Bembala bele yojane: ಕೇಂದ್ರ ಮತ್ತು ರಾಜ್ಯ ಸರಕಾರದಿಂದ ರೈತರ ಉತ್ಪನ್ನಗಳಿಗೆ ಉತ್ತಮ ಬೆಲೆಯನ್ನು ಒದಗಿಸುವ ನೆರವಿನಲ್ಲಿ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ವಿವಿಧ ಕೃಷಿ ಉತ್ಪನ್ನಗಳನ್ನು ರೈತರಿಂದ ನೇರವಾಗಿ ಖರೀದಿ ಮಾಡಲಾಗುತ್ತಿದ್ದು, ರೈತರ ಬೇಡಿಕೆಯನ್ವಯ ಕೆಲವು ಉತ್ಪನ್ನಗಳ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಹೊರಗಿನ ಮಾರುಕಟ್ಟೆಯಲ್ಲಿ ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಲಭ್ಯವಾಗದ ವೇಳೆಯಲ್ಲಿ ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆಯನ್ನು ಒದಗಿಸಿ ರೈತರಿಂದ ನೇರವಾಗಿ ಉತ್ಪನ್ನವನ್ನು ಖರೀದಿ ಮಾಡಿ ರೈತರ ಬ್ಯಾಂಕ್ ಖಾತೆಗೆ ನಿಗದಿತ ಅವಧಿಯಲ್ಲಿ ಉತ್ಪನ್ನದ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ
ಬೆಂಬಲ ಬೆಲೆ ಯೋಜನೆಯಲ್ಲಿ ಶೇಂಗಾ ಸೇರಿದಂತೆ ಹಲವು ಕೃಷಿ ಉತ್ಪನ್ನಗಳ ಖರೀದಿ ಅವಧಿ ವಿಸ್ತರಣೆ ಮಾಡಲಾಗಿದೆ. ಶೇಂಗಾ ಮತ್ತು ಸೋಯಾಬೀನ್ ಖರೀದಿ ಅವಧಿಯನ್ನು ಜನವರಿ 26ರ ವರೆಗೆ, ಹೆಸರುಕಾಳು, ಉದ್ದಿನಕಾಳು ಹಾಗೂ ಸೂರ್ಯಕಾಂತಿ ಖರೀದಿ ಅವಧಿಯನ್ನು ಜನವರಿ 22ರ ವರೆಗೆ ವಿಸ್ತರಿಸಲಾಗಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೆಕ್ಕೆಜೋಳವನ್ನು ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ ಗೆ ರೂ 2,400/- ರಂತೆ ರೈತರಿಂದ ನೇರವಾಗಿ ಖರೀದಿ ಮಾಡುವ ಪ್ರಕ್ರಿಯೆಗೆ ಜಾರಿಯಲ್ಲಿದೆ. ಮೆಕ್ಕೆಜೋಳ ಬೆಳೆದಿರುವ ರೈತರು ಕೂಡಲೇ ನಿಮ್ಮ ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ ಕಚೇರಿಯನ್ನು ಭೇಟಿ ಮಾಡಿ ನೋಂದಣಿಯನ್ನು ಮಾಡಿಕೊಂಡು ನಿಮ್ಮ ಉತ್ಪನ್ನವನ್ನು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಬಹುದು.
ರೈತರು ಬೆಂಬಲ ಬೆಲೆ ಯೋಜನೆಯಡಿ ರಾಗಿ,ಮೆಕ್ಕೆಜೋಳ ಸೇರಿದಂತೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಪ್ರತಿ ವರ್ಷ ನವೆಂಬರ್-ಡಿಸೆಂಬರ್ ತಿಂಗಳ ಅವಧಿಯಲ್ಲಿ ನಿಮ್ಮ ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಯ ಕಚೇರಿಯನ್ನು ಭೇಟಿ ಮಾಡಿ ಖರೀದಿ ಕೇಂದ್ರದ ಮಾಹಿತಿಯನ್ನು ಪಡೆದು ಮುಂಚಿತವಾಗಿ ನಿಮ್ಮ ಹೆಸರನ್ನು ನೋಂದಣಿ ಮಾಡಿಕೊಂಡು ಖರೀದಿ ಸಮಯದಲ್ಲಿ ನಿಮ್ಮ ಉತ್ಪನ್ನವನ್ನು ಮಾರಾಟ ಮಾಡಬೇಕು.
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ
ರೈತರು ಬೆಂಬಲ ಬೆಲೆಯಲ್ಲಿ ಯಾವುದೇ ಉತ್ಪನ್ನವನ್ನು ಮಾರಾಟ ಮಾಡಲು ಅತೀ ಮುಖ್ಯವಾಗಿ ನಿಮ್ಮ ಜಮೀನಿನ ಪಹಣಿಯಲ್ಲಿ ಬೆಳೆ ಸಮೀಕ್ಷೆ ಮೂಲಕ ದಾಖಲಾಗಿರುವ ಬೆಳೆ ಮಾಹಿತಿ. ರಾಗಿ ಇದ್ದರೆ ನೀವು ರಾಗಿಯನ್ನು ಬೆಂಬಲ ಬೆಲೆ ಯೋಜನೆಯಡಿ ಮಾರಾಟ ಮಾಡಬಹುದು. ಇದೆ ಮಾದರಿಯಲ್ಲಿ ಮೆಕ್ಕೆಜೋಳ ನಮೂದಿಸಿದ್ದರೆ ನೀವು ಮೆಕ್ಕೆಜೋಳವನ್ನು ಮಾರಾಟ ಮಾಡಲು ಅವಕಾಶವಿದೆ.
ಬೇಕಾಗುವ ದಾಖಲೆಗಳು:
* ರೈತರ ಆಧಾರ್ ಕಾರ್ಡ ಪ್ರತಿ(Aadhaar card)
* ಬ್ಯಾಂಕ್ ಪಾಸ್ ಬುಕ್(Bank Pass Book)
* ಜಮೀನಿನ ಪಹಣಿ(RTC)
* ರೈತರು ಖುದ್ದು ನೋಂದಣಿ ಕೇಂದ್ರದಲ್ಲಿ ಹಾಜರಿದ್ದು ಬೆರಳಚ್ಚು ನೀಡಬೇಕು.

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (Bembala bele yojane:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ





