BJP Manifesto 2024: ಬಿಜೆಪಿ ಪ್ರಣಾಳಿಕೆ ರಿಲೀಸ್

(BJP Manifesto 2024) ಲೋಕಸಭಾ ಚುನಾವಣೆಗೆ `ಮೋದಿ ಕಿ ಗ್ಯಾರಂಟಿ’ ಎಂದು ಘೋಷಿಸುವ ಮೂಲಕ ಕಮಲ ಪಕ್ಷವು ಕಾಂಗ್ರೆಸ್ ಗ್ಯಾರಂಟಿಗಳಿಗೆ ತಿರುಗೇಟು ನೀಡಿದೆ. ದಿಲ್ಲಿಯ ಬಿಜೆಪಿ ಕಛೇರಿಯಲ್ಲಿ ಅಂಬೇಡ್ಕರ್ ಜಯಂತಿಯಂದು ಸಂಕಲ್ಪ ಪತ್ರದ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಪಕ್ಷದ ದೂರದೃಷ್ಟಿಯ ಬಗ್ಗೆ ಮಾತನಾಡಿದರು.

ಇದನ್ನೂ ಓದಿ; hsrp ನಂಬರ್ ಪ್ಲೇಟ್ ಅಳವಡಿಕೆ; ವಾಹನ ಸವಾರರಿಗೆ ಮಹತ್ವದ ಮಾಹಿತಿ ಇಲ್ಲಿದೆ!

ಈ ಸಂದರ್ಭದಲ್ಲಿ ಮುಂದಿನ ಐದು ವರ್ಷಗಳ ಕಾಲ ಮುಕ್ತ ರೇಶನ್, ನೀರು, ಆರೋಗ್ಯ, ವಿದ್ಯುತ್ ಸೇರಿದಂತೆ ಹಲವು ಗ್ಯಾರಂಟಿಗಳನ್ನು ಮುಂದಿನ 5 ವರ್ಷಗಳಲ್ಲಿ ದೇಶದ ಎಲ್ಲರಿಗೂ ತಲುಪಿಸುವುದಾಗಿ ಘೋಷಿಸಿದರು. ಈ ಮೂಲಕ ಕಾಂಗ್ರೆಸ್ ನ ಗ್ಯಾರಂಟಿಗಳಿಗೆ ಠಕ್ಕರ್ ನೀಡಿದರು.

ಇದನ್ನೂ ಓದಿ; sbi ಅಮೃತ್‌ ಕಲಶ್‌ ಎಫ್‌ಡಿ ಸ್ಕೀಮ್‌; ಹೂಡಿಕೆ ಗಡುವು ವಿಸ್ತರಿಸಿದ ಎಸ್‌ಬಿಐ; ಈ ಯೋಜನೆಯಲ್ಲಿ ಏನೆಲ್ಲಾ ಲಾಭ? ಇಲ್ಲಿದೆ ಡಿಟೈಲ್ಸ್

ಬಿಜೆಪಿ ಪ್ರಣಾಳಿಕೆಯ ಪ್ರಮುಖ ಅಂಶಗಳು ಇಲ್ಲಿವೆ
* 10 ಕೋಟಿ ಮಹಿಳೆಯರಿಗೆ ಉದ್ಯೋಗ, ಉದ್ಯಮ ಕುರಿತು ಕೌಶಲ ತರಬೇತಿ
* 70 ವರ್ಷ ದಾಟಿದವರಿಗಾಗಿ ಆಯುಷ್ಮಾನ್‌ ಭಾರತ್‌ ಯೋಜನೆ ವಿಸ್ತರಣೆ, ಎಲ್ಲರಿಗೂ ಉಚಿತ ಚಿಕಿತ್ಸೆ
* ಜನೌಷಧಿ ಕೇಂದ್ರಗಳಲ್ಲಿ ಶೇ.80ರಷ್ಟು ರಿಯಾಯಿತಿಯೊಂದಿಗೆ ಔಷಧ ವಿತರಣೆ
* ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣ
* ಪೈಪ್‌ ಲೈನ್‌ ಮೂಲಕ ಅಡುಗೆ ಅನಿಲ ಪೂರೈಕೆ
* ಕೋಟ್ಯಂತರ ಕುಟುಂಬಗಳಿಗೆ ಸೋಲಾರ್‌ ಮೂಲಕ ಉಚಿತವಾಗಿ ವಿದ್ಯುತ್‌ ಪೂರೈಕೆ
* ಮುದ್ರಾ ಯೋಜನೆ ಅಡಿಯಲ್ಲಿ ಸಿಗುವ ಸಾಲದ ಮೊತ್ತ 20 ಲಕ್ಷ ರೂ.ಗೆ ಏರಿಕೆ
* ಅಮೃತ್‌ ಭಾರತ್‌, ವಂದೇ ಭಾರತ್‌ ರೈಲುಗಳ ಸಂಖ್ಯೆ ಹೆಚ್ಚಳ
* ಮಂಗಳಮುಖಿಯರಿಗೂ ಆಯುಷ್ಮಾನ್‌ ಭಾರತ್‌ ಯೋಜನೆ ಅಡಿ ಉಚಿತ ಚಿಕಿತ್ಸೆ
* ಮೂರು ಕೋಟಿ ಮಹಿಳೆಯರಿಗೆ ಲಕ್‌ ಪತಿ ದೀದಿ ಯೋಜನೆಯ ಗ್ಯಾರಂಟಿ
* ರೈತರಿಗೆ ಪಿಎಂ ಕಿಸಾನ್‌ ಯೋಜನೆ ಅಡಿಯಲ್ಲಿ ಹಣ ವರ್ಗಾವಣೆ ಮುಂದುವರಿಕೆ
* ದೇಶಾದ್ಯಂತ ಡೇರಿ ಸಹಕಾರ ಸಂಘಗಳನ್ನು ಹೆಚ್ಚಿಸಲಾಗುವುದು
* ಕ್ರೀಡೆಯಲ್ಲಿ ಸ್ತ್ರೀಯರ ಪ್ರಾತಿನಿಧ್ಯ ಹೆಚ್ಚಿಸಲು ಹೊಸ ಯೋಜನೆ
* ತಮಿಳು ಭಾಷೆಯ ವೈಶಿಷ್ಟ್ಯ ಸಾರಲು ಆದ್ಯತೆ
* ದೇಶಾದ್ಯಂತ ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು
* ಸಂತ ತಿರುವಳ್ಳುವರ್ ಸಾಂಸ್ಕೃತಿಕ ಕೇಂದ್ರಗಳ ನಿರ್ಮಾಣ
* ಹೊಯ್ಸಳರು ಸೇರಿ ಪಾರಂಪರಿಕ ಸ್ಥಳಗಳನ್ನು ವಿಶ್ವದ ಟೂರಿಸಂ ಜೊತೆ ಜೋಡಣೆ
* ವಿಶೇಷ ಮೀನು ಸಾಕಣೆ, ಮತ್ತು ಕೃಷಿಗೆ ವಿಶೇಷ ಆದ್ಯತೆ
* ಕೃಷಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು, ಮೀನುಗಾರರಿಗೆ ಯೋಜನೆ
* ಇ-ಶ್ರಮ್ ಮೂಲಕ ಕಲ್ಯಾಣ ಯೋಜನೆಯ ಪ್ರಯೋಜನ
* ಪ್ರತಿ ಕ್ಷೇತ್ರದಲ್ಲೂ ಒಬಿಸಿ-ಎಸ್‌ಸಿ-ಎಸ್‌ಟಿಗೆ ಗೌರವ, ಜಾಗತಿಕ ಉತ್ಪಾದನಾ ಕೇಂದ್ರ ರಚಿಸಲು ಸಿದ್ಧತೆ
* ಪ್ರಪಂಚದಾದ್ಯಂತ ರಾಮಾಯಣ ಹಬ್ಬ, ಅಯೋಧ್ಯೆಯ ಅಭಿವೃದ್ಧಿ
ಒಂದು ರಾಷ್ಟ್ರ, ಒಂದು ಚುನಾವಣೆ
* AI, ಸೆಮಿಕಂಡಕ್ಟರ್ ಮತ್ತು ಬಾಹ್ಯಾಕಾಶ ವಲಯದಲ್ಲಿ ಅಭಿವೃದ್ಧಿ

ಇದನ್ನೂ ಓದಿ; ಎಲೆಕ್ಟ್ರಾನಿಕ್ಸ್​ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮೋದಿ ಹೇಳಿದ್ದೇನು?
75 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಆಯುಷ್ಮಾನ್ ಭಾರತ್ ಯೋಜನೆಯ ವ್ಯಾಪ್ತಿಗೆ ತರಲಾಗುವುದು ಎಂದು ಪ್ರಧಾನಿ ಮೋದಿ ಭರವಸೆ ನೀಡಿದರು. “ವಯೋವೃದ್ಧರ ದೊಡ್ಡ ಚಿಂತೆ ಎಂದರೆ ಅವರು ತಮ್ಮ ಕಾಯಿಲೆಗಳಿಗೆ ಹೇಗೆ ಚಿಕಿತ್ಸೆ ನೀಡುತ್ತಾರೆ ಎಂಬುದು. ಮಧ್ಯಮ ವರ್ಗದವರಿಗೆ ಈ ಕಾಳಜಿ ಇನ್ನಷ್ಟು ಗಂಭೀರವಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ 75 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿಯನ್ನು ವ್ಯಾಪ್ತಿಗೆ ತರಲಾಗುವುದು ಎಂದು ಬಿಜೆಪಿ ಈಗ ‘ಸಂಕಲ್ಪ’ ತೆಗೆದುಕೊಂಡಿದೆ ಎಂದು ಹೇಳಿದರು.

ಇದನ್ನೂ ಓದಿ: ಕೆಂಪಿರುವೆ ಚಟ್ನಿ ಎಷ್ಟು ಒಳ್ಳೇದು ನಿಮಗೊತ್ತಾ?; ಸರ್ವರೋಗಕ್ಕೆ ಮದ್ದು ಚಗಳಿ ಚಟ್ನಿ…

ಐದು ವರ್ಷ ಪಡಿತರ ಯೋಜನೆ ಮುಂದುವರಿಕೆ:
ಮುಂದಿನ ಐದು ವರ್ಷಗಳವರೆಗೆ ಉಚಿತ ಪಡಿತರ ಯೋಜನೆ ಮುಂದುವರಿಯುವುದು ನನ್ನ ಭರವಸೆ ಎಂದು ಪ್ರಧಾನಿ ಮೋದಿ ಹೇಳಿದರು.

ಮುದ್ರಾ ಯೋಜನೆಯಡಿ ಸಾಲದ ಮಿತಿ ಹೆಚ್ಚಳ:
ಬಿಜೆಪಿ ಮುದ್ರಾ ಯೋಜನೆಯಡಿ ಸಾಲದ ಮಿತಿಯನ್ನು ₹ 10 ಲಕ್ಷದಿಂದ ₹ 20 ಲಕ್ಷಕ್ಕೆ ಹೆಚ್ಚಿಸಲಿದೆ. “ಉದ್ಯಮ 4.0 ಯುಗಕ್ಕೆ ಅಗತ್ಯವಿರುವ ರೀತಿಯ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು ಇದು ಹೊಸ ಶಕ್ತಿಯಾಗಿ ಬಳಸಲ್ಪಡುತ್ತದೆ ಎಂದು ನನಗೆ ವಿಶ್ವಾಸವಿದೆ” ಎಂದು ಹೇಳಿದರು.

ಇದನ್ನೂ ಓದಿ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್

ವಿದ್ಯುತ್ ಬಿಲ್ ಶೂನ್ಯಕ್ಕೆ ಇಳಿಕೆ:
ಕೋಟ್ಯಂತರ ಕುಟುಂಬಗಳ ವಿದ್ಯುತ್ ಬಿಲ್ ಅನ್ನು ಶೂನ್ಯಕ್ಕೆ ಇಳಿಸುವ ನಿಟ್ಟಿನಲ್ಲಿ ಬಿಜೆಪಿ ಕೆಲಸ ಮಾಡಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

BJP Manifesto 2024: ಬಿಜೆಪಿ ಪ್ರಣಾಳಿಕೆ ರಿಲೀಸ್
BJP Manifesto 2024: ಬಿಜೆಪಿ ಪ್ರಣಾಳಿಕೆ ರಿಲೀಸ್

ಇದನ್ನೂ ಓದಿ: ಸೆಂಟ್ರಲ್ ಪವರ್ ರಿಸರ್ಚ್ ಸಂಸ್ಥೆಯಲ್ಲಿ ಉದ್ಯೋಗ; ರಿಸರ್ಚ್​​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್

ದೇಶದಲ್ಲಿ 3 ಬುಲೆಟ್ ರೈಲುಗಳು ಆರಂಭ:
ದೇಶದಲ್ಲಿ ಇನ್ನೂ 3 ಬುಲೆಟ್ ರೈಲುಗಳು ಆರಂಭವಾಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಮೂರು ರೀತಿಯ ವಂದೇ ಭಾರತ್ ರೈಲು ಪರಿಚಯಿಸಲಾಗುವುದು ಎಂದು ಮೋದಿ ಘೋಷಿಸಿದರು. “ಬಿಜೆಪಿಯು ದೇಶದ ಮೂಲೆ ಮೂಲೆಗೂ ವಂದೇ ಭಾರತ್ ರೈಲುಗಳನ್ನು ವಿಸ್ತರಿಸಲಿದೆ. ವಂದೇ ಭಾರತ್‌ನ 3 ಮಾದರಿಗಳು ದೇಶದಲ್ಲಿ ಓಡಲಿವೆ – ವಂದೇ ಭಾರತ್ ಸ್ಲೀಪರ್, ವಂದೇ ಭಾರತ್ ಚೇರ್‌ ಕಾರ್ ಮತ್ತು ವಂದೇ ಭಾರತ್ ಮೆಟ್ರೋ. ಇಂದು ಅಹಮದಾಬಾದ್ ಮುಂಬೈ ಬುಲೆಟ್ ರೈಲಿನ ಕೆಲಸ ನಡೆಯುತ್ತಿದೆ. ಪೂರ್ಣಪ್ರಮಾಣದಲ್ಲಿದ್ದು, ಅದೇ ರೀತಿ ಉತ್ತರ ಭಾರತದಲ್ಲಿ ಒಂದು ಬುಲೆಟ್ ರೈಲು, ದಕ್ಷಿಣ ಭಾರತದಲ್ಲಿ ಒಂದು ಬುಲೆಟ್ ರೈಲು ಮತ್ತು ಪೂರ್ವ ಭಾರತದಲ್ಲಿ ಒಂದು ಬುಲೆಟ್ ರೈಲು ಓಡಿಸಲಾಗುವುದು ಎಂದು ಮೋದಿ ಹೇಳಿದರು.