basanagouda patil yatnal:ಬಿಜೆಪಿಯಿಂದ 6 ವರ್ಷ ಕಾಲ ಬಸನಗೌಡ ಪಾಟೀಲ್ ಉಚ್ಚಾಟನೆ!

(basanagouda patil yatnal:) ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಕಾಲ ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ.


ಇದನ್ನೂ ಓದಿ: CET ಪರೀಕ್ಷೆಯ ದಿನಾಂಕ ಬದಲಾವಣೆ.. ಹೆಚ್ಚಿನ ಇಲ್ಲಿದೆ ಮಾಹಿತಿ


ಹೌದು, ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಿ.ಎಸ್.ಯಡಿಯೂರಪ್ಪ ನಿರಂತರ ಅವಹೇಳನವಾಗಿ ಮಾತನಾಡುತ್ತಿದ್ದ ಹಿನ್ನೆಲೆಯಲ್ಲಿ ನೋಟಿಸ್ ಕೊಡಲಾಗಿತ್ತು. ಅದಕ್ಕೆ ಉತ್ತರವನ್ನೂ ಕೊಟ್ಟಿದ್ದರು. ಇದೀಗ ದೆಹಲಿ ಬಿಜೆಪಿ ವರಿಷ್ಠರು ಶಾಸಕ ಬಸನಗೌಡ ಪಾಟೀಲ್ ಉಚ್ಚಾಟಿಸಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಆದೇಶಿಸಿದ್ದಾರೆ.


ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್‌ ಆಫರ್; ಆಕರ್ಷಕ ಸಂಬಳ


ಉಚ್ಚಾಟನೆ ಆದೇಶದಲ್ಲಿ ಏನಿದೆ?:
ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ ಗೆ ನಿಮ್ಮ ಪ್ರತಿಕ್ರಿಯೆಯ ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ, ನೀವು ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ.


ಇದನ್ನೂ ಓದಿ: ಈ ತಿಂಗಳ ಕೊನೆಯ ವಾರ ಗಜಕೇಸರಿ ರಾಜಯೋಗ; ಈ 5 ರಾಶಿಗೆ ಅದೃಷ್ಟವೋ ಅದೃಷ್ಟ!


ಆದ್ದರಿಂದ ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷದ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ ಮತ್ತು ನೀವು ಇಲ್ಲಿಯವರೆಗೆ ಹೊಂದಿದ್ದ ಯಾವುದೇ ಪಕ್ಷದ ಹುದ್ದೆಯಿಂದ ನಿಮ್ಮನ್ನು ತೆಗೆದು ಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

basanagouda patil yatnal:ಬಿಜೆಪಿಯಿಂದ 6 ವರ್ಷ ಕಾಲ ಬಸನಗೌಡ ಪಾಟೀಲ್ ಉಚ್ಚಾಟನೆ!
basanagouda patil yatnal:ಬಿಜೆಪಿಯಿಂದ 6 ವರ್ಷ ಕಾಲ ಬಸನಗೌಡ ಪಾಟೀಲ್ ಉಚ್ಚಾಟನೆ!

ಇತ್ತೀಚಿನ ಜನಪ್ರಿಯ ಸುದ್ದಿಗಳು (basanagouda patil yatnal:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?