Friday, June 9, 2023
Homeರಾಜಕೀಯಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ನೇಮಕ;

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ನೇಮಕ;

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶವನ್ನು ಹೊರಡಿಸಿದೆ.

ಆಗಸ್ಟ್ 2 ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರಿಗೆ ಗುತ್ತಿಗೆ ಆಧಾರದ ಮೇಲೆ ಗುರುಲಿಂಗಸ್ವಾಮಿ ಅವರನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಗುರುಲಿಂಗಸ್ವಾಮಿ ಅವರು ವಿಜಯವಾಣಿ ಸೇರಿದಂತೆ ಹಲವು ಪತ್ರಿಕೆ ಮತ್ತು ಟಿವಿ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದವರಾಗಿದ್ದಾರೆ.

Most Popular

Recent Comments