KSRTC Special Buses: ಗಣೇಶ ಹಬ್ಬಕ್ಕೆ KSRTC ಯಿಂದ ಗುಡ್ ನ್ಯೂಸ್

KSRTC Special Buses: ಪ್ರತಿ ವರ್ಷದಂತೆ ಈ ಬಾರಿ ಕೂಡ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ದೂರದ ಊರಿನಿಂದ ತಮ್ಮ ಸ್ವಂತ ಊರುಗಳಿಗೆ ಬರುವ ಹಾಗೂ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ಸುಗಳ ವ್ಯವಸ್ಥೆಯನ್ನು ಮಾಡಲಾಗಿದೆ.

ಇದನ್ನೂ ಓದಿ; ಕುಸಿಯುತ್ತಿದೆ ಚಿನ್ನದ ಬೆಲೆ; ಇಲ್ಲಿದೆ ನೋಡಿ ಇಂದಿನ ದರ-11.09.2023

1200 ಹೆಚ್ಚುವರಿ ಬಸ್ ಸೌಲಭ್ಯ:
ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 1200 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 15, 16 ಹಾಗೂ 17 ವಾರಾಂತ್ಯ ದಿನಗಳು ಹಾಗೂ ಸೆಪ್ಟೆಂಬರ್ 18 ಗೌರಿ ಗಣೇಶ ಹಬ್ಬವಿದೆ. ಪ್ರತಿ ವರ್ಷದಂತೆಯೇ ಈ ವರ್ಷವೂ ಕೆಎಸ್‌ಆರ್‌ಟಿಸಿ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ. ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ 200 ಹೆಚ್ಚುವರಿ ಬಸ್‌ಳನ್ನು ರಸ್ತೆಗಿಳಿಯುತ್ತಿದೆ.

ಹಾಗಾದರೆ ಬೆಂಗಳೂರಿನಿಂದ ಯಾವೆಲ್ಲ ಊರಿಗೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ:
* ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೆಚ್ಚುವರಿಯಾಗಿ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.

* ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ವಿಶೇಷ ಬಸ್ ಗಳು ತೆರಳುತ್ತವೆ.

KSRTC Special Buses:
KSRTC Special Buses:

ಇದನ್ನೂ ಓದಿ; ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?

* ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆ ಬಸ್ ಗಳು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಹೊರಡಲಿವೆ.

ಪ್ರಯಾಣಿಕರ ಗಮನಕ್ಕೆ;(KSRTC Special Buses:) 
* ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸಬೇಕು.
* ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಘೋಷಿಸಿದೆ.

ಇದನ್ನೂ ಓದಿ; ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು

ವೆಬ್‌ಸೈಟ್‌ನಲ್ಲಿ ಮಾಹಿತಿ:
ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಮಾಹಿತಿಯನ್ನು ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ. ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಕೊಪ್ಪ: ಫೋಟೋ ವೈರಲ್ ಹಿನ್ನಲೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ; ಮುಸ್ಲಿಂ ಯುವಕರ ಜೊತೆ ಹೋಗಿದ್ದಾಳೆಂದು ನೈತಿಕ ಪೊಲೀಸ್ ಗಿರಿ
  2. ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
  3. ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
  4. ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
  5. ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್‌..!;  ಆಫರ್‌ ತಿಳಿದ್ರೆ ವಾವ್ ಅಂತೀರಾ!?
  6. ಬಾಯಲ್ಲಿ ನೀರು ತರಿಸುವ ರಸಗುಲ್ಲ; ಅತ್ಯಂತ ಸರಳ ವಿಧಾನ
  7. ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್; ಏನದು ಗುಡ್ ನ್ಯೂಸ್
  8. ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?;  ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
  9. ಭಾರತದಲ್ಲಿ ಭರ್ಜರಿ ಹೂಡಿಕೆ ಮಾಡಲಿರುವ ಅಮೆಜಾನ್
  10. ಶವಸಂಸ್ಕಾರದ ವೇಳೆ ನೀರಿನ ಮಡಕೆಯನ್ನು ಒಡೆಯಲು ಕಾರಣವೇನು ಗೊತ್ತೇ…?; ಇಲ್ಲಿದೆ ನೋಡಿ ಅನೇಕರಿಗೆ ತಿಳಿಯದ ಮಾಹಿತಿ….
  11. ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ?;  ಯಾವುದೆಲ್ಲಾ ದಾಖಲೆಗಳು ಬೇಕು
  12. ಕಾರಿದ್ದವರ ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಬಿಗ್ ಅಪ್ಡೇಟ್ ಕೊಟ್ಟ ಸರ್ಕಾರ; ನಿಮ್ಮ ಮನೆಯಲ್ಲಿ ಕಾರ್ ಇದ್ದರೆ ರೇಷನ್ ಕಾರ್ಡ್ ಏನಾಗುತ್ತೆ?
  13. ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ವಾ?; ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಆಗಬೇಕಾ?; ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಬಂಪರ್ ಆಫರ್ ನೀಡಿದ ಸರ್ಕಾರ
  14. ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?;  ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
  15. ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
  16. ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
  17. ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
  18. ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ;  ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
  19. ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು;  ಟಿಕೆಟ್ ದರ ಎಷ್ಟು ಗೊತ್ತಾ?
  20. intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇