(Bhavya Narasimhamurthy) ಕರ್ನಾಟಕ ಕಾಂಗ್ರೆಸ್ ಪಕ್ಷದ ವಕ್ತಾರೆ ಭವ್ಯ ನರಸಿಂಹಮೂರ್ತಿ ಅವರು ಪ್ರಾದೇಶಿಕ ಸೇನೆಯಲ್ಲಿ ಕಮಿಷಂಡ್ ಆಫೀಸರ್ (ಲೆಫ್ಟಿನೆಂಟ್) ಆಗಿ ನಿಯೋಜನೆಗೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸಮವಸ್ತ್ರದಲ್ಲಿ ತರಬೇತಿ ಪಡೆಯುತ್ತಿರುವ ಫೋಟೋಗಳನ್ನು ಹಂಚಿಕೊಂಡಿರುವ ಭವ್ಯ ನರಸಿಂಹಮೂರ್ತಿ ಅವರು, ಭಾರತೀಯ ಸೇನೆ ಸೇರಿರುವುದು ನನ್ನ ಜೀವನದ ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳ ಬಸ್ ಪಾಸ್ ವಿತರಣೆ ಆರಂಭ; ದರ, ಅರ್ಜಿ ಸಲ್ಲಿಕೆ ವಿಧಾನ ಇಲ್ಲಿದೆ
ಹಾಗಾದರೆ ಏನಿದು ಪ್ರಾದೇಶಿಕ ಸೇನೆ?
* ಟೆರಿಟೋರಿಯಲ್ ಆರ್ಮಿ ಭಾರತೀಯ ಸೇನೆಯ ಒಂದು ಭಾಗ.
* ದೇಶಾದ್ಯಂತ ಇದು ಐದು ವಲಯ ಹೊಂದಿದ್ದು, ಸುಮಾರು 40,000 ಸೈನಿಕರು ಇದರಲ್ಲಿದ್ದಾರೆ.
* ಟೆರಿಟೋರಿಯಲ್ಲಿ ಆರ್ಮಿ ಒಂದು ಸ್ವಯಂಸೇವಕ ತುಕಡಿ ಎನ್ನಬಹುದು.
ಇದನ್ನೂ ಓದಿ: ಸರ್ಕಾರಿ ಬೆಂಬಲದ ಪಿಎಂ ವಿದ್ಯಾಲಕ್ಷ್ಮೀ ಯೋಜನೆ; 15 ಲಕ್ಷ ರೂವರೆಗೆ ಸಾಲದ ಅವಕಾಶ
ಪ್ರಾದೇಶಿಕ ಸೇನೆಯ ಸೇವೆ ಹೇಗೆ?
* ಇದರಲ್ಲಿರುವ ನಾನಾ ಡಿಪಾರ್ಟ್ಮೆಂಟ್ ಗಳಲ್ಲಿ ಭಾರತದ ನಾಗರೀಕರು ಸೇರಿಕೊಳ್ಳಬಹುದು.
* 40 ವರ್ಷ ವಯಸ್ಸಿನ ಒಳಗಿನ ಭಾರತೀಯ ಪ್ರಜೆಗಳಿಗೆ ಸೇವೆ ಸಲ್ಲಿಸಲು ಅವಕಾಶ
* ಟೆರಿಟೋರಿಯಲ್ ಆರ್ಮಿಗೆ ಸಂಬಂಧಿಸಿದ ಪರೀಕ್ಷೆ ಎದುರಿಸಿ ಕಮಿಷನ್ಡ್, ನಾನ್ ಕಮಿಷನ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
* ಸೇನೆಯಲ್ಲಿ ನೀಡುವ ಎಲ್ಲಾ ತರಬೇತಿಗಳನ್ನು ಇಲ್ಲಿ ಆಯ್ಕೆಯಾಗುವವರಿಗೆ ನೀಡಲಾಗುತ್ತದೆ.
ಇದನ್ನೂ ಓದಿ: ಈ ರೀತಿಯ ಆಹಾರ ಪದ್ದತಿ ಅನುಸರಿಸಿದ್ರೆ ಮೂಳೆ ಸವೆತ ಪಕ್ಕಾ!; ಎಚ್ಚರ.. ಯಾವುದೇ ಕಾರಣಕ್ಕೂ ಹೀಗೆ ಮಾಡ್ಬೇಡಿ..
ಯಾರು ಈ ಭವ್ಯ ನರಸಿಂಹ ಮೂರ್ತಿ?
* ಭವ್ಯ ನರಸಿಂಹಮೂರ್ತಿ ಕಾಂಗ್ರೆಸ್ ವಕ್ತಾರೆಯಾಗಿ ಜನರಿಗೆ ಪರಿಚಯವಾದವರು.
* ಇದೀಗ ಭಾರತೀಯ ಸೇನೆಯ ಟೆರಿಟೋರಿಯಲ್ ಆರ್ಮಿಯಲ್ಲಿ ಕಮಿಷನ್ಡ್ ಆಫೀಸರ್ ಆಗಿದ್ದಾರೆ.
* 2022 ನೇ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಎನ್ನುವ ಹೆಗ್ಗಳಿಕೆ ಭವ್ಯ ನರಸಿಂಹಮೂರ್ತಿ ಅವರದು.
* ಭಾರತ ಪಾಕಿಸ್ತಾನ ಗಡಿ ಪ್ರದೇಶದಲ್ಲಿರುವ ಭಾರತೀಯ ಸೇನೆಯ ಘಟಕದಲ್ಲಿ ತರಬೇತಿ ಪಡೆದು ಲೆಫ್ಟಿನೆಂಟ್ ಆಗಿ ಇದೀಗ ನಿಯೋಜನೆಗೊಂಡಿದ್ದಾರೆ.

ಇದನ್ನೂ ಓದಿ: ಷೇರು ಮಾರುಕಟ್ಟೆಯ ಈ ಬೇಸಿಕ್ ವಿಚಾರಗಳನ್ನು ಸಿಂಪಲ್ಲಾಗಿ ತಿಳಿಯಿರಿ!; ಕನ್ನಡದಲ್ಲಿ.. ನಿಮಗೆ ಅರ್ಥವಾಗುವ ರೀತಿ ಮಾಹಿತಿ!
ಕೇಂದ್ರ ಸಚಿವ ಅನುರಾಗ್ ಠಾಕೂರ್(ಕ್ಯಾ.), ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಲೆ. ಕರ್ನಲ್ ಎಂ.ಎಸ್. ದೋನಿ, ಕರ್ನಾಟಕದ ಹಿರಿಯ ಐಎಎಸ್ ಅಧಿಕಾರಿ ಮಣಿವಣ್ಣನ್ (ಕ್ಯಾ.) ಸೇರಿದಂತೆ ಹಲವರಿಗೆ ಟೆರಿಟೋರಿಯಲ್ ಆರ್ಮಿ ಮೂಲಕ ಭಾರತ ಹಾನರರಿ (ಗೌರವಾನ್ವಿತ) ರ್ಯಾಂಕ್ ನೀಡಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್






