Bigg Boss Kannada 25: ಬಿಗ್ ಬಾಸ್ ಕನ್ನಡ ಸೀಸನ್ 12ರ ಕುರಿತು ಬಿಗ್‌ ಅಪ್ಡೇಟ್

(Bigg Boss Kannada 25:) ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭಕ್ಕೆ ಕೆಲವೇ ವಾರಗಳು ಮಾತ್ರ. ಆಗಲೇ ದೊಡ್ಮನೆ ಪ್ರವೇಶಿಸುವ ಸ್ಪರ್ಧಿಗಳು ಯಾರೆಲ್ಲ ಇರಬಹುದು ಎನ್ನುವ ಬಗ್ಗೆ ಚರ್ಚೆಗಳು ಶುರುವಾಗಿವೆ. ಈ ಮಧ್ಯೆ ಬಿಗ್ ಬಾಸ್ ಮನೆ ಹೇಗೆ ಇರಲಿದೆ ಎನ್ನುವ ಪ್ರಶ್ನೆ ಅನೇಕರಿಗೆ ಮೂಡಿದೆ. ಇದಕ್ಕೆ ಕಿಚ್ಚ ಸುದೀಪ್ ಅವರು ಮಾಡಿದ ಟ್ವೀಟ್​ನಲ್ಲಿ ಉತ್ತರ ಸಿಕ್ಕಿದೆ.


ನ್ನೂ ಓದಿ: ಹುಟ್ಟೂರು ಶೃಂಗೇರಿಯನ್ನ ಕೊಂಡಾಡಿದ ವಜ್ರಕಾಯ ಬೆಡಗಿ; ನಾನು ಶೃಂಗೇರಿಯವಳು ಎನ್ನಲು ಈ ಕಾರಣಕ್ಕೆ ಹೆಮ್ಮೆ ನಭಾ ನಟೇಶ್..


ಈ ಮೊದಲು ಬಿಗ್ ಬಾಸ್ ಮನೆ ಇನೋವೇಟಿವ್ ಫಿಲ್ಮ್​ ಸಿಟಿಯಲ್ಲಿ ಇತ್ತು. ಆ ಬಳಿಕ ಈ ಮನೆಯನ್ನು ಬೇರೆ ಕಡೆಗಳಲ್ಲಿ ಶಿಫ್ಟ್ ಮಾಡಲಾಯಿತು. ಬೆಂಗಳೂರು ಹೊರವಲಯದಲ್ಲಿ ಪ್ರತ್ಯೇಕ ಜಾಗ ಪಡೆದು ಅಲ್ಲಿ ದೊಡ್ಡದಾದ ಮನೆ ನಿರ್ಮಾಣ ಮಾಡಲಾಯಿತು. ಆದರೆ, ಕಳೆದ ಬಾರಿ ಕೆಲವರು ಈ ಮನೆಯ ವಿಚಾರಕ್ಕೆ ಅಪಸ್ವರ ತೆಗೆದಿದ್ದರು. ಈ ವಿಚಾರ ಕೋರ್ಟ್ ಮೆಟ್ಟಿಲು ಕೂಡ ಹತ್ತಿತ್ತು.


ನ್ನೂ ಓದಿ: ವರ್ಷದ ಕೊನೆಯ ಖಗ್ರಾಸ ಚಂದ್ರಗ್ರಹಣ; ಶುರು-ಅಂತ್ಯ ಯಾವಾಗ?


ಆದರೆ, ಈ ಬಾರಿ ಆ ರೀತಿ ಆಗಲೇಬಾರದು ಎಂದು ನಿರ್ಧರಿಸಿದಂತಿದೆ. ಈ ಕಾರಣದಿಂದಲೇ ಇನೋವೇಟಿವ್ ಫಿಲ್ಮ್​ ಸಿಟಿಯಲ್ಲೇ ಮತ್ತೆ ಮನೆ ನಿರ್ಮಾಣ ಆಗಿದೆ. ಇದಕ್ಕೆ ಅಂತಿಮ ಹಂತದ ಕೆಲಸಗಳು ನಡೆಯುತ್ತಿವೆ. ಈ ಬಾರಿಯ ಮನೆ ದೊಡ್ಡದಾಗಿ ಹಾಗೂ ಭಿನ್ನ ರೀತಿಯಲ್ಲಿ ಇರಲಿದೆಯಂತೆ. ಈ ಬಗ್ಗೆ ಕಿಚ್ಚ ಸುದೀಪ್ ಅವರು ಹಿಂಟ್ ಕೊಟ್ಟಿದ್ದಾರೆ. ಸೆಪ್ಟೆಂಬರ್ 28ರಿಂದ ಬಿಗ್ ಬಾಸ್ 12 ಆರಂಭ ಆಗುತ್ತಿದೆ.‌

Bigg Boss Kannada 25: ಬಿಗ್ ಬಾಸ್ ಕನ್ನಡ ಸೀಸನ್ 12ರ ಕುರಿತು ಬಿಗ್‌ ಅಪ್ಡೇಟ್
Bigg Boss Kannada 25: ಬಿಗ್ ಬಾಸ್ ಕನ್ನಡ ಸೀಸನ್ 12ರ ಕುರಿತು ಬಿಗ್‌ ಅಪ್ಡೇಟ್

ಇತ್ತೀಚಿನ ಜನಪ್ರಿಯ ಸುದ್ದಿಗಳು (Bigg Boss Kannada 25:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ