ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಆಲ್ದೂರಿನಿಂದ ಬೀರೂರಿಗೆ ಬಂದಿದ್ದ ಕುಟುಂಬವೊಂದು ಕಾರಿಗೆ ಪೆಟ್ರೋಲ್ ಹಾಕಿಸಲು ಬಂದ ವೇಳೆ ಕಾರಿನ ಬ್ಯಾಟರಿ ಬಸ್ಟ್ ಆಗಿ ಬೆಂಕಿ ಹೊತ್ತಿಕೊಂಡ ಘಟನೆ ಇಂದು ಮಧ್ಯಾಹ್ನ ಚಿಕ್ಕಮಗಳೂರು ಜಿಲ್ಲೆಯ ಬೀರೂರಲ್ಲಿ ನಡೆದಿದೆ.
ಇದನ್ನೂ ಓದಿ; ಹಿಟ್ ಅಂಡ್ ರನ್; ತಪ್ಪಿದ ಭಾರಿ ಅನಾಹುತ

ಇದನ್ನೂ ಓದಿ; ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೊಡ್ಡಘಟ್ಟ ಸಮೀಪದ ರಿಲಯನ್ಸ್ ಪೆಟ್ರೋಲ್ ಬಂಕ್ ನಲ್ಲಿ ಘಟನೆ ನಡೆದಿದೆ.
ಇನ್ನು ಕಾರಿಗೆ ಬೆಂಕಿ ಹೊತ್ತಿಕೊಂಡ ಬೆನ್ನಲೆ ಕಾರಿನಲ್ಲಿದ್ದ ಮೂವರು ಮಹಿಳೆಯರು ಹಾಗೂ ಮಗುವನ್ನ ಸ್ಥಳೀಯರು ರಕ್ಷಿಸಿದ್ದಾರೆ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪಿಎಸ್ಐ ಮನೆಗೆ ಬೆಂಕಿ ಇಟ್ಟ ಕಿಡಿಗೇಡಿಗಳು
- ಒಬ್ಬ ಶಾಸಕರ ಸಂಬಳವೆಷ್ಟು ಗೊತ್ತಾ? ಮಾಜಿ ಶಾಸಕರಿಗೂ ಸಂಬಳ ಸಿಗುತ್ತಾ?
- ಸರಗಳ್ಳರ ಕೈಚಳಕ: ಮಹಿಳೆಯ ಚಿನ್ನದ ಸರ ಕಿತ್ತು ಪರಾರಿ!
ಆಕಸ್ಮಿಕವಾಗಿ ಬ್ಯಾಟರಿ ಸ್ಪೋಟಿಸಿ ಬೆಂಕಿ ತಗುಲಿದೆ. ಪೆಟ್ರೋಲ್ ಬಂಕ್ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸಿ ಅನಾಹುತ ತಪ್ಪಿಸಿದ್ದಾರೆ.
ನಾನು ಕಾಂಗ್ರೆಸ್ ಶಾಸಕನಾಗಿರಬಹುದು ಆದರೆ ನಾನೊಬ್ಬ ಸಂಘದ ಸ್ವಯಂಸೇವಕ ಎನ್ನಲು ಹೆಮ್ಮೆಯಿದೆ
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಾನೊಬ್ಬ ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಚಿಕ್ಕಮಗಳೂರು ಶಾಸಕ ಎಚ್. ಡಿ ತಮ್ಮಯ್ಯ ಹೇಳಿದ್ದಾರೆ.
ಇದನ್ನೂ ಓದಿ; ಹೈಟೆಕ್ ವೇಶ್ಯಾವಾಟಿಕೆ ದಂಧೆ ಮೇಲೆ ರೈಡ್
ನಗರದಲ್ಲಿ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಣಪತಿ ಸಮಿತಿಯಲ್ಲಿ ಕೋದಂಡ ಸ್ವಾಮಿ ದೇವಸ್ಥಾನದ ಸಮಿತಿಯಲ್ಲಿ ಅಧ್ಯಕ್ಷನಾಗಿ ಕೆಲಸ ಮಾಡುವಾಗ ದಾನಿಗಳ ಬಳಿ ಸಂಗ್ರಹಕ್ಕೆ ಹೋಗುತ್ತಿದ್ದ ಸಮಯದಲ್ಲಿ ಅವರು ನೀಡುತ್ತಿದ್ದ 500 ರೂ. ದೊಡ್ಡ ಹಣವಾಗುತ್ತಿತ್ತು. ಇದನ್ನು ಚಂದ ವಸೂಲಿ ಎಂದು ಹೇಳುವುದಿಲ್ಲ ಸಂಘದಲ್ಲಿ ಸಂಗ್ರಹ ಎಂದು ಹೇಳಿಕೊಂಡಿದ್ದಾರೆ. ನಾನು ಬಿಜೆಪಿಯಲ್ಲಿ 15 ರಿಂದ 16 ವರ್ಷ ಕೆಲಸ ಮಾಡಿದ್ದೇನೆ. ಈಗಲೂ ನಾನೊಬ್ಬ ಸಂಘದ (rss) ಸ್ವಯಂ ಸೇವಕ. ಕಾಂಗ್ರೆಸ್ ಪಕ್ಷದಿಂದ ಶಾಸಕನಾಗಿದ್ದರೂ ಸಂಘದಲ್ಲಿನ ಶಿಸ್ತಿನಿಂದ ನಾನೊಬ್ಬ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು ಹೇಳಿಕೊಂಡಿದ್ದಾರೆ.
ನಾನು ಜಾತ್ಯಾತೀತ ವ್ಯಕ್ತಿ, ಜಾತ್ಯಾತೀತ ಶಾಸಕ ಪ್ರಮಾಣ ವಚನ ಸ್ವೀಕರಿಸುವಾಗ ಅದೇ ನಿಟ್ಟಿನಲ್ಲಿ ಸ್ವೀಕರಿಸಿದ್ದೇನೆ. ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿಯೇ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದಿದ್ದಾರೆ.