Sunday, June 4, 2023
Homeರಾಜ್ಯಬೆಂಗಳೂರು: ಕೋವಿಡ್19 ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಗಸ್ಟ್ 16 ರವರೆಗೆ ನೈಟ್ ಕರ್ಫ್ಯೂ ಜಾರಿ

ಬೆಂಗಳೂರು: ಕೋವಿಡ್19 ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಗಸ್ಟ್ 16 ರವರೆಗೆ ನೈಟ್ ಕರ್ಫ್ಯೂ ಜಾರಿ

ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕು ಸಂಖ್ಯೆ ಏರಿಕೆ ಭೀತಿಯ ಹಿನ್ನಲೆಯಲ್ಲಿ ಆಗಸ್ಟ್ 16 ರವರೆಗೆ ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿ ಆದೇಶವನ್ನು ಹೊರಡಿಸಲಾಗಿದೆ.

ಕೊರೊನಾ ಮೂರನೇ ಅಲೆ ಹೆಚ್ಚಾಗುವ ಸಾಧ್ಯತೆವಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶ ನೀಡಲಾಗಿದೆ. ರಾತ್ರಿ 10 ರಿಂದ ಬೆಳಗ್ಗೆ 6 ರವರೆಗೆ ಬೆಂಗಳೂರಲ್ಲಿ ನೈಟ್ ಕರ್ಫ್ಯೂ ಇರಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಆಗಸ್ಟ್ 16 ರ ವರೆಗೆ ನಿಷೇದಾಜ್ಞೆ ಮುಂದುವರೆಸಿ ಆದೇಶ ಹೊರಡಿಸಲಾಗಿದ್ದು, ಬಸ್ ನಿಲ್ದಾಣ, ಮೆಟ್ರೋ, ರೈಲ್ವೆ ನಿಲ್ದಾಣ, ಏರ್‌ಪೋರ್ಟ್ ಹೊರತುಪಡಿಸಿ ಉಳಿದೆಡೆ ಜನರು ಗುಂಪು ಗುಂಪಾಗಿ ಸೇರದಂತೆ ಸೂಚನೆಯನ್ನು ನೀಡಲಾಗಿದೆ. ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರವರು ಆದೇಶ ಹೊರಡಿಸಿದ್ದಾರೆ.

Most Popular

Recent Comments