ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಸಮೀಪದಲ್ಲಿ ನಡೆದಿದೆ. ರೈತ ತಿಮ್ಮನಾಯಕ(72) ಗಂಭೀರವಾಗಿ ಗಾಯಗೊಂಡವರು.
ಇದನ್ನೂ ಓದಿ; ಅನುಮಾನಾಸ್ಪದ ಸಾವಿನ ಪ್ರಕರಣ ಭೇದಿಸಿದ ಪೊಲೀಸರು
ಕಾರ್ಗಲ್ ಸಮೀಪದ ಹೆನ್ನಿ -ಜಾಡ್ಗಲ್ ಬಳಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ಕರಡಿ ತಲೆ ಸೇರಿದಂತೆ ದೇಹದ ಭಾಗಗಳಿಗೆ ಕಚ್ಚಿ ಗಾಯಗೊಳಿಸಿದೆ. ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ; ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ
ಮೊಬೈಲ್ ಬಳಕೆದಾರರಿಗೆ ಗುಡ್ ನ್ಯೂಸ್; ಮೇ 1ರಿಂದ ಫೇಕ್ ಕಾಲ್, ಮೆಸೇಜ್ ಗೆ ನಿರ್ಬಂಧ
ಟೆಲಿಕಾಂ ನೀತಿಯಲ್ಲಿ ಮೇ 1 ರಿಂದ ಮಹತ್ತರ ಬದಲಾವಣೆ ಆಗುತ್ತಿದೆ ಇಷ್ಟು ದಿನ ಅನಗತ್ಯ ಕಾಲ್, ಮೆಸೇಜುಗಳಿಂದ ಕಿರಿಕಿರಿ ಅನುಭವಿಸುತ್ತಿದ್ದ ಮೊಬೈಲ್ ಬಳಕೆದಾರರಿಗೆ ಇದೀಗ ಟ್ರಾಯ್ ಶುಭ ಸುದ್ದಿಯನ್ನು ನೀಡಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಜಿಲ್ಲೆಯ ಅಂತಿಮ ಮತದಾರರ ಪಟ್ಟಿ ಪ್ರಕಟ
- ಚುನಾವಣಾ ಅಧಿಕಾರಿಗಳು ಪಡೆಯುವ ಗೌರವಧನ ಎಷ್ಟು ಗೊತ್ತಾ? ಈ ಸ್ಟೋರಿ ಓದಿ.
- ಆಧಾರ್ ಕಾರ್ಡ್ನಲ್ಲಿ ನಿಮ್ಮ ಫೋಟೋ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಫೇಕ್ ಕಾಲ್ ಹಾಗೂ ಮೆಸೇಜ್‌ಗೆ ಟ್ರಾಯ್ ಕಡಿವಾಣ ಹಾಕಿದೆ. ಮೊಬೈಲ್ ಬಳಕೆದಾರರು ಪ್ರತಿನಿತ್ಯ ಲೋನ್, ಬಂಪರ್ ಬಹುಮಾನ ಸೇರಿದಂತೆ ಹಲವು ಅನಗತ್ಯ ಕರೆ ಹಾಗೂ ಸಂದೇಶಗಳಿಂದ ಹೈರಾಣಾಗುತ್ತಿದ್ದವರಿಗೆ ಟ್ರಾಯ್ ಸಿಹಿ ಸುದ್ದಿ ನೀಡಿದೆ.
ಇದನ್ನೂ ಓದಿ; ಅಧಿಕಾರಕ್ಕೆ ಬರುವ ಮುನ್ನವೇ ಹೆಚ್ಚಾಯ್ತು ಸಿಎಂ ಕೂಗು
ಮೊಬೈಲ್‌ಗಳಿಗೆ ಬರುವ ಅನಗತ್ಯ ಮೆಸೇಜ್‌ಗಳಿಗೆ ಕಡಿವಾಣ ಹಾಕುವಂತೆ ಟೆಲಿಕಾಂ ಆಪರೇಟರ್‌ಗಳಿಗೆ ನಿಯಂತ್ರಕ ಸಂಸ್ಥೆ ಟ್ರಾಯ್ ಗುರುವಾರ ಸೂಚನೆ ನೀಡಿದೆ. ಮೇ.01 ರಿಂದ ಟೆಲಿಕಾಂ ಕಂಪನಿಗಳು ಅನಗತ್ಯ ಕಾಲ್ ಹಾಗೂ ಸಂದೇಶ ಫಿಲ್ಟರ್ ಮಾಡಲಿದೆ. ಇದರಿಂದಾಗಿ ಗ್ರಾಹಕರಿಗೆ ಅನಗತ್ಯ ಮೆಸೇಜ್‌ಗಳಿಂದ ಉಂಟಾಗುವ ಕಿರಿಕಿಯಿಂದ ಮುಕ್ತಿ ಸಿಗಲಿದೆ.
ಇನ್ನು ಅಪರಿಚಿತ ನಂಬರ್, ಸ್ಪಾಯಮ್ ಅಥವಾ ಅನಪೇಕ್ಷಿತ ಕರೆಗಳ ಸಮಸ್ಯೆಯನ್ನು ನಿವಾರಿಸಲು ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊಸ ಮಾರ್ಗ ಕಂಡು ಹಿಡಿದಿದೆ. ಫೋನ್‌ನಲ್ಲಿ ಸೇವ್ ಆಗಿರದ ನಂಬರ್‌ಗಳಿಂದ ಯಾರಾದರೂ ಕರೆ ಮಾಡಿದರೆ ಕರೆ ಮಾಡಿದ ವ್ಯಕ್ತಿಯ ಹೆಸರು ನಿಮ್ಮ ಮೊಬೈಲ್‌ನಲ್ಲಿ ಕಂಡುಬರುವಂತೆ ಮಾಡುವ ಹೊಸ ಉಪಕ್ರಮವನ್ನು ಟ್ರಾಯ್ ಶೀಘ್ರವೇ ಜಾರಿಗೆ ತರಲು ಸಜ್ಜಾಗಿದೆ. ಟೆಲಿಕಾಂ ಆಪರೇಟರ್ ಬಳಿ ಲಭ್ಯವಿರುವ ಕೆವೈಸಿ ದಾಖಲೆಯನ್ನು ಆಧರಿಸಿ ಕರೆ ಮಾಡಿದವರ ಹೆಸರನ್ನು ತಿಳಿಯುವಂತೆ ಮಾಡಲಾಗುತ್ತದೆ. ಈ ಉಪಕ್ರಮ ಜಾರಿಗೆ ಬಂದಾಗ ಮೊಬೈಲ್‌ನಲ್ಲಿ ಅಪರಿಚಿತ ನಂಬರ್‌ಗಳ ಬದಲು ಕರೆ ಮಾಡುತ್ತಿರುವವರ ಹೆಸರು ಕಾಣಿಸಲಿದೆ.
ಇದನ್ನೂ ಓದಿ; ಜೆಡಿಎಸ್ ಗೆ ಮತ್ತೊಂದು ಆಘಾತ; ಮಾಜಿ ಸಚಿವ ಬಿಬಿ ನಿಂಗಯ್ಯ ಕಾಂಗ್ರೆಸ್ ಸೇರ್ಪಡೆ
ಪ್ರಸ್ತುತ ಇಂತಹ ಸೌಲಭ್ಯವನ್ನು ಪಡೆಯಲು ಜನರು ‘ಟ್ರೂಕಾಲರ್’ನಂತಹ ಆಯಪ್‌ಗಳಿಗೆ ಮೊರೆ ಹೋಗಬೇಕಾಗುತ್ತದೆ. ಇಂತಹ ಆಯಪ್‌ಗಳು ಮಾಹಿತಿಯನ್ನು ಕ್ರೌಡ್‌ಸೋರ್ಸಿಂಗ್ ವಿಧಾನದ ಮೂಲಕ ಸಂಗ್ರಹಿಸುವುದರಿಂದ ಅವು ಅಧಿಕೃತವಾಗಿವೆ ಎನ್ನಲು ಸಾಧ್ಯವಾಗಿಲ್ಲ. ಆದರೆ ಕೆವೈಸಿ ಡೇಟಾಗಳು ಸಂಪೂರ್ಣವಾಗಿ ಅಧಿಕೃತ ಹಾಗೂ ನಂಬಲು ಅರ್ಹವಾಗಿರುತ್ತವೆ.
ಒಂದು ವೇಳೆ ಕೆವೈಸಿ ಸರಿಯಾಗಿ ಮಾಡಿಸದಿದ್ದರೆ ಫೋನ್‌ನಲ್ಲಿ ಹೆಸರು ಕಂಡುಬರುವುದಿಲ್ಲ. ಹೀಗಾಗಿ ಟ್ರಾಯ್‌ನ ಈ ಹೊಸ ಉಪಕ್ರಮದಿಂದಾಗಿ ಟೆಲಿಕಾಂ ಸೇವೆ ಪೂರೈಕೆದಾರರು ಕೆವೈಸಿ ಪ್ರಕ್ರಿಯೆಯನ್ನು ಸರಿಯಾಗಿ ನಿರ್ವಹಿಸುತ್ತಿದ್ದಾರೆಯೇ ಎಂಬುದರ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸಬಹುದಾಗಿದೆ.