(Beetroot) ಕಡಿಮೆ ಕ್ಯಾಲರಿ ಇದ್ದರೂ, ಅಗತ್ಯ ಜೀವಸತ್ವಗಳು, ಖನಿಜಗಳು ಹೊಂದಿರುವ ಬೀಟ್ ರೂಟ್ ವಿವಿಧ ಶಾರೀರಿಕ ಕ್ರಿಯೆಗಳಿಗೆ ಅಗತ್ಯ ಎಂದು ತಜ್ಞರು ಹೇಳುತ್ತಾರೆ. ಹೌದು, ಬೇಯಿಸಿದ ಬೀಟ್ ರೂಟ್ ನ 3.5 ಔನ್ಸ್‌ನಲ್ಲಿ ಫೋಲೇಟ್, ಮ್ಯಾಂಗನೀಸ್, ತಾಮ್ರ, ಪೊಟ್ಯಾಸಿಯಮ್ ಮಾತ್ರವಲ್ಲದೆ ವಿಟಮಿನ್ ಸಿ ಯಂತಹ ಹಲವು ಪೋಷಕಾಂಶಗಳನ್ನು ದೇಹಕ್ಕೆ ಒದಗಿಸುತ್ತದೆ. ಇದು ತೂಕ ನಿರ್ವಹಣೆ, ದೇಹದ ತ್ರಾಣವನ್ನು ಹೆಚ್ಚಿಸುವುದು, ರಕ್ತದೊತ್ತಡ ನಿಯಂತ್ರಣ, ಕ್ಯಾನ್ಸರ್ ದೂರಮಾಡುವ ಸಾಮರ್ಥ್ಯದ ಜೊತೆಗೆ ಮೆದುಳಿನ ಕಾರ್ಯ ಚುರುಕು ಮಾಡಲು ಇದು ಸಹಾಯ ಮಾಡುತ್ತದೆ. ಅದು ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ತೂಕ ನಿರ್ವಹಣೆಗೆ ಸಹಕಾರಿ:
ಕಡಿಮೆ ಕ್ಯಾಲರಿಗಳು ಹಾಗೂ ಹೆಚ್ಚು ನೀರು, ಫೈಬರ್ ಮತ್ತು ಪ್ರೋಟೀನ್ ಇರುವ ಬೀಟ್ ರೂಟ್ ಹಸಿವನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ. ಆದರೂ ಆಹಾರದ ಗುಣಮಟ್ಟವನ್ನು ಹೆಚ್ಚಿಸುವ ಮೂಲಕ ತೂಕ ನಿರ್ವಹಣೆಗೆ ನೆರವಾಗುತ್ತದೆ.
ದೇಹದ ತ್ರಾಣವನ್ನು ಹೆಚ್ಚಿತ್ತದೆ:
ನಿತ್ಯ ಜೀವನದಲ್ಲಿ ದೈಹಿಕ ಕಾರ್ಯಕ್ಷಮತೆ ಬೇಕೇಬೇಕು. ದೇಹದಲ್ಲಿ ಸ್ಟಾಮಿನ ಸುಧಾರಿಸಲು ಬೀಟ್ರೂಟ್ ಅಗತ್ಯ. ಮುಖ್ಯವಾಗಿ ಕ್ರೀಡಾಪಟುಗಳು ಮತ್ತು ಫಿಟ್ನೆಸ್ ಉತ್ಸಾಹಿಗಳು ಬೀಟ್ ರೂಟ್ ಹೆಚ್ಚಾಗಿ ಬಳಕೆ ಮಾಡುತ್ತಾರೆ. ಇದರಲ್ಲಿರುವ ಆಹಾರದ ನೈಟ್ರೇಟ್ ಗಳು ಆಯಾಸ ಕಡಿಮೆ ಮಾಡುತ್ತದೆ. ಹೀಗಾಗಿ ದೈಹಿಕ ಸಾಮರ್ಥ್ಯ ಪ್ರದರ್ಶನಕ್ಕಿಂತ ಕೆಲವು ಗಂಟೆಗಳ ಮೊದಲು ಬೀಟ್ ರೂಟ್ ಸೇವನೆಯಿಂದ ಕಾರ್ಯಕ್ಷಮತೆಯನ್ನು ಹೆಚ್ಚಿಸಬಹುದು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಕರುಳಿನ ಆರೋಗ್ಯ, ಜೀರ್ಣಕ್ರಿಯೆಗೆ ನೆರವು:
ಬೀಟ್ ರೂಟ್ ನಲ್ಲಿರುವ ಫೈಬರ್ ಅಂಶವು ಜೀರ್ಣಕಾರಿ ಆರೋಗ್ಯವನ್ನು ಉತ್ತೇಜಿಸುವಲ್ಲಿ ನೆರವಾಗುತ್ತದೆ. ಕರುಳಿನ ನಿಯಮಿತ ಚಲನೆಗೆ ಫೈಬರ್ ಸಹಾಯ ಮಾಡುತ್ತದೆ. ಮಲಬದ್ಧತೆ ಮತ್ತು ಉರಿಯೂತದ ಕರುಳಿನ ಕಾಯಿಲೆಯಂತಹ ಜೀರ್ಣಕಾರಿ ಕಾಯಿಲೆಗಳ ಅಪಾಯ ಕಡಿಮೆ ಮಾಡುತ್ತದೆ. ಫೈಬರ್ ಹೇರಳವಾಗಿರುವ ಆಹಾರಗಳು ಕರುಳಿನ ಕ್ಯಾನ್ಸರ್ ಮತ್ತು ಮಧುಮೇಹದಂತಹ ದೀರ್ಘಕಾಲದ ಕಾಯಿಲೆಗಳ ಅಪಾಯ ಕಡಿಮೆ ಮಾಡುತ್ತದೆ.
ರಕ್ತದೊತ್ತಡ ನಿಯಂತ್ರಣ:
ಅಧಿಕ ರಕ್ತದೊತ್ತಡದ ಮಟ್ಟವನ್ನು ಕಡಿಮೆ ಮಾಡುವಲ್ಲಿ ಬೀಟ್‌ರೂಟ್ (Beetroot) ಪ್ರಮುಖ ತರಕಾರಿ ಎಂಬುದನ್ನು ಹಲವಾರು ಅಧ್ಯಯನಗಳು ಹೇಳಿವೆ. ಇದರಲ್ಲಿರುವ ಹೆಚ್ಚಿನ ನೈಟ್ರೇಟ್ ಗಳು ದೇಹದಲ್ಲಿ ನೈಟ್ರಿಕ್ ಆಕ್ಸೈಡ್ ಆಗಿ ಪರಿವರ್ತನೆಗೊಂಡು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
ಇದನ್ನೂ ಓದಿ; ಗೂಗಲ್ ಪೇ, ಫೋನ್ ಪೇ ಬಳಸುತ್ತಿದ್ದರೆ ಕೂಡಲೇ ಈ ಸ್ಟೋರಿ ಓದಿ; ಸೈಬರ್ ಕ್ರೈಂ ಪೊಲೀಸರಿಂದ ಎಚ್ಚರಿಕೆ
ಕ್ಯಾನ್ಸರ್ ದೂರಮಾಡುವ ಸಾಮರ್ಥ್ಯ:
ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳನ್ನು ಹೊಂದಿವೆ ಎಂದು ಕೆಲವು ಅಧ್ಯಯನಗಳು ತಿಳಿಸಿವೆ. ಈ ಸಂಯುಕ್ತಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ಬಹುತೇಕ ಹತೋಟಿಗೆ ತರುತ್ತವೆ. ಆ ಮೂಲಕ ಕಾಯಿಲೆಯು ಮಾರಣಾಂತಿಕವಾಗುವ ಅಪಾಯವನ್ನು ನಿಧಾನ ಮಾಡುತ್ತದೆ.
ಮೆದುಳಿನ ಕಾರ್ಯ ಚುರುಕು:
ಬೀಟ್‌ರೂಟ್‌ನಲ್ಲಿರುವ ನೈಟ್ರೇಟ್‌ಗಳು ಮೆದುಳಿಗೆ ರಕ್ತದ ಹರಿವನ್ನು ಸುಧಾರಿಸುವ ಸಾಮರ್ಥ್ಯ ಹೊಂದಿದ್ದು, ಆ ಮೂಲಕ ಅರಿವಿನ ಕಾರ್ಯ ವರ್ಧಿಸಲು ನೆರವಾಗುತ್ತದೆ.

ಇದನ್ನೂ ಓದಿ; ಬೆಳ್ಳುಳ್ಳಿ ತಿಂದ್ರೆ ಕ್ಯಾನ್ಸರ್ ಬರುತ್ತಂತೆ!; ಈ ಬಗ್ಗೆ ವೈದ್ಯರು ಏನಂದಿದ್ದಾರೆ ಗೊತ್ತಾ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






