Biometrics: ಇನ್ಮುಂದೆ ಮೊಬೈಲ್‌ ನಲ್ಲೇ ಹಾಜರಾತಿ

(Biometrics:) ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಲು ಸರ್ಕಾರ ಮುಂದಾಗಿದ್ದು, ಇನ್ನು ಮುಂದೆ ಬೆರಳಚ್ಚು ಆಧಾರಿತ ಬಯೋಮೆಟ್ರಿಕ್ ಯಂತ್ರಗಳ ಬದಲಿಗೆ ಮೊಬೈಲ್ ಆಧಾರಿತ ‘ಕರ್ತವ್ಯ’ (Kartavya) ಆ್ಯಪ್ ಮೂಲಕ ಹಾಜರಾತಿ ದಾಖಲಿಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

ದಿನಾಂಕ ಏಪ್ರಿಲ್ 7, 2026ರಂದು ಹೊರಡಿಸಿದ ಅಧಿಕೃತ ಆದೇಶದಂತೆ, ಈ ಹೊಸ ವ್ಯವಸ್ಥೆ ಮೇ 1ರಿಂದ ರಾಜ್ಯಾದ್ಯಂತ ಅನ್ವಯವಾಗಲಿದೆ. ಈ ಮೂಲಕ ನೌಕರರು ಕಚೇರಿಗಳಲ್ಲಿ ಬಯೋಮೆಟ್ರಿಕ್ ಯಂತ್ರಗಳ ಮುಂದೆ ಸಾಲಿನಲ್ಲಿ ನಿಲ್ಲುವ ಅಗತ್ಯವಿಲ್ಲದೆ, ತಮ್ಮ ಮೊಬೈಲ್‌ನಲ್ಲೇ ಹಾಜರಾತಿ ದಾಖಲಿಸಬಹುದಾಗಿದೆ.

‘ಕರ್ತವ್ಯ’ ಆ್ಯಪ್ ಕರ್ನಾಟಕ ಆಧುನಿಕ ಹಾಜರಾತಿ ನಿರ್ವಹಣಾ ವ್ಯವಸ್ಥೆ (KAAMS) ಭಾಗವಾಗಿದ್ದು, ಕೃತಕ ಬುದ್ಧಿಮತ್ತೆ (AI) ಮತ್ತು ಜಿಯೋ-ಫೆನ್ಸಿಂಗ್ ತಂತ್ರಜ್ಞಾನವನ್ನು ಬಳಸಿ ಅಭಿವೃದ್ಧಿಪಡಿಸಲಾಗಿದೆ. ನೌಕರರು ತಮ್ಮ ಕಚೇರಿ ಆವರಣದಲ್ಲಿರುವಾಗ ಮಾತ್ರ ಹಾಜರಾತಿ ದಾಖಲಿಸಲು ಸಾಧ್ಯವಾಗುವಂತೆ ವ್ಯವಸ್ಥೆ ರೂಪಿಸಲಾಗಿದೆ.

ಆದೇಶದ ಪ್ರಮುಖ ಅಂಶಗಳು:
ರಾಜ್ಯದ ಎಲ್ಲಾ ಇಲಾಖೆಗಳು, ನಿಗಮಗಳು, ಮಂಡಳಿಗಳು ಮತ್ತು ಸಂಸ್ಥೆಗಳ ನೌಕರರು ಮೇ 1ರಿಂದ ಕಡ್ಡಾಯವಾಗಿ ಈ ಆ್ಯಪ್ ಮೂಲಕವೇ ಹಾಜರಾತಿ ನೀಡಬೇಕು. ಆಂಡ್ರಾಯ್ಡ್ ಮತ್ತು ಐಒಎಸ್ ಎರಡೂ ಪ್ಲಾಟ್‌ಫಾರ್ಮ್‌ಗಳಲ್ಲಿ ಆ್ಯಪ್ ಲಭ್ಯವಿರಲಿದೆ.

ಇ-ಆಡಳಿತ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳ ಜಿಯೋ-ಟ್ಯಾಗಿಂಗ್ ಕಾರ್ಯವನ್ನು ಮೇ 1ರೊಳಗೆ ಪೂರ್ಣಗೊಳಿಸಲಿದೆ. ಸ್ಮಾರ್ಟ್‌ಫೋನ್ ಇಲ್ಲದ ನೌಕರರಿಗಾಗಿ ವಿಧಾನಸೌಧ ಮತ್ತು ವಿಕಾಸಸೌಧದಂತಹ ಪ್ರಮುಖ ಕಚೇರಿಗಳಲ್ಲಿ ‘ಕರ್ತವ್ಯ ಡಿವೈಸ್’ಗಳನ್ನು ಅಳವಡಿಸಲಾಗುವುದು.

ಈ ವ್ಯವಸ್ಥೆಯನ್ನು ಸುಗಮವಾಗಿ ಜಾರಿಗೆ ತರುವ ಉದ್ದೇಶದಿಂದ ಪ್ರತಿ ಇಲಾಖೆಯಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲು ಸೂಚಿಸಲಾಗಿದೆ.

ಬಯೋಮೆಟ್ರಿಕ್ ವ್ಯವಸ್ಥೆಗೆ ತೆರೆ:
ಹೊಸ ತಂತ್ರಜ್ಞಾನ ಜಾರಿಯೊಂದಿಗೆ, ಈವರೆಗೆ ಬಳಕೆಯಲ್ಲಿದ್ದ ಬೆರಳಚ್ಚು ಆಧಾರಿತ ಬಯೋಮೆಟ್ರಿಕ್ ಯಂತ್ರಗಳನ್ನು ಹಿಂತೆಗೆದುಕೊಳ್ಳಲಾಗಿದೆ. ನೌಕರರ HRMS/KGID ದತ್ತಾಂಶವನ್ನು ಈಗಾಗಲೇ ಹೊಸ ವ್ಯವಸ್ಥೆಯೊಂದಿಗೆ ಜೋಡಿಸುವ ಕಾರ್ಯ ನಡೆಯುತ್ತಿದೆ.

ಈ ವ್ಯವಸ್ಥೆಯನ್ನು ಈಗಾಗಲೇ ಆರೋಗ್ಯ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿ ಯಶಸ್ಸು ಕಂಡಿದ್ದು, ಇದೀಗ ರಾಜ್ಯದಾದ್ಯಂತ ವಿಸ್ತರಿಸಲಾಗುತ್ತಿದೆ.

ಹೊಸ ಕ್ರಮದಿಂದ ಹಾಜರಾತಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚುವ ಜೊತೆಗೆ, ನೌಕರರ ಸಮಯ ಉಳಿತಾಯವಾಗಲಿದೆ ಎಂಬ ನಿರೀಕ್ಷೆಯನ್ನು ಸರ್ಕಾರ ವ್ಯಕ್ತಪಡಿಸಿದೆ.

Biometrics: ಇನ್ಮುಂದೆ ಮೊಬೈಲ್‌ ನಲ್ಲೇ ಹಾಜರಾತಿ
Biometrics: ಇನ್ಮುಂದೆ ಮೊಬೈಲ್‌ ನಲ್ಲೇ ಹಾಜರಾತಿ

ಇತ್ತೀಚಿನ ಜನಪ್ರಿಯ ಸುದ್ದಿಗಳು (Biometrics:)

    1. ಈ ಸಂಸ್ಥೆಯಿಂದ ಸಿಗಲಿದೆ ವಿದ್ಯಾರ್ಥಿಗಳಿಗೆ ₹1,00,000 ಸ್ಕಾಲರ್‌ಶಿಪ್
    2. ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ!
    3. ಕೆನರಾ ಬ್ಯಾಂಕ್‌ನಿಂದ 30 ದಿನದ ಉಚಿತ ಹೋಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ
    4. ರಾಜ್ಯದ ವಿವಿಧ ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ
    5. ಕರ್ನಾಟಕ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್‌
    6. ಈ ಯೋಜನೆಯಡಿ ಸಿಗಲಿದೆ ಮಹಿಳೆಯರಿಗೆ ಸಹಾಯಧನ
    7. ಯುವಕರಿಗೆ ʼಗ್ರಾಮ ಒನ್‌ ಕೇಂದ್ರʼ ಆರಂಭಿಸಲು ಸುವರ್ಣಾವಕಾಶ
    8. ಎಸ್‌ಎಸ್‌ಪಿ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    9. 8ನೇ ತರಗತಿಯ ಪಠ್ಯಪುಸ್ತಕದಲ್ಲಿ ಮಹತ್ವದ ಬದಲಾವಣೆ
    10. ರೈಲ್ವೆ ಇಲಾಖೆಯಿಂದ ಸಹಾಯಕ ಲೋಕೋ ಪೈಲೆಟ್‌ ಹುದ್ದೆಗೆ ಅರ್ಜಿ ಆಹ್ವಾನ