಗದ ಸಿಇಎಸ್ ಠಾಣೆಯಲ್ಲಿ ಟೆಕ್ಕಿ ಶ್ರೀಕಾಂತ ದೂರು ದಾಖಲಿಸಿದ್ದರು. ಅದರನ್ವಯ ತನಿಖೆ ಆರಂಭಿಸಿದ ಇನ್ಸ್ಪೆಕ್ಟರ್ ಶಿವಪ್ರಕಾಶ್ ತಂಡವು ಹಣ ವರ್ಗಾವಣೆ ಜಾಡು ಹಿಡಿದಾಗ ಮಡಿಕೇರಿ ಜಿಲ್ಲೆಯ ಐಸಾಕ್ ಎಂಬಾತನ ಐಸಿಐಸಿಐ ಬ್ಯಾಂಕ್ ಖಾತೆಗೆ 10 ಸಾವಿರ ರೂ ವರ್ಗಾವಣೆಯಾಗಿರುವ ಸಂಗತಿ ಗೊತ್ತಾಗಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ಲಂಚಕ್ಕೆ ಬೇಡಿಕೆ: ಸಾಂಖೀಕ ನಿರೀಕ್ಷಕ ಲೋಕಾಯುಕ್ತ ಬಲೆಗೆ
ಕೂಡಲೇ ಆತನನ್ನು ವಶಕ್ಕೆ ಪಡೆದು ಪೊಲೀಸರು ಪ್ರಶ್ನಿಸಿದಾಗ ರಾಜೇಶ್ ಎಂಬಾತನ ಪರವಾಗಿ ತಾನು ಬ್ಯಾಂಕ್ ಖಾತೆ ತೆರೆದಿದ್ದಾಗಿ ಹೇಳಿಕೆ ನೀಡಿದ ಬಳಿಕ ರಾಜೇಶ್‌ನನ್ನು ಪೊಲೀಸರು ಗ್ರಿಲ್ ಮಾಡಿದಾಗ ಆತ ಕೇರಳ ಮೂಲದ ಪರೇಶ್ ಹಾಗೂ ನಿಶಾಂತ್ ಹೆಸರು ಬಾಯಿಟ್ಟ, ಹೀಗೆ ವಂಚನೆ ಜಾಲ ಬಿಚ್ಚಿಕೊಳ್ಳುತ್ತ ಸಾಗಿದೆ. ಈ ಮಾಹಿತಿ ಆಧರಿಸಿ ಕೇರಳಕ್ಕೆ ತೆರಳಿದ ಪೊಲೀಸರು, ಅಲ್ಲಿ ಪರೇಶ್ ಹಾಗೂ ನಿಶಾಂತ್‌ನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಇಡೀ ವಂಚನೆ ಜಾಲದ ಸೂತ್ರಧಾರ ಮಲ್ಲಪ್ಪುರಂ ಜಿಲ್ಲೆಯ ನೌಶಾದ್ ಎಂಬುದು ಗೊತ್ತಾಗಿದೆ.

ಈ ಸುಳಿವು ಬೆನ್ನತ್ತಿ ಕೇರಳಕ್ಕೆ ತೆರಳಿದ ಪಿಐ ಶಿವಪ್ರಕಾಶ್ ನೇತೃತ್ವದ ತಂಡವು, ಜು.31 ರಂದು ಸೋಮವಾರ ನೌಶಾದ್ ಹಾಗೂ ಆತನ ಸಹಚರರಾದ ನಿಖಿಲ್ ಮತ್ತು ಅಖಿಲ್ ನನ್ನು ಎರ್ನಾಕುಲಂನ ಪಲ್ಲುರ್ತಿಯಲ್ಲಿ ಸೆರೆ ಹಿಡಿದಿದ್ದಾರೆ. ಆದರೆ ಅಪಾದಿತ ಅಖಿಲ್ ನನ್ನು ಬಿಡುಗಡೆಗೊಳಿಸಲು 3.96 ಲಕ್ಷ ರು. ಅನ್ನು ಇನ್ಸ್ಪೆಕ್ಟರ್ ಶಿವಪ್ರಕಾಶ್ ತಂಡ ವಸೂಲಿ ಮಾಡಿತ್ತು ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕಲಂಶ್ಮೇರಿ ಠಾಣೆಗೆ ಅಖಿಲ್ ಪರ ವಕೀಲರು ದೂರು ನೀಡಿದ್ದಾರೆ. ಅಲ್ಲದೆ ಪೊಲೀಸದ ಕಾರಿನಲ್ಲಿ 3 ಲಕ್ಷ ರು. ಹಣ ಕೂಡ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.








Leave a Reply