ಬೆಂಗಳೂರು: ಗುರುವಾರ ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಈ ಘಟನೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕರೊಬ್ಬರು ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ನಿಂಗಪ್ಪ ಆನೇಕಲ್ (44) ಎಂಬುವವರು ಮೃತಪಟ್ಟಿದ್ದಾರೆ ಇವರು ಕೆಎಸ್‌ಆರ್‌ಟಿಸಿ ಬಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಗುರುವಾರ ಬೆಳಿಗ್ಗೆ 4.30 ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಬಸ್ಸನ್ನು ನಿರ್ಲಕ್ಷ್ಯದಿಂದ ಚಾಲನೆ ಮಾಡಿ ನಿಂಗಪ್ಪನವರ ಸಾವಿಗೆ ಕಾರಣರಾದ ಆರೋಪದಡಿ ಚಾಲಕ ಹನುಮಂತಪ್ಪ ಎಂಬುವವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಮೃತರಾದ ಚಾಲಕ ನಿಂಗಪ್ಪನವರು ಅತ್ತಿಬೆಲೆಯಿಂದ ಬಸ್ ಚಲಾಯಿಸಿಕೊಂಡು ಮೆಜೆಸ್ಟಿಕ್ ನಿಲ್ದಾಣಕ್ಕೆ ಬಂದು ಪ್ರವೇಶ ದ್ವಾರದ ಬಳಿ ಪ್ರಯಾಣಿಕರನ್ನು ಇಳಿಸಿದ್ದರು. ನಂತರ ಟೀ ಕುಡಿಯಲು ನಿಂತುಕೊoಡಿದ್ದರು. ಇದೇ ವೇಳೆ ಐರಾವತ ಬಸ್‌ನನ್ನು ವೇಗವಾಗಿ ಚಾಲನೆ ಮಾಡಿಕೊಂಡು ಬಂದ ಹನುಮಂತಪ್ಪ ನಿಂತಿದ್ದoತಹ ಬಸ್‌ಗೆ ರಭಸದಿಂದ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ಪರಿಣಾಮದಿಂದ ಚಾಲಕ ನಿಂಗಪ್ಪ ನವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಘಟನೆಯಲ್ಲಿ ಇದೇ ವೇಳೆ ಬಸ್ ಬಳಿ ನಡೆದುಕೊಂಡು ಹೋಗುತ್ತಿದ್ದಂತಹ ಜಾರ್ಖಾಂಡ್ ಮೂಲದ ವ್ಯಕ್ತಿ ರಂಜಿತ್ ಕುಮಾರ್ (21) ಎಂಬುವವರೂ ತೀವ್ರವಾಗಿ ಗಾಯಗೊಂಡಿದ್ದಾರೆ. ರಂಜಿತ್ ಅವರ ಕಾಲಿಗೆ ಪೆಟ್ಟಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.