BPL-APL RATION CARD: ಹೊಸ ಪಡಿತರ ಚೀಟಿಗೆ ಬ್ರೇಕ್

(BPL-APL RATION CARD) ಲೋಕಸಭೆ ಚುನಾವಣೆ ಮುಗಿದ ಬಳಿಕ ಹೊಸ ಪಡಿತರ ಚೀಟಿ ದೊರೆಯುವ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ ಎದುರಾಗಿದೆ. ಹೌದು, ಹೊಸದಾಗಿ BPL ಹಾಗೂ APL ಕಾರ್ಡ್ ಗಳನ್ನು ನಿಗದಿಗಿಂತ ಹೆಚ್ಚುವರಿ ಮಂಜೂರು ಮಾಡಬಾರದು, 3 ತಿಂಗಳಿಂದ ರೇಷನ್ ಪಡೆಯದ ಕಾರ್ಡ್ಗಳನ್ನು ರದ್ದು ಮಾಡಬೇಕು. ಬಾಕಿ ಉಳಿದಿರುವ ಅರ್ಜಿಗಳನ್ನು ಏಕಕಾಲದಲ್ಲಿ ವಿಲೇವಾರಿ ಮಾಡುವಂತಿಲ್ಲ ಎಂಬ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ಇಲಾಖೆಗೆ ಆದೇಶಿಸಿದೆ.


ಇದನ್ನೂ ಓದಿ: ಸರ್ಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್..!; ಮಹತ್ವದ ಆದೇಶ ಕೊಟ್ಟ ಸಿಎಂ ಸಿದ್ದರಾಮಯ್ಯ!


ಹೊಸದಾಗಿ ಹಲವು ನಿಬಂಧನೆಗಳನ್ನು ಹೇರಿದ ಸರ್ಕಾರ:
2023 ರ ಮೇ ನಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿತ್ತು. ಇದರಿಂದಾಗಿ ಪಡಿತರ ಚೀಟಿ ವಿತರಣೆ, ಹೆಸರು ಸೇರ್ಪಡೆ, ತಿದ್ದುಪಡಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಅಂದಿನಿಂದ ಈವರೆಗೆ ಬಾಕಿ ಅರ್ಜಿಗಳ ವಿಲೇವಾರಿಗೆ ಸರ್ಕಾರ ಅನುಮತಿ ಕೊಟ್ಟಿಲ್ಲ. ಹೀಗಾಗಿ, ಬಾಕಿ ಅರ್ಜಿಗಳ ವಿಲೇವಾರಿಗೆ ಅನುಮತಿ ಕೋರಿ ಸರ್ಕಾರಕ್ಕೆ ಆಹಾರ ಇಲಾಖೆ ಪತ್ರ ಬರೆದಿತ್ತಾದರೂ ಸರ್ಕಾರ ಅನುಮತಿ ನೀಡಿರಲಿಲ್ಲ. ಆದರೀಗ ಹೊಸದಾಗಿ ಹಲವು ನಿಬಂಧನೆಗಳನ್ನು ಹೇರಿದೆ. ಈ ನಿಯಮಗಳನ್ನು ಪಾಲಿಸಿಯೇ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಸರ್ಕಾರ ಅಧಿಕಾರಿಗಳಿಗೆ ತಿಳಿಸಿದೆ. ನಿಯಮ ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ಕೊಟ್ಟಿದೆ. ಹೀಗಾಗಿ ಹೊಸ ರೇಷನ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವವರಿಗೆ ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸುತ್ತಿರುವವರಿಗೆ ಭಾರಿ ನಿರಾಸೆಯಾಗಿದೆ.


ಇದನ್ನೂ ಓದಿ: ಒಂದೇ ವಾರದಲ್ಲಿ ಹೂಡಿಕೆದಾರರಿಗೆ ಲಕ್ಷ ಲಕ್ಷ ಲಾಭ..!; ಷೇರು ಮಾರುಕಟ್ಟೆ ಹೀಗೆ ಓಡ್ತಿರೋದ್ಯಾಕೆ..?; ಇಲ್ಲಿದೆ ನಾಲ್ಕು ಬೆಸ್ಟ್ ಷೇರುಗಳು..!


ಸರ್ಕಾರ ನಿರ್ಬಂಧ ಹೇರಲು ಕಾರಣಗಳೇನು?:
1 . ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFNA) ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಶೇ.76.04, ನಗರ ಪ್ರದೇಶಗಳಲ್ಲಿ ಶೇ.49.36 ಸೇರಿ ಒಟ್ಟು 3,58,87,666 ಫಲಾನುಭವಿಗಳಿಗೆ 1,03,70,669 ಬಿಪಿಎಲ್ ಕಾರ್ಡ್ ನೀಡಬೇಕೆಂಬ ನಿಯಮವಿದೆ. ಆದರೆ, ರಾಜ್ಯದಲ್ಲಿ ಸದ್ಯ 3,92,54,052 ಫಲಾನುಭವಿಗಳಿಗೆ 1,16,98,551 ರೇಷನ್ ಕಾರ್ಡ್ ನೀಡಲಾಗಿದೆ. ಅಂದರೆ ನಿಗದಿಗಿಂತ ಹೆಚ್ಚುವರಿಯಾಗಿ 13,27,882 ಬಿಪಿಎಲ್ ಕಾರ್ಡ್ ನೀಡಲಾಗಿದೆ.
2. ಹೆಚ್ಚುವರಿ ಕಾರ್ಡ್ ಗಳಿಂದ ಪ್ರತಿ ವರ್ಷ ಸರ್ಕಾರಕ್ಕೆ ನೂರಾರು ಕೋಟಿ ರೂ. ಆರ್ಥಿಕ ಹೊರೆಯಾಗುತ್ತಿದೆ. ಹೀಗಾಗಿ, ಹೊಸ ಬಿಪಿಎಲ್. ಎಪಿಎಲ್ ಮಂಜೂರಾತಿಗೆ ಮಿತಿ ಹೇರಿದೆ.
3. ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ, ಆಧಾರ್ ಕಾರ್ಡ್ ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರು ಸೇರಿಸುವುದು, ಯಾರಾದರೂ ಮೃತಪಟ್ಟರೆ ಅಂಥವರ ಹೆಸರು ಡಿಲೀಟ್, ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ವರ್ಗಾವಣೆ ಹಾಗೂ ವಿಳಾಸ ಪರಿಷ್ಕರಣೆ ಮಾಡುವುದನ್ನೂ ಸ್ಥಗಿತಗೊಳಿಸಲಾಗಿದೆ.


ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಅರ್ಜಿ‌ಸಲ್ಲಿಸಬೇಕಾ..?; ಹೊಸ ರೇಷನ್ ಕಾರ್ಡ್ Apply ಮಾಡೋದು ಹೇಗೆ.. ಏನೆಲ್ಲಾ ಬೇಕು?


ನಿರ್ಬಂಧದಿಂದ ಜನರಿಗೇನು ಸಮಸ್ಯೆ?:
* ಹೊಸದಾಗಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ.
* ಹೃದಯ ಸಮಸ್ಯೆ ಸೇರಿ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ತೊಂದರೆ.
* ಆಸ್ಪತ್ರೆಯಲ್ಲಿ ಲಕ್ಷಾಂತರ ರೂ. ಬಿಲ್ ಹೊರೆ.
* ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಸವಲತ್ತು ಸಿಗುವುದಿಲ್ಲ.
* ಪಿಂಚಣಿ, ಹೊಸ ಮನೆ ಸೌಲಭ್ಯವೂ ದೊರೆಯುವುದಿಲ್ಲ.
* ಸರ್ಕಾರದಿಂದ ಸಿಗಬೇಕಿದ್ದ ಎಲ್ಲ ಸೌಲಭ್ಯದಿಂದ ವಂಚಿತ.
* ಉಚಿತ ಅಕ್ಕಿಯೂ ಕೂಡ ದೊರೆಯುವುದಿಲ್ಲ.


ಇದನ್ನೂ ಓದಿ: ಬರ ಪರಿಹಾರ ಹಣ; NDRF ನಿಂದ ಬಂದ ಹಣ ಶೀಘ್ರ ರೈತರ ಖಾತೆಗೆ ಜಮೆ


ಎಪಿಎಲ್ ಕಾರ್ಡ್ ಹೊಂದಿರುವವರಿಗೂ ಕಂಡಿಷನ್?
1. ರಾಜ್ಯದಲ್ಲಿ 24 ಲಕ್ಷ ಎಪಿಎಲ್ ಕಾರ್ಡ್ಗಳಿದ್ದು, ಶೇ.80 ಕಾರ್ಡ್ ದಾರರು ರೇಷನ್ ಪಡೆಯುತ್ತಿಲ್ಲ.
2. ರೇಷನ್ ಪಡೆಯದ ಕಾರ್ಡ್ ಗಳಿಗೆ ರೇಷನ್ ನಿಲ್ಲಿಸಲು ಆಹಾರ ಇಲಾಖೆ ನಿರ್ಧಾರ.
3. ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಗುರುತಿನ ಚೀಟಿಗಾಗಿ ಮಾತ್ರವೇ ಅಥವಾ ರೇಷನ್ ಗಾಗಿಯೋ ಎಂಬುದನ್ನೂ ಪ್ರತ್ಯೇಕವಾಗಿ ನಮೂದಿಸಿ ಮಂಜೂರು.
4. ಕೇವಲ ಗುರುತಿನ ಚೀಟಿಗೆ ಕಾರ್ಡ್ ಪಡೆಯುವವರಿಗೆ ರೇಷನ್ ಸಿಗುವುದಿಲ್ಲ.
5. ಎಪಿಎಲ್ ಗೆ ವ್ಯಯಿಸುತ್ತಿರುವ ಅನುದಾನ ಕಡಿತಗೊಳಿಸಿ ಬಿಪಿಎಲ್ ದಾರರಿಗೆ ಬೇರೆ ರೇಷನ್ ನೀಡುವ ಚಿಂತನೆ.

BPL-APL RATION CARD: ಹೊಸ ಪಡಿತರ ಚೀಟಿಗೆ ಬ್ರೇಕ್
BPL-APL RATION CARD: ಹೊಸ ಪಡಿತರ ಚೀಟಿಗೆ ಬ್ರೇಕ್

ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ; ಈ ಕಂಪನಿಯ ವಾಹನ ಮಾಲೀಕರಿಗೆ ಸಂಕಷ್ಟ; ಯಾಕೆ? ಇಲ್ಲಿದೆ ನೋಡಿ ಡಿಟೈಲ್ಸ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
    3. ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
    4. ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
    5. ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
    6. ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
    7. ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
    8. ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ತಪ್ಪದೆ ಈ ಸುದ್ದಿ ಓದಿ
    9. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    10. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ