(Best Actor Award) 2019 ರಲ್ಲಿ ತೆರೆಕಂಡ ಸಿನಿಮಾಗಳಿಗೆ ಈಗ ರಾಜ್ಯ ಪ್ರಶಸ್ತಿ ಘೋಷಣೆ ಆಗಿದೆ. ಈ ಪಟ್ಟಿಯಲ್ಲಿ ಸುದೀಪ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಆದರೆ, ಸುದೀಪ್ ಅವರು ಈ ಪ್ರಶಸ್ತಿಯನ್ನ ನಿರಾಕರಿಸಿದ್ದಾರೆ.
ಇದನ್ನೂ ಓದಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ರಾಜೇಂದ್ರ ಕುಮಾರ್ ಕಟಾರಿಯಾ; ಏನದು ಸೂಚನೆ…? ಇಲ್ಲಿದೆ ನೋಡಿ
ಹೌದು, ಸುದೀಪ್ ನಟನೆಯ ಪೈಲ್ವಾನ್ ಸಿನಿಮಾಕ್ಕೆ ಈ ಪ್ರಶಸ್ತಿ ಲಭಿಸಿತ್ತು. ಅಭಿಮಾನಿಗಳು ಕೂಡ ಸಂಭ್ರಮದಿಂದ ಈ ವಿಚಾರವನ್ನು ಹಂಚಿಕೊಳ್ಳುತ್ತಿದ್ದಾರೆ. ಸುದೀಪ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಆದರೆ ಈ ಹೊತ್ತಿನಲ್ಲಿ ಸುದೀಪ್ ಅವರು ಒಂದು ಅಚ್ಚರಿಯ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಪ್ರಶಸ್ತಿಯನ್ನು ನಿರಾಕರಿಸಿದ ಸುದೀಪ್:
ರಾಜ್ಯ ಪ್ರಶಸ್ತಿಯನ್ನು ನಿರಾಕರಿಸಿರುವ ಸುದೀಪ್ ಅವರು, ಆ ಕುರಿತು ಟ್ವೀಟ್ ಮಾಡಿದ್ದಾರೆ. “ಗೌರವಾನ್ವಿತ ಕರ್ನಾಟಕ ಸರ್ಕಾರ ಮತ್ತು ತೀರ್ಪುಗಾರರ ಸದಸ್ಯರೇ.. ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಒಂದು ಸೌಭಾಗ್ಯ ಮತ್ತು ಈ ಗೌರವಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಆದಾಗ್ಯೂ, ನಾನು ಹಲವಾರು ವರ್ಷಗಳಿಂದ ಪ್ರಶಸ್ತಿಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದ್ದೇನೆ. ಇದು ನಾನು ವೈಯಕ್ತಿಕ ಕಾರಣಗಳಿಂದ ಕೈಗೊಂಡಿರುವ ನಿರ್ಧಾರವಾಗಿದೆ. ಅನೇಕ ಅರ್ಹ ನಟರು ತಮ್ಮ ಕಲೆಗೆ ಹೃದಯದಿಂದ ಶ್ರಮವನ್ನು ಹಾಕುತ್ತಿದ್ದಾರೆ. ಅವರಲ್ಲಿ ಒಬ್ಬರು ಅದನ್ನು ಸ್ವೀಕರಿಸುವುದನ್ನು ನೋಡುವುದೇ ನನಗೆ ಹೆಚ್ಚು ಸಂತೋಷ ನೀಡುತ್ತದೆ.
ಇದನ್ನೂ ಓದಿ: ಇ-ಖಾತೆ ಇಲ್ಲದ ಆಸ್ತಿ ಮಾಲೀಕರಿಗೆ ಖಾತೆ ಪಡೆಯಲು ಮತ್ತೊಮ್ಮೆ ಅವಕಾಶ!; ಇಲ್ಲಿದೆ ನೋಡಿ ಡಿಟೈಲ್ಸ್
ಯಾವ ಪ್ರಶಸ್ತಿಗಳ ನಿರೀಕ್ಷೆಯಿಲ್ಲದೆ ಪ್ರೇಕ್ಷಕರನ್ನು ಮನರಂಜಿಸುವುದರ ಕಡೆಗೆ ನನ್ನ ಡೆಡಿಕೇಷನ್ ಇದೆ ಮತ್ತು ತೀರ್ಪುಗಾರರ ಈ ಗುರುತಿಸುವಿಕೆಯು ಮಾತ್ರ ಶ್ರೇಷ್ಠತೆಗಾಗಿ ಶ್ರಮಿಸುವುದಕ್ಕೆ ಮುಂದುವರಿಯಲು ನನಗೆ ಇನ್ನಷ್ಟು ಗಮನಾರ್ಹ ಉತ್ತೇಜನ ನೀಡುತ್ತದೆ. ಈ ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ನಾನು ಪ್ರತಿಯೊಬ್ಬ ಜ್ಯೂರಿ ಸದಸ್ಯರಿಗೆ ಕೃತಜ್ಞನಾಗಿದ್ದೇನೆ, ಏಕೆಂದರೆ ಈ ಗುರುತಿಸುವಿಕೆ ಸ್ವತಃ ನನ್ನ ಪ್ರತಿಫಲವಾಗಿದೆ.
ನನ್ನ ನಿರ್ಧಾರದಿಂದ ಉಂಟಾಗಬಹುದಾದ ಯಾವುದೇ ನಿರಾಶೆಗಾಗಿ ತೀರ್ಪುಗಾರರು ಮತ್ತು ರಾಜ್ಯ ಸರ್ಕಾರಕ್ಕೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ನೀವು ನನ್ನ ಆಯ್ಕೆಯನ್ನು ಗೌರವಿಸುತ್ತೀರಿ ಮತ್ತು ನಾನು ಆಯ್ಕೆ ಮಾಡಿದ ಹಾದಿಯಲ್ಲಿ ನನ್ನನ್ನು ಬೆಂಬಲಿಸುತ್ತೀರಿ ಎಂದು ನಾನು ನಂಬುತ್ತೇನೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಇಂಧನ ಸಚಿವರಿಂದ ಮುಖ್ಯ ಮಾಹಿತಿ; ಅಕ್ರಮ ಪಂಪ್ ಸೆಟ್ ಕುರಿತು ಮಹತ್ವದ ಘೋಷಣೆ!
ಮತ್ತೊಮ್ಮೆ, ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ತೀರ್ಪುಗಾರರ ಗೌರವಾನ್ವಿತ ಸದಸ್ಯರು ಮತ್ತು ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.
ಪ್ರಶಸ್ತಿ ತಿರಸ್ಕರಿಸಲು ಹಿಂದಿದೆಯಾ ನೋವಿನ ಕಥೆ?:
ರಂಗ ಎಸ್ಎಸ್ಎಲ್ಸಿ (2004) ಮತ್ತು ಮುಸ್ಸಂಜೆ ಮಾತು (2008) ಸಿನಿಮಾ ಮಾಡಿದಾಗ ಪ್ರಶಸ್ತಿ ಕಮಿಟಿಯಲ್ಲಿದ್ದವರೇ ಸುದೀಪ್‌ಗೆ ಕರೆ ಮಾಡಿ ನಿಮಗೆ ಅತ್ಯುತ್ತಮ ನಟ ಪ್ರಶಸ್ತಿ ಬಂದಿದೆ ಎಂದು ಹೇಳಿದ್ದರಂತೆ. ಹೀಗಾಗಿ ಅವಾರ್ಡ್ ಕಮಿಟಿಯವರ ಮಾತನ್ನು ಕೇಳಿ ಸುದೀಪ್ ಸಂಭ್ರಮಿಸಿದ್ದರಂತೆ. ಆದರೆ, ರಾಜ್ಯ ಪ್ರಶಸ್ತಿ ಘೋಷಣೆ ಆದಾಗ ಮಾತ್ರ ಅಲ್ಲಿ ಅದು ಬೇರೆ ನಟರ ಪಾಲಾಗಿತ್ತು. ಈ ಎರಡು ಘಟನೆಯಿಂದಾಗಿ ಅವರು ಪ್ರಶಸ್ತಿಗಳನ್ನು ನಿರಾಕರಿಸುತ್ತಲೇ ಬಂದಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





