Saturday, June 10, 2023
Home Blog

ಪ್ರವಾಸಿ ತಾಣಗಳಲ್ಲಿ ಅರಣ್ಯ ಇಲಾಖೆ ಅಸಮರ್ಪಕ ನಿರ್ವಹಣೆ-ಸುಧೀರ್ ಅಬ್ಬುಗುಡಿಗೆ ಆರೋಪ

0

ಕಳಸ: (ನ್ಯೂಸ್ ಮಲ್ನಾಡ್ ವರದಿ) ಕಳಸ ವಲಯದ ವಿವಿಧ ಪ್ರವಾಸಿ ತಾಣಗಳ ನಿರ್ವಹಣೆ ಅಸಮರ್ಪಕವಾಗಿದೆ, ಮಾವಿನಕೆರೆ ಗ್ರಾಮದ ವ್ಯಾಪ್ತಿಗೆ ಬರುವ ಕಲಸೇಶ್ವರ ಗ್ರಾಮಾರಣ್ಯ ಸಮಿತಿಗೆ ಸಂಬಂಧಿಸಿದಂತೆ, ಸಮಿತಿಯು ರಚನೆಯಾದ ವರ್ಷದಿಂದ ಇಂದಿನವರೆಗೂ ನಡೆದಿರುವ ಹಣಕಾಸಿನ ವ್ಯವಹಾರದಲ್ಲಿ, ಹಾಗೂ ಸೂರಮನೆ ಜಲಪಾತ ಮತ್ತು ಕ್ಯಾತನಮಕ್ಕಿ ಗುಡ್ಡದ ಶುಲ್ಕ ಸಂಗ್ರಹಣೆ ಮತ್ತು ನಿರ್ವಹಣೆ ವಿಚಾರದಲ್ಲಿ ಹಲವಾರು ವ್ಯತ್ಯಾಸಗಳು ಕಂಡು ಬಂದಿರುತ್ತಿದ್ದೆ ಎಂದು ಸುಧೀರ್ ಅಬ್ಬುಗುಡಿಗೆ ಆರೋಪಿಸಿದ್ದಾರೆ.

ಇದನ್ನೂ ಓದಿ; ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಸಮಿತಿ ಮೂಲಕ ಅರಣ್ಯ ಇಲಾಖೆ ನಡೆಸಿರುವ ವ್ಯವಹಾರಗಳ ಬಗ್ಗೆ ಮಾಹಿತಿ ನೀಡುವಂತೆ 2022ರಲ್ಲಿ ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಲಾಗಿತ್ತು. ಕಳಸ ಅರಣ್ಯ ಇಲಾಖೆ ಸಮಂಜಸಿ ಮಾಹಿತಿ ನೀಡದಿರುವುದರಿಂದ ಕೊಪ್ಪ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಅರ್ಜಿ ಸಲ್ಲಿಸಿ ಐದಾರು ತಿಂಗಳ ನಂತರ ದೃಢೀಕೃತ ನಕಲು ಪ್ರತಿಯೊಂದಿಗೆ ಮಾಹಿತಿ ನೀಡಲಾಗಿದೆ ಎಂದರು.

ಇದನ್ನೂ ಓದಿ; ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ

10 ಸಾವಿರ ಬಾಡಿಗೆ ಪಡೆದಿರುವುದೇ ಕೊನೆಯ ವ್ಯವಹಾರ:
2007 ರಂದು ಸಮಿತಿಯ ಮೂಲಕ ಎರಡು ಹಂತದಲ್ಲಿ ರಮಣ ಫರ್ನೀಚರ್ಸ್ ಶಿವಮೊಗ್ಗ ಇವರಿಗೆ 1,00,571 ರೂ.ಗಳನ್ನ ಪಾವತಿಸಿ ಖರೀದಿಸಲಾದ 337 ಪ್ಲಾಸ್ಟಿಕ್ ಕುರ್ಚಿ ಮತ್ತು 10 ಸ್ಟೀಲ್ ಟೇಬಲ್ ಗಳನ್ನು ಬಾಡಿಗೆ ನೀಡಿ ಅದರಿಂದ ಬಂದ ಹಣವನ್ನು ಸಮಿತಿಯ ಖಾತೆಗೆ ಜಮಾ ಮಾಡಿಕೊಳ್ಳುವ ಬಗ್ಗೆ ಸಭಾ ನಿರ್ಣಯ ಕೈಗೊಂಡು ಕಾರ್ಯರೂಪಕ್ಕೆ ತರಲಾಗಿರುತ್ತದೆ. ಆದರೆ 10 ಸಾವಿರ ಬಾಡಿಗೆ ಪಡೆದಿರುವುದೇ ಕೊನೆಯ ವ್ಯವಹಾರವಾಗಿರುತ್ತದೆ. ಅಲ್ಲದೇ ಇದುವರೆಗೂ ಕೇವಲ 29,477 ರೂಗಳು ಮಾತ್ರ ಸಮಿತಿಯ ಖಾತೆಯಲ್ಲಿ ಉಳಿಸಲಾಗಿದೆಯೆಂಬ ಮಾಹಿತಿಯಿದೆ ಎಂದು ದೂರುದರು.

ಸುರಕ್ಷತೆ ಹಾಗೂ ಸ್ವಚ್ಛತೆಗಿಲ್ಲ ಸಿಬ್ಬಂದಿಗಳು:
2021 ಜನವರಿ ತಿಂಗಳಿಂದ ಅಬ್ಬುಗುಡಿಗೆ ಜಲಪಾತ ವೀಕ್ಷಣೆಗೆ 30 ರೂ. ಮತ್ತು ಕ್ಯಾತನಮಕ್ಕಿ ಗುಡ್ಡಕ್ಕೆ 50 ರೂಗಳ ವೀಕ್ಷಣಾ ಶುಲ್ಕ ಪ್ರತಿ ವ್ಯಕ್ತಿಗೆ ವಿಧಿಸಿ, ನಿರ್ವಹಿಸಿಕೊಂಡು ಬರಲಾಗುತ್ತಿದೆ. ಜಲಪಾತ ವೀಕ್ಷಣೆಗೆ ಬರುವ ವೀಕ್ಷರಿಂದ ಶುಲ್ಕ ವಸೂಲಿಗೆ ಮತ್ತು ಜಲಪಾತದ ಬಳಿ ಪ್ರವಾಸಿಗರ ಸುರಕ್ಷತೆ ಹಾಗೂ ಸ್ವಚ್ಛತೆ ಕಾಪಾಡಲು ಇಬ್ಬರು ಸಿಬ್ಬಂದಿಗಳನ್ನ ನೇಮಿಸಿಕೊಂಡಿರುತ್ತದೆ. ಆದರೆ ಕಳೆದ ನಾಲ್ಕೈದು ತಿಂಗಳಿಂದ ಕೇವಲ ಒಬ್ಬ ಸಿಬ್ಬಂದಿ ಮಾತ್ರ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಲಪಾತದ ಬಳಿಯಿದ್ದು ಸುರಕ್ಷತೆ ಕಾಯ್ದುಕೊಳ್ಳಬೇಕಿದ್ದ ಮತ್ತೊಬ್ಬ ಸಿಬ್ಬಂದಿಯನ್ನ ಇಲಾಖೆ ಇತರೆ ಕೆಲಸಗಳಿಗೆ ಬಳಸಿಕೊಳ್ಳುತ್ತಿದೆ. ಆದರೆ ಇಬ್ಬರಿಗೂ ತಲಾ 12,000 ಸಂಬಳ ಮಾತ್ರ ಸಮಿತಿಯಿಂದಲೇ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು

2022ರ ನವೆಂಬರ್‌ನಲ್ಲಿ ವಿತರಿಸಿದ ಹಳದಿ ಬಣ್ಣದಲ್ಲಿ ಮುದ್ರಿಸಿದ ಟಿಕೆಟ್‌ಗಳು ಪುನರಾವರ್ತನೆಯಾದ ಬಗ್ಗೆ ಉಪವಲಯ ಅರಣ್ಯಾಧಿಕಾರಿಯ ಗಮನಕ್ಕೆ ತರಲಾಗಿತ್ತು ಎಂದು ಹೇಳಿದರು. ಇದೇ ಕ್ರಮ ಸಂಖ್ಯೆ ಟಿಕೆಟ್ ಬುಕ್‌ಗಳು ಗುಲಾಬಿ ಬಣ್ಣದಲ್ಲಿ 2022ನೇ ಜುಲೈ, ಆಗಸ್ಟ್ ತಿಂಗಳಲ್ಲಿ ನೀಡಲಾಗಿತ್ತು. 1500ಕ್ಕೂ ಹೆಚ್ಚು ಟಿಕೆಟ್‌ಗಳು ಪುನರಾವರ್ತನೆಯಾಗಿರುವ ಅನುಮಾನವಿದೆ. ಸಭಾ ನಡಾವಳಿಯಲ್ಲಿ ಕ್ಯಾತನಮಕ್ಕಿ ಟಿಕೆಟ್ ಬುಕ್ ಕ್ರಮ ಸಂಖ್ಯೆ 42801ರಿಂದ 44100ರವರೆಗೆ ಒಟ್ಟು 13 ಬುಕ್ ಪ್ರಿಂಟಿಂಗ್ ಪ್ರೆಸ್‌ನವರ ಕಣ್ಣಪ್ಪಿನಿಂದ ಆಗಿದೆಯೆಂದು ಪ್ರಸ್ತಾಪಿಸಲಾಗಿದೆ. ನಗದು ವ್ಯವಹಾರ ಪುಸ್ತಕದಲ್ಲಿ ವಿತರಿಸಲಾದ ಟಿಕೆಟ್ ಕ್ರಮ ಸಂಖ್ಯೆ ಮತ್ತು ಸಂಗ್ರಹವಾದ ಹಣದ ವಿವರವನ್ನು 2022ರ ಸೆಪ್ಟೆಂಬರ್‌ವರೆಗೆ ಮಾತ್ರ ನಮೂದಿಸಲಾಗಿದೆ. ಟಿಕೆಟ್ ಕ್ರಮ ಸಂಖ್ಯೆ ವಿವರಗಳಿಲ್ಲ. ಜಲಪಾತ ಮತ್ತು ಕ್ಯಾತನಮಕ್ಕಿ ಗುಡ್ಡದ ಶುಲ್ಕ ಸಂಗ್ರಹಣಿ ಮತ್ತು ನಿರ್ವಹಣಿ ಗುತ್ತಿಗೆ ನೀಡುವ ಬಗ್ಗೆ ಇಲಾಖೆ ಮುಂದಾಗುತ್ತಿಲ್ಲ ಎಂದು ದೂರಿದರು.

ಟಿಕೆಟ್ ಕೌಂಟರ್ ನಿಂದ ಪಾರ್ಕಿಂಗ್ ತನಕ ಹೋಗಲು ಟಿ.ಟಿ.ಯಂತಹ ವಾಹನಗಳಿಗೆ ಮಳೆಗಾಲದಲ್ಲಿ ರಸ್ತೆ ಸಮಸ್ಯೆಯಾಗುವುದು ನಿಜ. ಆದರೆ ಬೇಸಿಗೆ ಕಾಲದಲ್ಲೂ ಸಹ ಹೋಗದಂತೆ ತಡೆಹಿಡಿಯಲಾಗಿದೆ. ಈ ವಿಚಾರದಲ್ಲಿ ಸಮಿತಿಯು ಸಭಾ ನಿರ್ಣಯ ಸಹ ಮಾಡಿರುವುದಿಲ್ಲ ಮತ್ತು ಸಂಬಂಧಪಟ್ಟ ಇತರೆ ಯಾವುದೇ ಇಲಾಖೆಯಿಂದ ಅನುಮತಿ ಪಡೆದಿರುವ ಬಗ್ಗೆ ಮಾಹಿತಿಯಿಲ್ಲ.

ಇದನ್ನೂ ಓದಿ; ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು

ಲಕ್ಷಾಂತರ ರೂಪಾಯಿ ಆದಾಯವಿದ್ದರೂ ಜಲಪಾತಕ್ಕೆ ಹೋಗುವ ಮಾರ್ಗ ಮಧ್ಯೆ ಸಿಗುವ ಅಬ್ಬುಗುಡಿಗೆ ಹಳ್ಳಕ್ಕೆ ಕಿರುಸೇತುವೆ ಸಹ ಮಾಡಿಸಲು ಇಲಾಖೆ ಇನ್ನೂ ಪ್ರಯತ್ನಿಸುತ್ತಿಲ್ಲ. ಸಂಬಂಧಿಸಿದ ಇಲಾಖೆಯಿಂದ ಅಂದಾಜು ಪಟ್ಟಿ ತಯಾರಿಸದೇ, ಜಲಪಾತದ ಬಳಿ ಮೆಟ್ಟಿಲು ನಿರ್ಮಾಣ, ಪಾರ್ಕಿಂಗ್ ನಿರ್ಮಾಣ ಮಾಡಲಾಗಿದೆ. ಆದರೆ ಇದನ್ನೂ ಸಹ ಪೂರ್ಣ ಪ್ರಮಾಣದಲ್ಲಿ ಮಾಡಿರುವುದಿಲ್ಲ. ಅಲ್ಲದೇ ಪ್ರವಾಸಿಗರ ಅನುಭವ ಮತ್ತು ದೂರುಗಳನ್ನು ದಾಖಲಿಸಲು ಪುಸ್ತಕವನ್ನು ನಿರ್ವಹಿಸುತ್ತಿಲ್ಲ.

ಮಲೆನಾಡು ಭಾಗದಲ್ಲಿ ಕೃಷಿಯನ್ನೆ ನಂಬಿರುವ ಹಲವರು, ಇತ್ತೀಚೆಗೆ ಅಡಿಕೆ ಮರಗಳಿಗೆ ವ್ಯಾಪಕವಾಗಿ ಹರಡುತ್ತಿರುವ ರೋಗ, ತೋಟ ನಿರ್ವಹಣೆ ದುಬಾರಿ ವೆಚ್ಚ, ಪ್ರತಿವರ್ಷ ಅತೀವೃಷ್ಟಿಯಿಂದಾಗಿ ಫಸಲು ಹಾನಿಯಾಗಿ ಆದಾಯ ಕಡಿಮೆಯಾಗಿ ಕೃಷಿಯಿಂದಲೇ ಜೀವನ ನಿರ್ವಹಣೆ ಕಷ್ಟವೆನಿಸಿ, ಇದೀಗ ಹೋಂಸ್ಟೇಯಂತಹ ಪರ್ಯಾಯ ಮಾರ್ಗದತ್ತ ಯೋಚಿಸುತ್ತಿದ್ದಾರೆ. ಕಳಸದಲ್ಲಿಯೇ ಉದ್ಯೋಗ ಸೃಷ್ಟಿ ಅವಕಾಶವಿರುವಾಗ, ಪ್ರವಾಸಿ ಸ್ಥಳಗಳನ್ನು ಅಭಿವೃದ್ಧಿಪಡಿಸುವತ್ತ ಪರಿಸರ ಉಳಿಸುವುದರ ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವತ್ತ ಅರಣ್ಯ ಇಲಾಖೆ ಗಮನ ಹರಿಸುವಂತೆ ಕಾಣುತ್ತಿಲ್ಲ. ಇವೆಲ್ಲದರ ಬಗ್ಗೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಮತ್ತು ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗುವುದು ಎಂದು ಸುಧೀರ್ ಅಬ್ಬುಗುಡಿಗೆ ಹೇಳಿದರು.

ಇದನ್ನೂ ಓದಿ;  ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

ಮೂಡಿಗೆರೆಯ ದೇವರುಮನೆಯಲ್ಲಿ ಸಿಕ್ಕ ಶವದ ಹಿಂದಿನ ಸ್ಟೋರಿ ಏನು? ಕೊಲೆಯಾಗಿದ್ದಾನೆ ಎನ್ನಲಾದ ಆತ ಯಾರು?

0

ಮೂಡಿಗೆರೆ/ಬಂಟ್ವಾಳ: (ನ್ಯೂಸ್ ಮಲ್ನಾಡ್ ವರದಿ) ಪ್ರಸಿದ್ಧ ಪ್ರವಾಸಿ ತಾಣವಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವರು ಮನೆ ಗುಡ್ಡದ ವ್ಯಾಪ್ತಿಯಲ್ಲಿ ಯುವಕನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಯುವಕನ ಮೃತದೇಹ ಎಂದು ತಿಳಿದು ಬಂದಿದೆ.

ಇದನ್ನೂ ಓದಿ; ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಇದನ್ನೂ ಓದಿ; ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ

ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಕುಕ್ಕಾಜೆ ನಿವಾಸಿ ಸವಾದ್ (35) ಎಂಬವರ ಮೃತದೇಹ ದೇವರು ಮನೆ ಗುಡ್ಡದ ಸಮೀಪದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು. ಮೃತ ಸವಾದ್ 10 ದಿನಗಳಿಂದ ಕಾಣೆಯಾಗಿದ್ದು, ಮೊಬೈಲ್ ಸಂಪರ್ಕಕ್ಕೂ ಸಿಗುತ್ತಿರಲಿಲ್ಲ. ಈ ಹಿಂದೆ ಕೂಡಾ ಈತ ಇದೇ ತರಹ ಸಂಪರ್ಕಕ್ಕೆ ಸಿಗದೆ ಕೆಲವು ದಿನಗಳ ಬಳಿಕ ಮನೆಗೆ ಬರುತ್ತಿದ್ದ ಎನ್ನಲಾಗಿದ್ದು, ಮನೆಯವರು ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ.

ಇದನ್ನೂ ಓದಿ; ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು

ಆದರೆ ಈತನ ಅಣ್ಣನಿಗೆ ಸವಾದ್ ನ ಕೊಲೆಯಾಗಿರುವ ಬಗ್ಗೆ ವ್ಯಕ್ತಿಯೊಬ್ಬ ಮಾಹಿತಿ ನೀಡಿದ್ದು, ಮಾಹಿತಿ ಆಧರಿಸಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ಶರೀರದ ಗುರುತು ಪತ್ತೆ ಹಚ್ಚಿ, ಸವಾದ್‌ನದೇ ಮೃತದೇಹ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು

ಮೃತ ದೇಹದ ಗುರುತು ಸಿಗದ ರೀತಿಯಲ್ಲಿ ಮುಖಕ್ಕೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದ್ದು, ಮಾದಕ ವ್ಯಸನಿಗಳ ತಂಡ ಈ ಕೃತ್ಯ ಎಸಗಿದ್ದಾರೆ ಎಂದು ದೂರಲಾಗಿದೆ. ಹಂತಕರು ಕಾವಳಕಟ್ಟೆ ವಗ್ಗ ಮೂಲದ ಪೆಡ್ಲರ್ ತಂಡದವರು ಎಂಬ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ ಎನ್ನಲಾಗಿದ್ದು, ಶೋಧಕಾರ್ಯ ನಡೆಯುತ್ತಿದೆ.

ಗಾಂಜಾ ಹಾವಳಿ ವ್ಯಾಪಕ:
ಕುಕ್ಕಾಜೆ ಸಹಿತ ಗ್ರಾಮಾಂತರ ಭಾಗದಲ್ಲಿ ಗಾಂಜಾ ಹಾವಳಿ ವ್ಯಾಪಕವಾಗಿದ್ದು, ಯುವಜನತೆ ಅದಕ್ಕೆ ಬಲಿ ಬೀಳುತ್ತಿದ್ದಾರೆ. ಸವಾದ್ ಸಾವಿಗೂ ಗಾಂಜಾ ಪ್ರಕರಣವೇ ಕಾರಣವಾಗಿರಬಹುದು. ಕೇರಳ ಗಡಿ ಭಾಗವಾಗಿರುವುದರಿಂದ ಸಾಕಷ್ಟು ಪ್ರಮಾಣದಲ್ಲಿ ಗಾಂಜಾ ಪೂರೈಕೆಯಾಗುತ್ತಿದೆ. ಪೊಲೀಸರು ಹಾಗೂ ಸಂಬಂಧ ಪಟ್ಟ ಇಲಾಖೆಯವರು ಈ ಕುರಿತು ಗಮನ ಹರಿಸಿ, ಗಾಂಜಾ ಹಾವಳಿಯನ್ನು ತಡೆಯಬೇಕು ಎಂದು ಸ್ಥಳೀಯರಾದ ಆಗ್ರಹಿಸಿದ್ದಾರೆ.

ದೇವರು ಮನೆ ಗುಡ್ಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವ ಕಂಡು ಪ್ರವಾಸಿಗಳು ಶಾಕ್

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಪ್ರಸಿದ್ಧ ಪ್ರವಾಸಿ ತಾಣವಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ದೇವರು ಮನೆ ಗುಡ್ಡದ ವ್ಯಾಪ್ತಿಯಲ್ಲಿ ಯುವಕನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು.

ಇದನ್ನೂ ಓದಿ;  ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

ಜಿಲ್ಲೆಯಲ್ಲಿ ಚಾರಣಕ್ಕೆ ಹೆಸರುವಾಸಿಯಾಗಿರುವ ಸ್ಥಳವಾದ ದೇವರು ಮನೆ ಗುಡ್ಡದ ಸಮೀಪದ ರಸ್ತೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಗುರುತು ಸಿಗದ ಸ್ಥಿತಿಯಲ್ಲಿ ಶವ ದೊರಕಿತ್ತು. ಯುವಕನನ್ನು ಕೊಲೆ ಮಾಡಿ ಈ ಸ್ಥಳಕ್ಕೆ ತಂದು ಎಸೆದಿರುವ ಶಂಕೆ ಕೂಡ ವ್ಯಕ್ತವಾಗಿತ್ತು. ಘಟನಾ ಸ್ಥಳಕ್ಕೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ಆರಂಭಿಸಿದ್ದರು.

ಇದನ್ನೂ ಓದಿ; ಯುವಕನ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ದಟ್ಟವಾದ ಅರಣ್ಯ ಪ್ರದೇಶವನ್ನು ಹೊಂದಿರುವ ಚಾರ್ಮಾಡಿ ಘಾಟ್ ನ ಸುತ್ತಮುತ್ತಲಿನ ನಿರ್ಜನ ಪ್ರದೇಶಗಳಲ್ಲಿ ಈ ಹಿಂದೆಯೂ ಹಲವಾರು ವ್ಯಕ್ತಿಗಳ ಮೃತದೇಹಗಳು ಕೂಡ ಪತ್ತೆಯಾಗಿದ್ದವು. ಘಟನಾ ಸಂಬಂಧ ಪರಿಶೀಲನೆ ಆರಂಭಿಸಿರುವ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಕಲೆಹಾಕಲು ಆರಂಭಿಸಿದ್ದರು.

ಚಿಕ್ಕಮಗಳೂರು: ಪ್ರವಾಸಿ ತಾಣದಲ್ಲಿ ಕಾಡು ಪ್ರಾಣಿಗಳ ಉಪಟಳ

0

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕರ್ನಾಟಕದ ಪಶ್ಚಿಮ ಭಾಗದಲ್ಲಿರುವ ಸುಂದರವಾದ ಜಿಲ್ಲೆ ಚಿಕ್ಕಮಗಳೂರು ‘ಕಾಫಿ ನಾಡು’ ಎಂದೇ ಪ್ರಸಿದ್ಧಿ ಪಡೆದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಫಿ ತೋಟಗಳು ಮತ್ತು ಆಕರ್ಷಣೀಯ ಗಿರಿಧಾಮಗಳಿಗೆ ಪ್ರಸಿದ್ಧಿಯನ್ನು ಪಡೆದಿದೆ. ಇಲ್ಲಿನ ಐತಿಹಾಸಿಕ ದೇವಾಲಯಗಳು ಹಾಗೂ ಜಲಪಾತಗಳು ಜನರ ಕಣ್ಮನ ಸೆಳೆಯುವಂತದ್ದು.

ಇದನ್ನೂ ಓದಿ; ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಇದನ್ನೂ ಓದಿ; ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ

ಆದರೆ ಚಿಕ್ಕಮಗಳೂರು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಕಾಡು ಪ್ರಾಣಿಗಳ ಭೀತಿ ಶುರುವಾಗಿದೆ. ದತ್ತಪೀಠ, ಮುಳ್ಳಯ್ಯಗಿರಿಯ ತಪ್ಪಿನಲ್ಲಿ ಕಾಡು ಪ್ರಾಣಿಗಳ ಉಪಟಳದಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ನಿನ್ನೆ ಕಾಡಾನೆಗಳು ಪ್ರತ್ಯಕ್ಷವಾಗಿ ಕೆಲಕಾಲ ಭಯದ ವಾತಾರಣವನ್ನು ಸೃಷ್ಠಿಮಾಡಿತ್ತು.

ಇದನ್ನೂ ಓದಿ; ದೇವರು ಮನೆ ಗುಡ್ಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವ ಕಂಡು ಪ್ರವಾಸಿಗಳು ಶಾಕ್

ಹೌದು ದತ್ತಪೀಠದ ಸಮೀಪ ಗಾಳಿಕೆರೆಗೆ ತೆರಳುವ ಮಾರ್ಗದಲ್ಲಿ ಎರಡು ಕಾಡಾನೆಗಳು ರಸ್ತೆಯಲ್ಲಿ ನಿಂತಿದ್ದವು, ಸ್ಥಳೀಯ ಯುವಕರು ಹಾಗೂ ಪ್ರವಾಸಿಗರು ಗಮನಿಸಿ ಕೂಗಾಟ ನಡೆಸಿದ್ದರಿಂದ ರಸ್ತೆಯಿಂದ ಅರಣ್ಯದ ಕಡೆಗೆ ತೆರಳಿದ್ದು ಕೆಲ ಹೊತ್ತು ಅಲ್ಲೇ ಓಡಾಟ ನಡೆಸಿ ನಂತರ ಮರಗಳಿರುವ ಸ್ಥಳಕ್ಕೆ ಆನೆಗಳು ತೆರಳಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು

ಆನೆಗಳು ಆಹಾರ ಅರಸಿ ಬಂದಿರುವ ಸಾಧ್ಯತೆಯಿದ್ದು, ಕಾಡಾನೆ ಕಾಣಿಸಿಕೊಂಡು ಕೆಲ ಕಾಲ ಭಕ್ತರು ಹಾಗೂ ಸ್ಥಳೀಯರಿಗೆ ಆತಂಕ ಮೂಡಿಸಿದೆ.

ಚಿಕ್ಕಮಗಳೂರು: ಹತ್ತೂರು ತಿರುಗಿದರೂ ದೊರೆಯದ ಶೌಚಾಲಯ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಪ್ರಕೃತಿ ಪ್ರೇಮಿಗಳ ಸ್ವರ್ಗ, ಪ್ರವಾಸಿಗರ ಮೆಚ್ಚಿನ ತಾಣವಾದ ಚಿಕ್ಕಮಗಳೂರಿನ ಬಾಬಾಬುಡನಗಿರಿ ದತ್ತ ಪೀಠ, ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಅಲ್ಲಿ ಕನಿಷ್ಠ ಶೌಚಾಲಯದಂತಹ ಮೂಲಸೌಕರ್ಯವಿಲ್ಲದೆ ತಾನು ಅನುಭವಿಸಿದ ಯಾತನೆಯನ್ನು ಮಹಿಳೆಯೊಬ್ಬರು ರಾಷ್ಟ್ರಪತಿ ಮರ್ಮು ಅವರಿಗೆ ಪತ್ರ ಮುಖಾಂತರ ವಿವರಿಸಿದ್ದಾರೆ. ಇದೀಗ ಆ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ;  ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

ಕನ್ನಡದಲ್ಲಿ ಪತ್ರ ಬರೆದಿರುವ ಜಡೆಮ್ಮ ಎಂಬ ಮಹಿಳೆ ತನಗೆ ಎದುರಾದ ಸಂಕಷ್ಟವನ್ನು ಎಳೆಎಳೆಯಾಗಿ ವಿವರಿಸಿದ್ದಾರೆ. ಲಕ್ಷಾಂತರ ಜನರು ಭೇಟಿ ನೀಡುವ ಯಾತ್ರಾ ಕೇಂದ್ರಗಳಲ್ಲಿ ಕನಿಷ್ಠ ಶೌಚಾಲಯಗಳನ್ನಾದರೂ ನಿರ್ಮಿಸುವಂತೆ ಪತ್ರದಲ್ಲಿ ಮಹಿಳೆ ಒತ್ತಾಯಿಸಿದ್ದಾರೆ. ನೀವು ರಾಷ್ಟ್ರಪತಿಯಾದರೂ ಮಹಿಳೆಯಾಗಿರುವ ಕಾರಣ ನಿಮಗೆ ನನ್ನ ಯಾತನೆ ಹೆಚ್ಚು ಅರ್ಥವಾಗಬಹುದು ಎಂದು ವಿವರಿಸಿದ್ದಾರೆ. ಅಲ್ಲದೆ “ನನ್ನಂತಹ ಸಾಮಾನ್ಯ ಮಹಿಳೆಯರ ನೋವನ್ನು ತಿಳಿಸುವುದು ಪತ್ರದ ಮುಖ್ಯ ಉದ್ದೇಶ ಎಂದು ಹೇಳಿದ್ದಾರೆ.

“ಕೆಲವು ದಿನಗಳ ಹಿಂದೆ ನಾನು ಬಾಬಾಬುಡನಗಿರಿ ದತ್ತ ಪೀಠ, ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿಗೆ ಭೇಟಿ ನೀಡಿದ್ದೆ, ಬಾಬಾಬುಡನ್‌ಗಿರಿಯಲ್ಲಿ ಈ ವೇಳೆ ನನಗೆ ನೈಸರ್ಗಿಕ ಕರೆ ಒತ್ತಡ ಆರಂಭವಾಯಿತು. ಈ ವೇಳೆ ಸಾರ್ವಜನಿಕ ಶೌಚಾಲಯಕ್ಕಾಗಿ ಹುಡುಕಾಡಿದರೂ ಪ್ರಯೋಜನವಾಗಲಿಲ್ಲ. “ನಂತರ ಸೀತಾಳಯ್ಯನಗಿರಿ ಹತ್ತಿ ಸಾರ್ವಜನಿಕ ಶೌಚಾಲಯಕ್ಕಾಗಿ ಅವರಿವರಲ್ಲಿ ಕೇಳಿದೆ. ಅಲ್ಲಿಯೂ ಶೌಚಾಲಯವಿರಲಿಲ್ಲ. ಈ ವೇಳೆ ಕ್ಷಣಕ್ಷಣಕ್ಕೂ ಯಾತನೆ ಅನುಭವಿಸಿದೆ. ಬಳಿಕ ಸಹಿಸಲಾಗದೆ ಅವಮಾನ ಬದಿಗಿಟ್ಟು ಮೂತ್ರ ವಿಸರ್ಜನೆ ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಯುವಕನ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರತಿದಿನವೂ ಜನರು ತಮ್ಮ ಧರ್ಮ ಮತ್ತು ದೇವರಿಗಾಗಿ ಹೋರಾಡುತ್ತಾರೆ, ಆದರೆ ಶೌಚಾಲಯಗಳನ್ನು ನಿರ್ಮಿಸುವ ಬಗ್ಗೆ ಅವರ ನಿರ್ಲಕ್ಷ್ಯ ದುರದೃಷ್ಟಕರ. ಇಂತಹ ಪ್ರಸಿದ್ಧ ಸ್ಥಳದಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲದಿರುವುದು ಸಂವಿಧಾನದ 19 ಮತ್ತು 21 ನೇ ವಿಧಿಯ ಉಲ್ಲಂಘನೆಯಾಗಿದೆ. ನಾವು ಮಂಗಳ ಗ್ರಹವನ್ನು ತಲುಪಿದ್ದೇವೆ ಆದರೆ ಭೂಮಿ ಮೇಲೆ ಅಗತ್ಯವಿದ್ದಲ್ಲಿ ಶೌಚಾಲಯ ನಿರ್ಮಿಸಲು ಸಾಧ್ಯವಾಗಿರುವುದು ಶೋಚನೀಯ ಎಂದು ವಿವರಿಸಿದ್ದಾರೆ.

ಚಿಕ್ಕಮಗಳೂರು: ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಯಾತ್ರಿಕ ಹೃದಯಾಘಾತದಿಂದ ಸಾವು

0

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಒಡಿಶಾದ ರೈಲು ದುರಂತದಲ್ಲಿ ಸುಮೇದ್ ಸಿಖರ್ಜಿ ಯಾತ್ರೆಗೆಂದು ಹೊರಟಿದ್ದ 110 ಯಾತ್ರಿಕರು ಬದುಕುಳಿದಿದ್ದು, ಈ ಪೈಕಿ ಒಬ್ಬ ಯಾತ್ರಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ; ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಇದನ್ನೂ ಓದಿ; ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಕೋಡು ನಿವಾಸಿ ಧರ್ಮಪಾಲಯ್ಯ (72) ಮೃತ ದುರ್ದೈವಿ. ಇವರು ಸೇರಿದಂತೆ 110 ಯಾತ್ರಿಕರು ಸುಮೇದ್ ಸಿಖರ್ಜಿ ಯಾತ್ರೆಗೆಂದು ಬೆಂಗಳೂರಿನಿಂದ ರೈಲಿನಲ್ಲಿ ಹೊರಟ್ಟಿದ್ದರು. ಒಡಿಶಾದಲ್ಲಿ ರೈಲು ದುರಂತ ನಡೆದ ಸಂದರ್ಭದಲ್ಲಿ ಯಾತ್ರೆಗೆ ತೆರಳುತ್ತಿದ್ದ ಈ 110 ಕನ್ನಡಿಗರೂ ಬದುಕುಳಿದಿದ್ದರು.

ಇತ್ತೀಚಿನ ಜನಪ್ರಿಯ ಸುದ್ದಿಗಳು

ಬಳಿಕ ಸುಮೇದ್ ಸಿಖರ್ಜಿ ಯಾತ್ರೆಗೆ ತೆರಳಿದ ಅವರು, ಯಾತ್ರೆ ಮುಗಿಸಿ ಹಿಂದಿರುಗುವಾಗ ಉತ್ತರ ಪ್ರದೇಶದ ಮಿರ್ಜಾಪುರ ರೈಲ್ವೇ ಸ್ಟೇಷನ್‌ನಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಶವ ಪರೀಕ್ಷೆಗಾಗಿ ಅವರ ಸಂಬಂಧಿಕರು ಮಿರ್ಜಾಪುರ ಸರ್ಕಾರಿ ಆಸ್ಪತ್ರೆ ಬಳಿ ಕಾಯುತ್ತಿದ್ದಾರೆ.

ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ವಸತಿ ಶಾಲೆಯೊಂದರಲ್ಲಿ 13 ವರ್ಷದ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ತೇಜಸ್ವಿನಿ(13) ಮೃತಪಟ್ಟ ವಿದ್ಯಾರ್ಥಿನಿ.

ಇದನ್ನೂ ಓದಿ;  ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿರುವ ಖಾಸಗಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 13 ವರ್ಷದ ತೇಜಸ್ವಿನಿ ಎಂಬ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ವಿದ್ಯಾರ್ಥಿನಿಯ ಪಾರ್ಥಿವ ಶರೀರ ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಮೃತ ಪಟ್ಟ ವಿದ್ಯಾರ್ಥಿನಿಯ ಶವದ ಮರಣೋತ್ತರ ಪರೀಕ್ಷೆಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ಉನ್ನತ ಮಟ್ಟದ ವೈದ್ಯರಿಂದ ಶವ ಪರೀಕ್ಷೆ ಮಾಡಿಸಲು ತೀರ್ಮಾನಿಸಲಾಗಿದೆ ಎಂದೂ ತಿಳಿದು ಬಂದಿದೆ.

ಇದನ್ನೂ ಓದಿ; ಯುವಕನ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಇನ್ನು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ಮೃತ ವಿದ್ಯಾರ್ಥಿನಿಯ ಪೋಷಕರಿಗೆ ಸಾಂತ್ವಾನ ಹೇಳಿ. ವಿದ್ಯಾರ್ಥಿನಿ ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಕರಣ ದಾಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಚಿಕ್ಕಮಗಳೂರು; ಸೆಂಟ್ರಿಂಗ್ ಶೀಟ್ ಕಳವು ಮಾಡಿದ ಆರೋಪಿಗಳ ಬಂಧನ

0

ಚಿಕ್ಕಮಗಳೂರು; (ನ್ಯೂಸ್ ಮಲ್ನಾಡ್ ವರದಿ) ಸೆಂಟ್ರಿಂಗ್ ಶೀಟ್ ಕಳವು ಮಾಡಿದ ಆರೋಪಿಗಳ ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಮಹಮ್ಮದ್ ಸದ್ದಾಂ(26), ಇರ್ಫಾನ್ ಹುಸೇನ್(20), ವಸೀಂ(25), ಬಂಧಿತ ಆರೋಪಿಗಳು.

ಇದನ್ನೂ ಓದಿ; ದೇವರು ಮನೆ ಗುಡ್ಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವ ಕಂಡು ಪ್ರವಾಸಿಗಳು ಶಾಕ್

ಇದನ್ನೂ ಓದಿ; ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು

ವಿವಿಧ ಕಡೆಗಳಲ್ಲಿ ಕಾಮಗಾರಿ ಹಂತದಲ್ಲಿರುವ ಮನೆಗಳಲ್ಲಿ ಇಟ್ಟಿದ್ದ ಸೆಂಟ್ರಿಂಗ್ ಶೀಟ್ ಗಳನ್ನು ಕಳವು ಮಾಡಿದ್ದ ಆರೋಪಿಗಳನ್ನು ಚಿಕ್ಕಮಗಳೂರು ನಗರ ಪೊಲೀಸ್ ತಂಡದ ನೇತೃತ್ವದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿರ ಆರೋಪಿಗಳಿಂದ 4 ಲಕ್ಷ ಮೌಲ್ಯದ 767 ಸೆಂಟ್ರಿಂಗ್ ಶೀಟ್ ಗಳನ್ನು ಮತ್ತು ಕೃತ್ಯಕ್ಕೆ ಬಳಸಿದ್ದ 6 ಲಕ್ಷ ಬೆಲೆಯ ಒಂದು ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು

ಪ್ರಕರಣವನ್ನು ಪತ್ತೆ ಮಾಡಿದ ಪೊಲೀಸ್ ತಂಡದಲ್ಲಿ ಪಿ.ಐ ಜಯರಾಮ್ ಎಸ್.ಎನ್, ಪಿ.ಎಸ್.ಐ ಮಂಜುಳಾ ಬಾಯಿ ಮತ್ತು ಪೊಲೀಸ್ ಸಿಬ್ಬಂದಿಗಳಾದ ನಂಜಪ್ಪ ಹೆಚ್ ಎಸ್, ದಿನೇಶ್, ನವೀನ್ ಹೆಚ್ ಎಸ್, ಮಧುಕುಮಾರ ಎಸ್ ಬಿ ಮತ್ತು ಪ್ರದೀಪ ಹೆಚ್ ಜಿ ರವರು ಕಾರ್ಯನಿರ್ವಹಿಸಿರುತ್ತಾರೆ.

ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ವಸತಿ ಶಾಲೆಯೊಂದರಲ್ಲಿ 13 ವರ್ಷದ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ತೇಜಸ್ವಿನಿ(13) ಮೃತಪಟ್ಟ ವಿದ್ಯಾರ್ಥಿನಿ.

ಇದನ್ನೂ ಓದಿ;  ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿರುವ ಖಾಸಗಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 13 ವರ್ಷದ ತೇಜಸ್ವಿನಿ ಎಂಬ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ವಿದ್ಯಾರ್ಥಿನಿಯ ಪಾರ್ಥಿವ ಶರೀರ ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಮೃತ ಪಟ್ಟ ವಿದ್ಯಾರ್ಥಿನಿಯ ಶವದ ಮರಣೋತ್ತರ ಪರೀಕ್ಷೆಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ಉನ್ನತ ಮಟ್ಟದ ವೈದ್ಯರಿಂದ ಶವ ಪರೀಕ್ಷೆ ಮಾಡಿಸಲು ತೀರ್ಮಾನಿಸಲಾಗಿದೆ ಎಂದೂ ತಿಳಿದು ಬಂದಿದೆ.

ಇದನ್ನೂ ಓದಿ; ಯುವಕನ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಇನ್ನು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ಮೃತ ವಿದ್ಯಾರ್ಥಿನಿಯ ಪೋಷಕರಿಗೆ ಸಾಂತ್ವಾನ ಹೇಳಿ. ವಿದ್ಯಾರ್ಥಿನಿ ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಕರಣ ದಾಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ; ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

0

ಕೊಡಗು: (ನ್ಯೂಸ್ ಮಲ್ನಾಡ್ ವರದಿ) ಸ್ಕೂಟರ್ ಹಾಗೂ ಕಾರಿನ ನಡುವೆ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ನಾಪೋಕ್ಲು-ಮೂರ್ನಾಡು ರಸ್ತೆಯಲ್ಲಿ ನಡೆದಿದೆ.

ಇದನ್ನೂ ಓದಿ; ದೇವರು ಮನೆ ಗುಡ್ಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವ ಕಂಡು ಪ್ರವಾಸಿಗಳು ಶಾಕ್

ಇದನ್ನೂ ಓದಿ; ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು

ಮೂರ್ನಾಡು ರಸ್ತೆಯ ಹೊದವಾಡ ಗ್ರಾಮದ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ. ನಾಪೋಕ್ಲುವಿನ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಪ್ಪಾಜಿ ಮೃತ ದುರ್ದೈವಿಯಾಗಿದ್ದು, ಸ್ಕೂಟರ್‌ನ ಹಿಂಬದಿ ಸವಾರನಿಗೂ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು

ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಪ್ರಕರಣವನ್ನು ದಾಖಲಿಸಲಾಗಿದೆ.

ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ವಸತಿ ಶಾಲೆಯೊಂದರಲ್ಲಿ 13 ವರ್ಷದ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ತೇಜಸ್ವಿನಿ(13) ಮೃತಪಟ್ಟ ವಿದ್ಯಾರ್ಥಿನಿ.

ಇದನ್ನೂ ಓದಿ;  ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿರುವ ಖಾಸಗಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 13 ವರ್ಷದ ತೇಜಸ್ವಿನಿ ಎಂಬ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ವಿದ್ಯಾರ್ಥಿನಿಯ ಪಾರ್ಥಿವ ಶರೀರ ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಮೃತ ಪಟ್ಟ ವಿದ್ಯಾರ್ಥಿನಿಯ ಶವದ ಮರಣೋತ್ತರ ಪರೀಕ್ಷೆಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ಉನ್ನತ ಮಟ್ಟದ ವೈದ್ಯರಿಂದ ಶವ ಪರೀಕ್ಷೆ ಮಾಡಿಸಲು ತೀರ್ಮಾನಿಸಲಾಗಿದೆ ಎಂದೂ ತಿಳಿದು ಬಂದಿದೆ.

ಇದನ್ನೂ ಓದಿ; ಯುವಕನ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಇನ್ನು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ಮೃತ ವಿದ್ಯಾರ್ಥಿನಿಯ ಪೋಷಕರಿಗೆ ಸಾಂತ್ವಾನ ಹೇಳಿ. ವಿದ್ಯಾರ್ಥಿನಿ ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಕರಣ ದಾಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಲಗೇಜ್ ಆಟೋಗೆ ಡಿಕ್ಕಿ ಹೊಡೆದ ಬೊಲೆರೋ; ಓರ್ವ ಸಾವು

0

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಲಗೇಜ್ ಆಟೋಗೆ ಹಿಂಬದಿಯಿಂದ ಬಂದ ಬೋಲೋ ವಾಹನವು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಜಕ್ಕನಹಳ್ಳಿ ಸಮೀಪ ನಡೆದಿದೆ. ಬಿದರಕೊಪ್ಪ ತಾಂಡ ವಾಸಿ ರಾಮನಾಯ್ಕ (72) ಮೃತ ದುರ್ದೈವಿ.

ಇದನ್ನೂ ಓದಿ; ದೇವರು ಮನೆ ಗುಡ್ಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವ ಕಂಡು ಪ್ರವಾಸಿಗಳು ಶಾಕ್

ಇದನ್ನೂ ಓದಿ; ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು

ತೊಟ್ಟಿಲು ಶಾಸ್ತ್ರ ಕಾರ್ಯಕ್ರಮಕ್ಕಾಗಿ ಆಟೋದಲ್ಲಿ ಬಿದರಕೊಪ್ಪ ತಾಂಡದಿಂದ ಎಳನೀರುಕೊಪ್ಪ ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ 12 ಮಂದಿ ಗಾಯಗೊಂಡಿದ್ದು, ಆಟೋದಲ್ಲಿದ್ದವರೆಲ್ಲ ಒಂದೇ ಕುಟುಂಬದವರು ಎಂದು ತಿಳಿದು
ಬಂದಿದೆ. ಗಾಯಾಳುಗಳನ್ನು ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು

ವಿಚಾರ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ, ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಇನ್ನು ಆಟೋದಲ್ಲಿ ಕಾಲು ಹೊರಕ್ಕೆ ಹಾಕಿ ಕುಳಿತಿದ್ದವರ ಕಾಲಿಗೆ ಬೊಲೆರೋ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದಾರೆ. ಹಲವರನ್ನು ಶಿವಮೊಗ್ಗ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು

ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಖಾಸಗಿ ವಸತಿ ಶಾಲೆಯೊಂದರಲ್ಲಿ 13 ವರ್ಷದ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ತೇಜಸ್ವಿನಿ(13) ಮೃತಪಟ್ಟ ವಿದ್ಯಾರ್ಥಿನಿ.

ಇದನ್ನೂ ಓದಿ;  ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿರುವ ಖಾಸಗಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 13 ವರ್ಷದ ತೇಜಸ್ವಿನಿ ಎಂಬ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.

ವಿದ್ಯಾರ್ಥಿನಿಯ ಪಾರ್ಥಿವ ಶರೀರ ಸಾಗರದ ಉಪ ವಿಭಾಗೀಯ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಮೃತ ಪಟ್ಟ ವಿದ್ಯಾರ್ಥಿನಿಯ ಶವದ ಮರಣೋತ್ತರ ಪರೀಕ್ಷೆಯನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ಉನ್ನತ ಮಟ್ಟದ ವೈದ್ಯರಿಂದ ಶವ ಪರೀಕ್ಷೆ ಮಾಡಿಸಲು ತೀರ್ಮಾನಿಸಲಾಗಿದೆ ಎಂದೂ ತಿಳಿದು ಬಂದಿದೆ.

ಇದನ್ನೂ ಓದಿ; ಯುವಕನ ಕೊಲೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಇನ್ನು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ಮೃತ ವಿದ್ಯಾರ್ಥಿನಿಯ ಪೋಷಕರಿಗೆ ಸಾಂತ್ವಾನ ಹೇಳಿ. ವಿದ್ಯಾರ್ಥಿನಿ ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರಕರಣ ದಾಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 09-06-2023

0
  1. ಡಿವೈಡರ್‌ಗೆ ಡಿಕ್ಕಿಯಾಗಿ ಮಿನಿ ಬಸ್ ಪಲ್ಟಿ
  2. ದ್ವಿಚಕ್ರ ವಾಹನಗಳ ಡಿಕ್ಕಿ, ಒಬ್ಬ ಸಾವು
  3. ಗೃಹ ಲಕ್ಷ್ಮೀ ಯೋಜನೆಗೆ ಮಾರ್ಗಸೂಚಿ ಪ್ರಕಟ
  4. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಎಲ್ಲ ಗೊಂದಲಗಳಿಗೆ ಇಲ್ಲಿದೆ ಉತ್ತರ
  5. ಚಿಕ್ಕಮಗಳೂರು: ಹತ್ತೂರು ತಿರುಗಿದರೂ ದೊರೆಯದ ಶೌಚಾಲಯ
  6. ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು
  7. ದೇವರು ಮನೆ ಗುಡ್ಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವ ಕಂಡು ಪ್ರವಾಸಿಗಳು ಶಾಕ್
  8. ಸಿಡಿಲಾಘಾತದಿಂದ ತಪ್ಪಿಸಿಕೊಳ್ಳುವುದು ಹೇಗೆ?
  9. ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ
  10. ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ
  11. ಒಂದೇ ಕೊಠಡಿಯಲ್ಲಿ, 5 ತರಗತಿಗೆ, ಒಬ್ಬರೇ ಮೇಷ್ಟ್ರು
  12. ಲಗೇಜ್ ಆಟೋಗೆ ಡಿಕ್ಕಿ ಹೊಡೆದ ಬೊಲೆರೋ; ಓರ್ವ ಸಾವು
  13. ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ
  14. ಸೆಂಟ್ರಿಂಗ್ ಶೀಟ್ ಕಳವು ಮಾಡಿದ ಆರೋಪಿಗಳ ಬಂಧನ

ಚಿಕ್ಕಮಗಳೂರು: ಒಂದೇ ಕೊಠಡಿಯಲ್ಲಿ, 5 ತರಗತಿಗೆ, ಒಬ್ಬರೇ ಮೇಷ್ಟ್ರು: ಈ ಶಾಲೆಯಲ್ಲಿ ಸಮಸ್ಯೆ ಇಲ್ಲ, ಶಾಲೆಯೇ ಸಮಸ್ಯೆ

0

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಈ ಶಾಲೆಯಲ್ಲಿ ಸಮಸ್ಯೆ ಇಲ್ಲ. ಶಾಲೆಯೇ ಸಮಸ್ಯೆಯಲ್ಲಿ ಇದೆ. ಈ ಶಾಲೆಯ ಪರಿಸ್ಥಿತಿ ಹೀಗಿರುವಾಗ ಇಲ್ಲಿನ ಶಿಕ್ಷಕರದ್ದು ಮತ್ತೊಂದು ಸಮಸ್ಯೆ. ಶಾಲೆ ಆರಂಭವಾಗಿ ವಾರವಾದರೂ ಮಕ್ಕಳು ಮನೆಯಲ್ಲಿಯೇ ಇದ್ದಾರೆ ಹೊರತು ಶಾಲೆಗೆ ಬರುತ್ತಿಲ್ಲ.

ಇದನ್ನೂ ಓದಿ; ದೇವರು ಮನೆ ಗುಡ್ಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವ ಕಂಡು ಪ್ರವಾಸಿಗಳು ಶಾಕ್

ಇದನ್ನೂ ಓದಿ; ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು

ಚಿಕ್ಕಮಗಳೂರು ತಾಲೂಕಿನ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡಿಹೊಂಬಳ ಸರ್ಕಾರಿ ಶಾಲೆಯ ಶಿಕ್ಷಕರ ಕೊರತೆ ಹಾಗೂ ಇರುವ ಓರ್ವ ಶಿಕ್ಷಕನ ವಿರುದ್ಧ ಪೋಷಕರು ಕಿಡಿಕಾರಿದ್ದಾರೆ.

ಅವರೊಬ್ಬರೇ ಅಲ್ಲಿ ಶಿಕ್ಷಕ, ಒಂದೇ ಕೊಠಡಿ, ಐದು ತರಗತಿಗಳು. ಒಂಬತ್ತೇ ಮಕ್ಕಳು. ಎಲ್ಲರಿಗೂ ಒಬ್ಬರೇ ಪಾಠ ಮಾಡೋದಕ್ಕೆ ಕನ್ನಡ, ಹಿಂದಿ, ಇಂಗ್ಲೀಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಎಲ್ಲವಕ್ಕೂ ಅವರೊಬ್ಬರೇ ಮೇಷ್ಟ್ರು, ಶಾಲೆ ಆರಂಭವಾಗಿ 9 ದಿನವಾದರು ಒಂದೇ ಒಂದು ಮಗುವು ಶಾಲೆಗೆ ಬಂದಿಲ್ಲ.

ಇತ್ತೀಚಿನ ಜನಪ್ರಿಯ ಸುದ್ದಿಗಳು

ಪೋಷಕರು ಆ ಮೇಷ್ಟ್ರು ಹೋಗೋತನಕ ಮಕ್ಕಳನ್ನ ಶಾಲೆಗೆ ಕಳಿಸಲ್ಲ ಅಂತಿದ್ದಾರೆ. ಯಾವ ತರಗತಿಯ ಯಾವ ಪಾಠವನ್ನು ಯಾವ ಮಕ್ಕಳು ಕೇಳುತ್ತಾರೆ ಎಂದು ಪಾಠ ಮಾಡುವ ಶಿಕ್ಷಕರಿಗೂ ಗೊತ್ತಿಲ್ಲ. ಕೇಳುವ ಮಕ್ಕಳಿಗೆ ಮೊದಲೇ ಗೊತ್ತಿಲ್ಲ. ಶಾಲೆಗೆ ಸೂಕ್ತ ಕೊಠಡಿ ಹಾಗೂ ಶಿಕ್ಷಕರಿಗಾಗಿ ಸ್ಥಳೀಯರು ಮತ್ತು ಎಸ್.ಡಿ.ಎಂ.ಸಿ ಸದಸ್ಯರು ವರ್ಷಗಳಿಂದ ಮನವಿ ಮಾಡುತ್ತಲೇ ಬಂದಿದ್ದಾರೆ ಆದರೆ, ಮೇಲಾಧಿಕಾರಿಗಳಿಂದ ಇಂದಿಗೂ ಕಾರ್ಯರೂಪಕ್ಕೆ ಬಂದಿಲ್ಲ.

ಈ ಶಾಲೆಯ ಪರಿಸ್ಥಿತಿ ಹೀಗಿರುವಾಗ ಇಲ್ಲಿನ ಶಿಕ್ಷಕರದ್ದು ಮತ್ತೊಂದು ಸಮಸ್ಯೆ, ಶಾಲೆ ಅರಂಭವಾಗಿ ವಾರವಾದರೂ ಮಕ್ಕಳು ಮನೆಯಲ್ಲಿ ಆಟವಾಡಿಕೊಂಡು ಇದ್ದಾರೆಯೇ ವಿನಃ ಶಾಲೆಗೆ ಬರುತ್ತಿಲ್ಲ. ಕಾರಣ ಇಲ್ಲಿನ ಮೇಷ್ಟ್ರು. ಇಡೀ ಶಾಲೆಗೆ ಇರುವುದು ಒಬ್ಬರೇ ಶಿಕ್ಷಕರು. ಅವರು ಬೆಳಗ್ಗೆ 11.30ಕ್ಕೆ ಬಂದರೆ 2.38ಕ್ಕೆ ಮನೆ ಸೇರುತ್ತಾರೆ. ಸಂಜೆ ಮಕ್ಕಳೇ ಶಾಲೆಯ ಬೀಗ ಹಾಕಿಕೊಂಡು ಮನೆಗೆ ಹೋಗಬೇಕು.

ಇದನ್ನೂ ಓದಿ;  ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ

ಹಾಗಾಗಿ ಇಲ್ಲಿನ ಪೋಷಕರು ಶಿಕ್ಷಕ ಚಂದ್ರೇಗೌಡ ಇಲ್ಲಿಂದ ಬೇರೆಡೆಗೆ ಸ್ಥಳಾಂತರಗೊಂಡು ಬೇರೆ ಶಿಕ್ಷಕರು ಬರುವವರೆಗೂ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದು, ಇಲ್ಲಿನ ಶಿಕ್ಷಕರನ್ನು ಬೇರೆ ಕಡೆ ವರ್ಗಾವಣೆ ಮಾಡಿದರೆ ಶಾಲೆಗೆ ಮಕ್ಕಳ ಸಂಖ್ಯೆಯೂ ಹೆಚ್ಚುತ್ತದೆ ಶಾಲೆಯು ಉಳಿಯುತ್ತೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರು:  ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ನೇಮಕ

0

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ.ಜೆ ಜಾರ್ಜ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಇದನ್ನೂ ಓದಿ; ದೇವರು ಮನೆ ಗುಡ್ಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವ ಕಂಡು ಪ್ರವಾಸಿಗಳು ಶಾಕ್

ಇದನ್ನೂ ಓದಿ; ಹಾಸ್ಟೆಲ್ ನಲ್ಲಿ ಬಾಲಕಿ ಅನುಮಾನಾಸ್ಪದ ಸಾವು

ಇಂದು ಅಧಿಸೂಚನೆಯನ್ನು ಹೊರಡಿಸಿದ್ದು, ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಮಾನ್ಯ ಸಚಿವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ, ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಕೆ.ಜೆ ಜಾರ್ಜ್ ಅವರನ್ನು ನೇಮಿಸಿ ಆದೇಶಿಸಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು

* ಎನ್.ಎಸ್. ಭೋಸರಾಜು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಕೆ.ಎನ್.ರಾಜಣ್ಣ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಡಿ.ಕೆ.ಶಿವಕುಮಾರ್ ಮಾನ್ಯ ಉಪ ಮುಖ್ಯಮಂತ್ರಿಗಳು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಡಾ. ಜಿ. ಪರಮೇಶ್ವರ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಎಚ್.ಕೆ. ಪಾಟೀಲ ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಕೆ.ಹೆಚ್. ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ರಾಮಲಿಂಗಾ ರೆಡ್ಡಿ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಎಂ.ಬಿ.ಪಾಟೀಲ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ದಿನೇಶ್ ಗುಂಡೂರಾವ್ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಹೆಚ್.ಸಿ. ಮಹಾದೇವಪ್ಪ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಸತೀಶ್ ಜಾರಕಿಹೊಳಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಪ್ರಿಯಾಂಕ್ ಖರ್ಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಶಿವಾನಂದ ಪಾಟೀಲ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಬಿ. ಜಡ್. ಜಮೀರ್ ಅಹ್ಮದ್ ಖಾನ್ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಶರಣ ಬಸಪ್ಪ ದರ್ಶನಾಪುರ್ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಈಶ್ವರ್ ಬಿ. ಖಂಡ್ರೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಎನ್. ಚಲುವರಾಯಸ್ವಾಮಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಎಸ್.ಎಸ್. ಮಲ್ಲಿಕಾರ್ಜುನ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಸಂತೋಷ ಎಸ್. ಲಾಡ್ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಶರಣ ಪ್ರಕಾಶ್ ಪಾಟೀಲ್ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಆರ್.ಬಿ. ತಿಮ್ಮಾಪೂರ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಕೆ.ವೆಂಕಟೇಶ್ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ತಂಗಡಗಿ ಶಿವರಾಜ್ ಸಂಗಪ್ಪ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಡಿ.ಸುಧಾಕರ್ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಬಿ. ನಾಗೇಂದ್ರ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಬಿ.ಎಸ್. ಸುರೇಶ್ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಶ್ರೀಮತಿ ಲಕ್ಷ್ಮಿ ಹೆಬ್ಬಾಳ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಮಂಕಾಳ ವೈದ್ಯ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
* ಎಂ.ಸಿ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.