Tuesday, November 28, 2023
Homeರಾಜ್ಯಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಚಾರವೆಸಗಿದ್ದ ಕಾಮುಕರ ಬಂಧನ

ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಚಾರವೆಸಗಿದ್ದ ಕಾಮುಕರ ಬಂಧನ

ಬೆಳಗಾವಿ: ಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು ಹಾಗೆಯೇ ಆರೋಪಿಗಳನ್ನು ಬಂಧಿಸಿದ್ದಾರೆ ಅದರಂತೆಯೇ ಬೆಳಗಾವಿಯಲ್ಲಿ ಅಪ್ರಾಪ್ತ ಹುಡುಗಿಯ ಮೇಲೆ ಅತ್ಯಾಚಾರವೆಸಗಿದ ನಾಲ್ವರು ಕಾಮುಕರನ್ನು ಘಟಪ್ರಭಾ  ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ಗ್ರಾಮವೊಂದರಲ್ಲಿ ಜಮೀನಿಗೆ ಹೋಗಿದ್ದ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರವನ್ನು ನಡೆಸಿದ್ದಾರೆ ಎಂದು ಆರೋಪಿಸಿ ಗೋಕಾಕ್ ತಾಲೂಕಿನ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ದಾಖಲಿಸಿದ್ದರು.

ಈ ದುರ್ಘಟನೆ 20 ದಿನಗಳ ಹಿಂದೆಯೇ ನಡೆದಿದೆ ಎಂದು ಪೋಷಕರು ಗುರುವಾರ ಸಂಜೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದರು. ಈ ದೂರಿನನ್ವಯ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಬೆಳಗಾವಿ ಎಸ್ ಪಿ ಲಕ್ಷ್ಮಣ ನಿಂಬರಗಿ ಮಾಹಿತಿಯನ್ನು ನೀಡಿದ್ದಾರೆ.

Most Popular

Recent Comments