ಹುಬ್ಬಳ್ಳಿ: ಸಿದ್ದರಾಮಯ್ಯ ನವರ ಮೇಲೆ ನನಗೆ ಗೌರವವಿದೆ ಆದರೆ ಇತ್ತೀಚಿನ ವರ್ತನೆ ಬೇಸರ ತರಿಸುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ನವರ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದರು.
ಪಕ್ಷದ ಕಾರ್ಯಕ್ರಮವೊಂದಕ್ಕೆ ಇಂದು ಬೆಳಗಾವಿಗೆ ತೆರಳಿ ಆದರ್ಶ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯನವರ ವರ್ತನೆಯಿಂದ ಬೇಸರವಾಗುತ್ತಿದೆ ಎಂದು ಹೇಳಿದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನವರು ಸಿಎಂ ಬೊಮ್ಮಾಯಿ ಪದೇ ಪದೇ ಸುಳ್ಳುಗಳನ್ನು ಹೇಳುತ್ತಾ ಬಂದಿದ್ದಾರೆ ಎಂದು ಇತ್ತೀಚೆಗೆ ನೀಡಿದ್ದ ಹೇಳಿಕೆ ಬಹಳ ಬೇಸರವನ್ನು ತಂದಿದೆ ಅವರ ಮೇಲೆ ನನಗೆ ಅಪಾರವಾದ ಗೌರವ ಭಾವನೆಯಿದೆ ಎಂದು ಬೇಸರ ವ್ಯಕ್ತ ಪಡಿಸಿದರು.